ದೂರುಗಳ ತ್ವರಿತ ವಿಲೇವಾರಿಗೆ ಕ್ರಮ: ದತ್ತಾ

ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣ ವಿಚಾರಣೆಹಂದಿ ಮಾಲೀಕರ ವಿರುದ್ಧ ಕ್ರಮಕ್ಕೆ ಸೂಚನೆ

Team Udayavani, Mar 4, 2020, 4:00 PM IST

4–March-21

ಕಲಬುರಗಿ: ಮೂರು ಸದಸ್ಯರ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪೂರ್ಣ ಪೀಠವು ಮಾನವ ಹಕ್ಕುಗಳ ಪ್ರಕರಣಗಳನ್ನು ದೂರು ಆಲಿಸಿದ ಮೂರು ತಿಂಗಳೊಳಗೆ ವಿಲೇವಾರಿ ಮಾಡುವ ಉದ್ದೇಶ ಹೊಂದಿದ್ದು, ಮುಂದಿನ ದಿನಗಳಲ್ಲಿ ಕಲಬುರಗಿ, ಬೀದರ, ಧಾರವಾಡ, ಬೆಳಗಾವಿದಂತಹ ಜಿಲ್ಲಾ ಕೇಂದ್ರಗಳಲ್ಲಿ ಬಾಕಿ ಪ್ರಕರಣಗಳ ವಿಚಾರಣೆ ನಡೆಸಿ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಲು ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕುಮಾರ ದತ್ತಾ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮಾತನಾಡಿದರು. ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ದಾಖಲಾದ ಮೂರು ತಿಂಗಳೊಳಗೆ ವಿಲೇವಾರಿ ಮಾಡುವ ಆಶಯವನ್ನು ಆಯೋಗವು ಹೊಂದಿದೆ. ಪ್ರಕರಣ ದಾಖಲಾದ ನಂತರ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್‌ ನೀಡಿ ಉತ್ತರ ಪಡೆಯಲಾಗುತ್ತದೆ. ಉತ್ತರ ಬಾರದಿದ್ದಾಗ ನೆನಪೋಲೆ, ಸಮನ್ಸ್‌ ನೀಡಲಾಗುತ್ತೆ. ಸಮನ್ಸ್‌ ನೀಡಿದ ನಂತರ ಅಧಿಕಾರಿಗಳು ಸ್ಪಂದಿಸುತ್ತಿದ್ದು, ಇದು ಆಡಳಿತದ ವೈಖರಿಯಲ್ಲ. ಅರ್ಜಿದಾರರಿಗೆ ನ್ಯಾಯ ವಿಳಂಬವಾದರೆ ವ್ಯರ್ಥವಾದಂತೆ ಎಂದರು.

ಸಮನ್ಸ್‌ಗೆ ಕಾಯದೆ ನೋಟಿಸ್‌ ಪಡೆದ ಕೂಡಲೇ ಉತ್ತರ ನೀಡುವ ಪ್ರವೃತ್ತಿ ಅಧಿಕಾರಿಗಳು ಬೆಳೆಸಿಕೊಳ್ಳಬೇಕು. ಬೇರೆ ಜಿಲ್ಲೆಗೆ ಹೋಲಿಸಿದರೆ ಕಲಬುರಗಿಯಲ್ಲಿ ಹೊಸದಾಗಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿಲ್ಲ. ಆದರೆ 5-6 ವರ್ಷಗಳ ಹಿಂದಿನ ಪ್ರಕರಣಗಳಿಗೆ ಮುಕ್ತಿ ನೀಡಬೇಕಾಗಿದೆ ಎಂದರು.

ಕಲಬುರಗಿ ನಗರದಲ್ಲಿ ಹಂದಿಗಳ ಹಾವಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂದಿ ಸಾಕುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ತೆಗೆದುಕೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಕಳುಹಿಸಿಕೊಡಿ ಎಂದು ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ ಅವರಿಗೆ ರೂಪಕುಮಾರ ದತ್ತಾ ನಿರ್ದೇಶನ ನೀಡಿದರು. ರಾಜ್ಯ ಮಹಿಳಾ ವಸತಿ ನಿಲಯದ ಮಗು ಸಾವನಪ್ಪಿದ ಪ್ರಕರಣ ಕುರಿತಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಏನಾದರು ಕ್ರಮ ತೆಗೆದುಕೊಳ್ಳಲಾಗಿದೆಯೇ ಎಂದು ರೂಪಕುಮಾರ ದತ್ತಾ ಅಧಿಕಾರಿಗಳಿಗೆ ವಿವರಣೆ ಕೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿ.ಎಸ್‌. ಗುಣಾರಿ ಮಾತನಾಡಿ, ಕಡಿಮೆ ತೂಕವಿದ್ದ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದ್ದು, ಇದರಲ್ಲಿ ಅಧಿಕಾರಿಗಳ ಕರ್ತವ್ಯ ಲೋಪ ಇಲ್ಲ ಎಂದರು. ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದಲ್ಲಿ ಬಾವಿಯ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡ ಪ್ರಕರಣ ಕುರಿತಂತೆ ಮಾತನಾಡಿದ ಆಯೋಗದ ಸದಸ್ಯರು, ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಎಲ್ಲಿಯೂ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಶರತ್‌ ಬಿ., ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ, ಡಿ.ಸಿ.ಪಿ. ಕಿಶೋರ ಬಾಬು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ, ಹೆಚ್ಚುವರಿ ಜಿಲ್ಲಾ ಧಿಕಾರಿ ಡಾ| ಶಂಕರ ವಣಿಕ್ಯಾಳ್‌, ಐ.ಎ.ಎಸ್‌. ಪ್ರೊಬೇಷನರಿ ಅಧಿಕಾರಿ ಗೋಪಾಲಕೃಷ್ಣ ಬಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.