ಮಾ.5ಕ್ಕೆ ದೊಡ್ಡ ಮಳೂರಿನಲ್ಲಿ ಬಮೂಲ್‌ ಉತ್ಸವ

ಸುದ್ದಿಗೋಷ್ಠಿಯಲ್ಲಿ ಬಮೂಲ್‌ ನಿರ್ದೇಶಕ ಜಯಮುತ್ತು ದಿನಾಂಕ ಪ್ರಕಟ

Team Udayavani, Mar 1, 2020, 6:10 PM IST

1-March-23

ಚನ್ನಪಟ್ಟಣ: ಬೆಂಗಳೂರು ಸಹಕಾರ ಹಾಲು ಒಕ್ಕೂಟದ ವತಿಯಿಂದ ಮಾ.5ರಂದು ತಾಲೂಕಿನ ದೊಡ್ಡಮಳೂರಿನಲ್ಲಿ ಬಮೂಲ್‌ ಉತ್ಸವ ಆಯೋಜಿಸಲಾಗಿದೆ ಎಂದು ಬಮೂಲ್‌ ನಿರ್ದೇಶಕ ಎಚ್‌.ಸಿ.ಜಯಮುತ್ತು ತಿಳಿಸಿದರು.

ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಉತ್ಸವದಲ್ಲಿ ರಾಸುಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕೃಷಿ ಮೇಳ ಆಯೋಜಿಸಲಾಗಿದ್ದು, ಸುಮಾರು 15 ಸಾವಿರ ಹಾಲು ಉತ್ಪಾದಕ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಮೂಲ್‌ ವತಿಯಿಂದ ಸಿಗಬೇಕಿರುವ ಎಲ್ಲ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವುದು ಉತ್ಸವದ ಉದ್ದೇಶವಾಗಿದೆ ಎಂದರು.

ಉತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿ, ಮಾಜಿ ಪ್ರಧಾನಿ ಎಚ್‌. ಡಿ.ದೇವೇಗೌಡ, ಉಪಮುಖ್ಯಮಂತ್ರಿ ಡಾ.ಅಶ್ವಥ್‌ ನಾರಾಯಣ್‌, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮಂತ್ರಿ ಡಿ.ಕೆ. ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌, ಕೆಎಂಎಫ್‌, ಬಮೂಲ್‌ನ ಅಧ್ಯಕ್ಷರು, ನಿರ್ದೇಶಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಮೂಲ್‌ ಕಲ್ಯಾಣ ಟ್ರಸ್ಟ್‌ ವತಿಯಿಂದ ವಿದ್ಯಾರ್ಥಿಗಳಿಗೆ 12.50 ಲಕ್ಷ ರೂ. ಪ್ರತಿಭಾ ಪುರಸ್ಕಾರ ಚೆಕ್‌ ವಿತರಣೆ, ಆಯ್ದ ಸರ್ಕಾರಿ ಶಾಲೆಗಳಿಗೆ ಪೀಠೊಪಕರಣಗಳ ವಿತರಣೆ, ಶುದ್ಧ ಕುಡಿಯುವ ಫಿಲ್ಟರ್‌ ವಿತರಣೆ, ಎಂಪಿಸಿಎಸ್‌ ಸಂಘಗಳಿಗೆ ಕಂಪ್ಯೂಟರ್‌, ಯುಪಿಎಸ್‌ ವಿತರಣೆ, 25 ರೈತರಿಗೆ ಕೊಟ್ಟಿಗೆ ನಿರ್ಮಾಣ ಮಾಡಲು ತಲಾ 50 ಸಾವಿರ ರೂ. ಚೆಕ್‌ ವಿತರಣೆ, ಹಾಲು ಉತ್ಪಾದಕರಿಗೆ ವೈದ್ಯಕೀಯ ಮರುಪಾವತಿಗೆ 5ಲಕ್ಷ ರೂ. ವಿತರಣೆ, ಹಾವು ಕಡಿತದಿಂದ ಅಂಗವಿಕಲನಾದ ರೈತನಿಗೆ 1 ಲಕ್ಷ ರೂ. ಹಾಗೂ ಮೃತ ರಾಸುಗಳ ಪರಿಹಾರದ ಚೆಕ್‌ ವಿತರಿಸಲಾಗುವುದು.

ಬೈರಾಪಟ್ಟಣ ಬಳಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಿಬಿರ ಕಚೇರಿ ಹಾಗೂ ನಂದಿನಿ ಕೂಲ್‌ ಪಾರ್ಲರ್‌ ಕಟ್ಟಡಕ್ಕೆ ಭೂಮಿ ಪೂಜೆ, ಮಿಶ್ರತಳಿ ಕರುಗಳ ಪ್ರದರ್ಶನ ಹಾಗೂ ಬಹುಮಾನ ವಿತರಣೆ, ಹಾಲು ಕರೆಯುವ ಯಂತ್ರ, ಹುಲ್ಲು ಕತ್ತರಿಸುವ ಯಂತ್ರ ಹಾಗೂ ಡೇರಿ ಅಗ್ರಿಕಲ್ಚರ್‌ ಸೆಕ್ಷನ್‌ ವತಿಯಿಂದ ವಿವಿಧ ವಸ್ತುಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಮೂಲ್‌ ಶಿಬಿರ ಉಪವ್ಯವಸ್ಥಾಪಕ ಡಾ.ಕೆಂಪರಾಜು, ಚಂದ್ರಪ್ಪ, ಡಾ.ದೇವರಾಜು, ವಿಸ್ತರಣಾಧಿಕಾರಿಗಳಾದ ಹೊನ್ನಪ್ಪ ಪೂಜಾರಿ, ನಂದಿತ, ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪುಟ್ಟೇಗೌಡ, ಪದಾಧಿಕಾರಿಗಳಾದ ದೇವರಾಜು, ಪುಟ್ಟರಾಜು, ರಮೇಶ್‌, ರವೀಂದ್ರ, ಅನಿಲ್‌ ಕುಮಾರ್‌, ಬಿಳಿಗೌಡ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.