ಮಾರುದ್ದ ಸ್ಥಳದಲ್ಲಿ ಅಂಗನವಾಡಿ

Team Udayavani, Mar 2, 2020, 4:31 PM IST

KOPALA-TDY-3

ಕುಷ್ಟಗಿ: ಪಟ್ಟಣದ 2ನೇ ವಾರ್ಡ್‌ನ ಬುತ್ತಿ ಬಸವೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ದಶಕ ಕಳೆದರೂ ಬಾಡಿಗೆ ಕಟ್ಟಡವೇ ಗತಿಯಾಗಿದೆ.

ಬುತ್ತಿ ಬಸವೇಶ್ವರ ನಗರದ ಶ್ರೀ ಅನ್ನದಾನೇಶ್ವರ ಕಾಲೇಜಿನ ಹೊಸ ಕಟ್ಟಡದ ಹಿಂಭಾಗದ ಮನೆಯೊಂದರ ಐದಾರು ಅಡಿಗೆ ಸೀಮಿತವಾದ ವಾಣಿಜ್ಯ ಮಳಿಗೆಯೇ ಸದ್ಯ ಅಂಗನವಾಡಿ ಕೇಂದ್ರವಾಗಿದೆ. ಅಂಗನವಾಡಿಗೆ ಪೂರೈಸಿದ ಆಹಾರ ಪದಾರ್ಥ, ಸಾಮಾಗ್ರಿ, ಸರಂಜಾಮುಗಳ ಸಂಗ್ರಹ, ಅಡುಗೆ ತಯಾರಿಕೆ. ಮಕ್ಕಳ ಆಟ, ಊಟ, ಪಾಠ ಎಲ್ಲದಕ್ಕೂ ಇದರಲ್ಲೇ ವ್ಯವಸ್ಥೆ ಮಾಡಬೇಕು.

ಈ ಅಂಗನವಾಡಿಯಲ್ಲಿ 20 ಮಕ್ಕಳಿದ್ದಾರೆ. ಸರಾಸರಿ ಹಾಜರಾತಿ 15 ಸಾಮಾನ್ಯವಾಗಿರುತ್ತದೆ. ತೀರ ಇಕ್ಕಟ್ಟಾದ ಸ್ಥಳಾವಕಾಶ, ಕೇಂದ್ರದ ಮುಂದಿರುವ ರಸ್ತೆಯಿಂದಾಗಿ ಮಕ್ಕಳು ಆಟವಾಡಲು ಜಾಗೆ ಇಲ್ಲ. ಮಕ್ಕಳ ಮಧ್ಯೆ ಗ್ಯಾಸ್‌ ಸ್ಟೌವ್‌ ಹೊತ್ತಿಸಿ ಊಟ ತಯಾರಿಸುವ ಅನಿವಾರ್ಯತೆ ಇದೆ. ಅಂಗನವಾಡಿ ಕಾರ್ಯಕರ್ತೆ ಬಸಮ್ಮ ಮಕ್ಕಳೊಟ್ಟಿಗೆ ಅಂಟಿಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ಇದೆ. ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಬೇಕಾದರೆ ವಾರ್ಡ್‌ನಲ್ಲಿ ದುಬಾರಿ ಬಾಡಿಗೆ ಭರಿಸಬೇಕು. ಅಂಗನವಾಡಿಗೆ ಬಾಡಿಗೆ ಮನೆ ನೀಡಲು ನಿರಾಕರಿಸುತ್ತಿದ್ದು, ಏನೂ ಮಾಡದ ಅಸಹಾಯಕ ಪರಿಸ್ಥಿತಿಗೆ ಕಾರಣವಾಗಿದೆ.

ಹೆಸರಿಗೆ ನಿವೇಶನ: ಈ ಅಂಗನವಾಡಿ ಕಟ್ಟಡಕ್ಕಾಗಿ ವಾರ್ಡ್‌ ವ್ಯಾಪ್ತಿಯಲ್ಲಿರುವ ನಾಲೆಯ ಖಾಲಿ ಜಾಗೆಯನ್ನು ಸ್ಥಳೀಯರು ಗುರುತಿಸಿದ್ದಾರೆ. ಕಳೆದ ವರ್ಷ ಫೆ. 19ರಂದು ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಖಾಲಿ ಜಾಗೆಯಲ್ಲಿ ಅಂಗನವಾಡಿ ಕಟ್ಟಡಕ್ಕಾಗಿ ಠರಾವು ಅಂಗೀಕರಿಸಲಾಗಿದೆ. ನಕಾಶೆ ಸವಿರದ ದಾಖಲಾತಿಯೊಂದಿಗೆ ಮುಂದಿನ ಆದೇಶಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಎರಡು ಬಾರಿ ಅರ್ಜಿ ಸಲ್ಲಿಸಲಾಗಿದೆ. ಸಲ್ಲಿಸಿದ ಅರ್ಜಿಗೆ ಜಿಲ್ಲಾ ಧಿಕಾರಿ ಕಚೇರಿಯಿಂದ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪುರಸಭೆ ಪತ್ರ ವ್ಯವಹಾರದಿಂದ ಪುನಃ ಜಿಲ್ಲಾ ಧಿಕಾರಿ ಗಮನ ಸೆಳೆಯುವ ಪ್ರಯತ್ನ ಮಾಡಿಲ್ಲ. ಕಡೇ ಪಕ್ಷ ಸ್ಥಳೀಯ ಪುರಸಭೆ ನಾಲೆಯ ಜಾಗೆಯ ಸರಹದ್ದು ಗುರುತಿಸಿ, ಅತಿಕ್ರಮಣ ತಡೆಗೆ ಸುತ್ತಲೂ ತಂತಿ ಬೇಲಿ ಹಾಕುವ ಪ್ರಯತ್ನಕ್ಕೂ ಕೈ ಹಾಕಿಲ್ಲ. ಹೀಗಾಗಿ ಈ ನಿವೇಶನದಲ್ಲಿ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಿಸುವ ಕನಸು ಹಾಗೆಯೇ ಉಳಿದಿದ್ದು, ಜಿಲ್ಲಾಧಿ ಕಾರಿಗಳು ಮನಸ್ಸು ಮಾಡಿದರೆ ಸಾಧ್ಯವಿದೆ.

2ನೇ ವಾರ್ಡ್‌ನಲ್ಲಿ ಪುರಸಭೆ ಜಾಗೆ ಅಳತೆ, ಸೂಕ್ತ ದಾಖಲೆಗಳನ್ನು ನೀಡಿದರೆ ಅಂಗನವಾಡಿ ಕೇಂದ್ರವನ್ನು ಆದ್ಯತೆಯಿಂದ ನಿರ್ಮಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ವೀರೇಂದ್ರ ನಾವದಗಿ ತಿಳಿಸಿದ್ದಾರೆ.

2ನೇ ವಾರ್ಡ್‌ ಅಂಗನವಾಡಿ ಕಟ್ಟಡಕ್ಕೆ ಕಳೆದ ಅವಧಿ ಯಲ್ಲಿ ಅನುದಾನ ಮಂಜೂರಾಗಿದ್ದು, ಆದರೆ ನಾಲೆಯ ನಿವೇಶನದ ಸೂಕ್ತ ದಾಖಲಾತಿಗಳನ್ನು ಸಲ್ಲಿಸದೇ ಇರುವುದು ಅನುದಾನ ವಾಪಸ್ಸಾಗಿದೆ. ಈ ಕುರಿತಾಗಿ ಜಿಲ್ಲಾಡಳಿತ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಖುದ್ದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸೂಕ್ತ ದಾಖಲಾತಿಗಳನ್ನು ನೀಡಿದರೆ ಮಾತ್ರ ಪುನಃ ಅನುದಾನ ಮಂಜೂರಿಯ ಭರವಸೆ ನೀಡಿದ್ದು, ಈ ನಿಟ್ಟಿನಲ್ಲಿ ಪ್ರಯತ್ನದಲ್ಲಿರುವೆ. ರಾಜೇಶ ಪತ್ತಾರ, ಪುರಸಭೆ ಸದಸ್ಯ

-ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.