ವಿಶ್ವಾದ್ಯಂತ ಕೊರೊನಾಗೆ 2,900 ಬಲಿ, 86 ಸಾವಿರ ದಾಟಿದ ಸೋಂಕಿತರ ಸಂಖ್ಯೆ


Team Udayavani, Mar 1, 2020, 7:21 PM IST

corona-virus-case-min

ಬೀಜಿಂಗ್‌/ನವದೆಹಲಿ: ಚೀನಾದಲ್ಲಿ ಆರಂಭವಾದ ಕೊರೊನಾ ಆತಂಕ ಈಗ 60ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದು, ಜಾಗತಿಕವಾಗಿ 2,900 ಮಂದಿ ಈ ವೈರಸ್‌ಗೆ ಬಲಿಯಾಗಿದ್ದಾರೆ. ಜತೆಗೆ ಸುಮಾರು 86 ಸಾವಿರ ಮಂದಿಗೆ ಸೋಂಕು ತಗುಲಿದ್ದು, ಇವರೆಲ್ಲರೂ ನಿಗಾದಲ್ಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಹೊಸ ವರದಿಯಲ್ಲಿ ತಿಳಿಸಲಾಗಿದೆ. ಚೀನಾವೊಂದರಲ್ಲೇ 2,870 ಮಂದಿ ಮೃತಪಟ್ಟಿದ್ದು, ಇಲ್ಲಿ 79,824 ಸೋಂಕಿತರಿದ್ದಾರೆ.

ಪಾಕ್‌- ಅಫ್ಘಾನ್ ಗಡಿ ಬಂದ್‌:
ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೇರಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅದರಂತೆ, ಅಫ್ಘಾನಿಸ್ತಾನದ ಜೊತೆ ಪಾಕ್‌ ಹೊಂದಿರುವ ಗಡಿಯನ್ನು ಸೋಮವಾರದಿಂದ 7 ದಿನಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ. ಕರಾಚಿ ಸೇರಿದಂತೆ ಸಿಂಧ್‌ ಪ್ರಾಂತ್ಯದ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.

ಇರಾನ್‌ಗೆ ಹೆಚ್ಚಿದ ಆತಂಕ:
ಇರಾನ್‌ನಲ್ಲೂ ಕೋವಿಡ್‌-19 ವೈರಸ್‌ ವ್ಯಾಪಕವಾಗಿ ಹಬ್ಬುತ್ತಿದ್ದು, ಭಾನುವಾರ ಒಂದೇ ದಿನ 11 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ವೈರಸ್‌ಗೆ ಬಲಿಯಾದವರ ಸಂಖ್ಯೆ 54ಕ್ಕೇರಿದ್ದು, 978 ಮಂದಿಗೆ ಸೋಂಕು ತಗುಲಿದೆ. ಐರ್ಲೆಂಡ್‌ನ‌ಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕೊರಿಯಾದಲ್ಲಿ 376 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,526ಕ್ಕೇರಿದೆ.

ಮೊದಲ ಸಾವು:
ಜಪಾನ್‌ನ ಡೈಮಂಡ್‌ ಪ್ರಿನ್ಸೆಸ್‌ ನೌಕೆಯಿಂದ ಸ್ವದೇಶಕ್ಕೆ ಮರಳಿದ್ದ 78 ವರ್ಷದ ವ್ಯಕ್ತಿ ಸಿಡ್ನಿಯ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಕೊರೊನಾಗೆ ಮೊದಲ ಬಲಿ ಆದಂತಾಗಿದೆ. ಅಮೆರಿಕದಲ್ಲೂ ವೈರಸ್‌ಗೆ ಮೊದಲ ಸಾವು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇರಾನ್‌, ಇಟಲಿ ಸೇರಿ ಕೆಲವು ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿ ಅಧ್ಯಕ್ಷ ಟ್ರಂಪ್‌ ಆದೇಶ ಹೊರಡಿಸಿದ್ದಾರೆ.

ಕೋಳಿ ಮೇಳ!:
ಕೋಳಿಗಳಿಂದಲೂ ಕೊರೊನಾ ಹಬ್ಬುತ್ತದೆ ಎಂಬ ವದಂತಿಯನ್ನು ಸುಳ್ಳಾಗಿಸುವ ನಿಟ್ಟಿನಲ್ಲಿ ಗುರುಗ್ರಾಮದಲ್ಲಿ ಕೋಳಿಸಾಕಣೆ ಸಂಘವು “ಕೋಳಿ ಮೇಳ’ವನ್ನು ಆಯೋಜಿಸಿದೆ. ಇಲ್ಲಿ ಒಂದು ಪ್ಲೇಟ್‌ ಚಿಕನ್‌ ಖಾದ್ಯವನ್ನು ತಲಾ 30 ರೂ.ಗಳಂತೆ ಮಾರಾಟ ಮಾಡಲಾಗಿದ್ದು, ಚಿಕನ್‌, ಮಟನ್‌ ಅಥವಾ ಮೀನು ತಿನ್ನುವುದರಿಂದ ವೈರಸ್‌ ಹರಡುವುದಿಲ್ಲ ಎಂದು ತಿಳಿಹೇಳುವ ಕೆಲಸ ಮಾಡಲಾಗಿದೆ.

ಮಲೇಷ್ಯಾದಿಂದ ಬಂದಿದ್ದ ವ್ಯಕ್ತಿ ಕೇರಳದಲ್ಲಿ ಸಾವು
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಂಥ ಮಲೇಷ್ಯಾದಿಂದ ಇತ್ತೀಚೆಗೆ ಹುಟ್ಟೂರು ಕೇರಳಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಎರ್ನಾಕುಳಂ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ಆದರೆ, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ, ನೆಗೆಟಿವ್‌ ಎಂದು ವರದಿ ಬಂದಿದೆ. ಆ ವ್ಯಕ್ತಿಯು ಉಸಿರಾಟದ ತೊಂದರೆ, ನ್ಯುಮೋನಿಯಾದಿಂದ ಬಳಲುತ್ತಿದ್ದರು. ಜತೆಗೆ ಅವರಿಗೆ ಸಕ್ಕರೆ ಕಾಯಿಲೆಯೂ ಇತ್ತು ಎಂದು ವೈದ್ಯರು ಹೇಳಿದ್ದಾರೆ.

ನಾಸಿಕ್‌ನಲ್ಲಿ ವ್ಯಕ್ತಿ ಮೇಲೆ ನಿಗಾ
ಇಟಲಿಯಿಂದ ಆಗಮಿಸಿದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತೀವ್ರ ನಿಗಾದಲ್ಲಿ ಇರಿಸಲಾಗಿದೆ. ವ್ಯಾಸಂಗಕ್ಕೆಂದು ಇಟಲಿಗೆ ಹೋಗಿದ್ದ ಈತ ಫೆ.26ರಂದು ಸ್ವದೇಶಕ್ಕೆ ಮರಳಿದ್ದ. ಆತನಿಗೆ ಕಫ‌, ನೆಗಡಿ ಹಾಗೂ ತೀವ್ರ ಬಳಲಿಕೆ ಕಂಡುಬಂದ ಕಾರಣ, ನಿಗಾದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.