ಡಾ.ಅಂಬೇಡ್ಕರ್‌ ಭವನಕ್ಕೆ ಸಿಗುವುದೇ ಉದ್ಘಾಟನೆ ಭಾಗ್ಯ?

Team Udayavani, Mar 4, 2020, 3:00 AM IST

dr-ambedkar

ಕೊಳ್ಳೇಗಾಲ: ಕಳೆದ 2002ರಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಆರಂಭವಾದ ಕಾಮಗಾರಿ ಇದುವರೆಗೂ ಪೂರ್ಣಗೊಳ್ಳದೆ ಉದ್ಘಾಟನೆ ಭಾಗ್ಯವಿಲ್ಲದೆ ಭವನ ಜೂಜು ಮತ್ತು ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದೆ.

ಭವನದ ಕಟ್ಟಡ ಕಾಮಗಾರಿಗೆ ಸುಮಾರು 3.50 ಕೋಟಿ ರೂ. ಖರ್ಚಾಗಿದೆ. ಆದರೂ ಕಟ್ಟಡದ ಸುತ್ತಲೂ ಕಾಂಪೌಂಡ್‌, ಶಾಚಾಲಯಗಳಿಲ್ಲದೇ ಅಪೂರ್ಣಗೊಂಡಿದ್ದು, ಅಕ್ರಮ ಚಟುವಟಿಕೆ ತಾಣವಾಗಿದೆ. ಹೀಗಾಗಿ ಭವನಕ್ಕೆ ಉದ್ಘಾಟನೆ ಭಾಗ್ಯ ಯಾವಾಗ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ್‌ ಪ್ರಸಾದ್‌, 25 ಲಕ್ಷ, ಮಾಜಿ ಕೇಂದ್ರ ಸಚಿವ ದಿ.ರಾಜಶೇಖರ್‌ ಮೂರ್ತಿ ತಮ್ಮ ನಿಧಿಯಿಂದ ಅನುದಾನ ನೀಡಿದ್ದರು.

ಶಾಸಕ ಎಸ್‌.ಬಾಲರಾಜ್‌ 25 ಲಕ್ಷ, ಸಂಸದರಾಗಿದ್ದ ಆರ್‌.ಧ್ರುವನಾರಾಯಣ್‌ 90 ಲಕ್ಷ, ಮಾಜಿ ಶಾಸಕ ಎ.ಆರ್‌.ಕೃಷ್ಣಮೂರ್ತಿ 90 ಲಕ್ಷ ಅನುದಾನ ಕೊಡಿಸಿದ್ದರು. ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರದಿಂದ ಒಂದು ಕೋಟಿ.. ಹೀಗೆ ಹಲವಾರು ಚುನಾಯಿತ ಪ್ರತಿನಿಧಿಗಳು ಅನುದಾನ ನೀಡಿದ್ದಾರೆ. ಆದರೂ ಭವನದಲ್ಲಿ ಸೂಕ್ತ ಮೂಲಸೌಕರ್ಯಗಳಿಲ್ಲ.

ಜತೆಗೆ ಕಾಮಗಾರಿಯಲ್ಲಿ ಹಣ ನುಂಗಿರುವ ಮಾತುಗಳು ಕೇಳುತ್ತಿವೆ ಎಂದು ಜನರು ಆರೋಪಿಸಿದ್ದಾರೆ. ಡಾ. ಅಂಬೇಡ್ಕರ ಭವನ ಉದ್ಘಾಟನೆಗೆ ಸಿದ್ಧತೆ ನಡೆದಿತ್ತು. ಆದರೆ ಡಾ.ಅಂಬೇಡ್ಕರ್‌ ಸ್ಮಾರಕ ಸಂಘದ ಪದಾಧಿಕಾರಿಗಳು ಕೇವಲ ಭವನ ಉದ್ಘಾಟನೆಯಾದರೆ ಸಾಲದು. ಅದರ ಸುತ್ತ ಗೋಡೆ, ಶೌಚಾಲಯ, ರಸ್ತೆ ನಿರ್ಮಿಸಿದ ಬಳಿಕ ಉದ್ಘಾಟಿಸುವಂತೆ ಒತ್ತಡ ಹೇರಿದ್ದರಿಂದ ಉದ್ಘಾಟನೆ ಭಾಗ್ಯ ದೊರೆಯಲಿಲ್ಲ.

ಬಳಿಕ ಹೆಚ್ಚಿನ ಮೂಲಸೌಲಭ್ಯಗಳನ್ನು ಒದಗಿಸಲು ಹೆಚ್ಚುವರಿ 2.40 ಕೋಟಿ ರೂ. ಬೇಕೆಂದು ಭೂಸೇನಾ ನಿಗಮದ ಅಧಿಕಾರಿಗಳು ಅಂದಾಜು ವೆಚ್ಚ ತಯಾರಿಸಿದ್ದಾರೆ. ಈವರೆಗೂ ಸರ್ಕಾರದಿಂದ ಹಣ ಮಂಜೂರಾಗಿಲ್ಲ. ಇನ್ನಾದರೂ ಸಂಬಂಧಿಸಿದವರು ಭವನಕ್ಕೆ ಉದ್ಘಾಟನೆ ಭಾಗ್ಯ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಕೂಡಲೇ ಸಮಾಲೋಚನೆ ನಡೆಸಲಾಗುವುದು ಅಥವಾ ನೂತನ ಬಜೆಟ್‌ನಲ್ಲಿ ಹಣ ಮಂಜೂರಾಗುವಂತೆ ಕ್ರಮಕೈಗೊಳ್ಳಲಾಗುವುದು.
-ಡಾ.ಎಂ.ಆರ್‌.ರವಿ, ಜಿಲ್ಲಾಧಿಕಾರಿ

ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ 2.40 ಕೋಟಿ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ಕೋಟಿ ಮಂಜೂರಾಗಿದ್ದು, ಉಳಿದ 1.40 ಕೋಟಿ ಹಣವನ್ನು ಹೊಸ ಬಜೆಟ್‌ನಲ್ಲಿ ಸೇರಿಸಿ, ಭವನ ಪೂರ್ಣಗೊಳಿಸಿ ಉದ್ಘಾಟನೆ ಮಾಡಲಾಗುವುದು.
-ಎನ್‌.ಮಹೇಶ್‌, ಶಾಸಕ

* ಡಿ.ನಟರಾಜು

ಟಾಪ್ ನ್ಯೂಸ್

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.