ಪರಿಹಾರದಲ್ಲಿ ತಾರತಮ್ಯ ಖಂಡಿಸಿ ಪ್ರತಿಭಟನೆ

Team Udayavani, Mar 3, 2020, 3:15 PM IST

bk-tdy-1

ಬನಹಟ್ಟಿ: ಕೃಷ್ಣೆಯ ಪ್ರವಾಹದಿಂದ ತತ್ತರಿಸಿದ ಜನರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸಂತ್ರಸ್ತರ ಪರಿಹಾರಕ್ಕೆ ಸಂಬಂಧ ರಬಕವಿ-ಬನಹಟ್ಟಿ ತಾಲೂಕಿನಾದ್ಯಂತ ಸಮರ್ಪಕವಾಗಿ ಸರ್ವ ಕಾರ್ಯ ನಡೆದಿಲ್ಲ. ಕೆಲ ಅರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸಂತ್ರಸ್ತರ ಕಣ್ಣೀರು ಒರೆಸಬೇಕು. ಹಲವು ಮನೆಗಳಿಗೆ ಪರಿಹಾರ ಸಮರ್ಪಕವಾಗಿ ದೊರೆತಿಲ್ಲ. ಬೆಳೆಗಳಿಗೆ ಸೂಕ್ತ ಪರಿಹಾರ ದೊರೆಯದೇ ರಾಜಕೀಯ ಪ್ರೇರಿತವಾಗಿ ತಾರತಮ್ಯ ಎಸಗಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

ಕೃಷ್ಣೆಯ ಪ್ರವಾಹದಲ್ಲಿ ಗುಲ್ಲಿ ಮಳ್ಳಿ ಪ್ರದೇಶವೇ ಕೊಚ್ಚಿ ಹೋಗಿತ್ತು. ಅಂಥಹ ಪ್ರದೇಶದಲ್ಲಿ ವಾಸಿಸುವ 40 ಕ್ಕೂ ಅಧಿ ಕ ಕುಟುಂಬಗಳ ಪೈಕಿ ಅನೇಕ ಕುಟುಂಬಗಳಿಗೆ ಪರಿಹಾರ ದೊರಕದಿರುವುದು ವಿಪರ್ಯಾಸದ ಸಂಗತಿ. ಪರಿಹಾರ ವಿತರಣೆಯಲ್ಲಿಯೂ ರಾಜಕೀಯ ವೈಷಮ್ಯ ಸಲ್ಲದು ಎಂದು ಹನಗಂಡಿಯ ನೀಲೇಶ ದೇಸಾಯಿ ಬೇಸರ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಮಾತನಾಡಿ, ಬೆಳೆ ಪರಿಹಾರಕ್ಕೆ ಸಂಬಂಧ ತಾಂತ್ರಿಕ ದೋಷ ಕಾರಣ ವಿಳಂಬವಾಗುತ್ತಿದೆ. ಈಗಾಗಲೇ ಪ್ರವಾಹ ಪೀಡಿತ ಪ್ರದೇಶದಲ್ಲಿನ ಸಂತ್ರಸ್ತ ಕುಟುಂಬಗಳಿಗೆ ಪ್ರಾಮಾಣಿಕವಾಗಿ ಪರಿಹಾರ ಒದಗಿಸಲಾಗಿದ್ದು, ಇನ್ನೂ ಕೆಲ ಕುಟುಂಬಗಳ ಪರಿಶೀಲನೆ ಮಾಡಲಾಗಿದೆ. ಅರ್ಜಿ ಸ್ವೀಕಾರ ಸಂದರ್ಭ ವಿಳಂಬವಾದಲ್ಲಿ ಅಂಥವರನ್ನೂ ಗುರುತಿಸಿ ಪರಿಹಾರ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಸಂತ್ರಸ್ತರ ನೆರವಿಗೆ ಸಂದರ್ಭ ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್‌ ಸಂಬಂ ಧಿಸಿದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ನಿರ್ಲಕ್ಷ್ಯವಾಗಿದೆ. ತಾರತಮ್ಯ ಎಸಗದೆ ಎಲ್ಲ ಸಂತ್ರಸ್ತರಿಗೂ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಡಾ| ಪದ್ಮಜೀತ ನಾಡಗೌಡ ಒತ್ತಾಯಿಸಿದರು.

ಶಂಕರ ಸೊರಗಾಂವಿ, ರಾಜು ದೇಸಾಯಿ, ರವಿ ಬಾಡಗಿ, ಶಂಕರ ಜಾಲಿಗಿಡದ, ಸುಕುಮಾರ ದೇಸಾಯಿ, ಕುಮಾರ ಬಿಳ್ಳೂರ, ಸಿದ್ದಪ್ಪ ಸೊರಗಾಂವಿ, ಶ್ರೀಶೈಲ ಮೇಣಿ, ಸತ್ಯಪ್ಪಮಗದುಮ್‌, ಚಿದಾನಂದ ಮಟ್ಟಿಕಲ್ಲಿ, ದುಂಡಪ್ಪ ಕರಿಗಾರ, ಮಾಳು ಹಿಪ್ಪರಗಿ, ಸಣ್ಣಕ್ಕಿ, ಕುಮಾರ ಬಿಳ್ಳೂರ, ಸಂಜು ಅಮ್ಮಣಗಿ ಅನೇಕರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.