ಶ್ರವಣ ದೋಷಕ್ಕೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಅಗತ್ಯ:ಡಾ| ಮಂಜುನಾಥ್‌

ಜೋರಾದ ಶಬ್ದದಿಂದ ಮಕ್ಕಳನ್ನು ದೂರವಿಡಲು ಕರೆ

Team Udayavani, Mar 4, 2020, 7:42 PM IST

4–March-35

ಶಿವಮೊಗ್ಗ: ಮಕ್ಕಳ ಶ್ರವಣ ಸಾಮರ್ಥ್ಯದ ಮೇಲೆ ನಿರಂತರ ನಿಗಾ ಇರಿಸಿ, ಯಾವುದೇ ದೋಷಗಳು ಕಂಡು ಬಂದರೆ ತಕ್ಷಣ ವೈದ್ಯರ ನೆರವು ಪಡೆಯುವಂತೆ ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ| ಮಂಜುನಾಥ್‌ ನಾಗಲೀಕರ್‌ ಹೇಳಿದರು.

ನಗರದ ಮೆಗ್ಗಾನ್‌ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಶ್ರವಣ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೋಷಕರು ಮಕ್ಕಳಿಗೆ ಕಿವಿಯೊಳಗೆ ಯಾವುದೇ ವಸ್ತುವನ್ನು ಹಾಕಿಕೊಳ್ಳಬಾರದೆಂದು ತಿಳಿಸಿ ಹೇಳಬೇಕು. ನಿಮ್ಮ ಮಗುವಿಗೆ ಕಿವಿ ನೋವು ಅಥವಾ ಕಿವಿ ಸೋರುವುದು ಅಥವಾ ಕಿವಿ ಮುಚ್ಚಿದೆ ಎಂದು ಕಂಡು ಬಂದರೆ ತಕ್ಷಣವೇ ನಿಮ್ಮ ಮಗುವನ್ನು ವೈದ್ಯರ ಬಳಿ ಪರೀಕ್ಷಿಸಿ, ನಿಮ್ಮ ಮಕ್ಕಳನ್ನು ಕೊಳಕು ನೀರಿನಲ್ಲಿ ಈಜಲು ಬಿಡಬೇಡಿ, ಮಗುವಿನ ಕಿವಿಯ ಮೇಲೆ ಹೊಡೆಯಬೇಡಿ. ಜೋರಾದ ಶಬ್ದದಿಂದ ಮಗುವನ್ನು ದೂರವಿಡಿ. ಸುರಕ್ಷಿತವಾದ ಆಡಿಯೋ ಡಿವೈಸ್‌ ಮೂಲಕ ಕೇಳುವಂತೆ ಮಕ್ಕಳಿಗೆ ತಿಳಿ ಹೇಳಬೇಕು ಎಂದು ತಿಳಿಸಿದರು.

ಇಎನ್‌ಟಿ ತಜ್ಞ ಡಾ| ಗಂಗಾಧರ್‌ ಮಾತನಾಡಿ, ಉತ್ತಮ ಜೀವನ ನಿರ್ವಹಣೆಗೆ ಕಣ್ಣಿನ ಆರೋಗ್ಯದಷ್ಟೇ ಕಿವಿಯ ಆರೋಗ್ಯವೂ ಮುಖ್ಯವಾಗುತ್ತದೆ. ಈ ಹಿನ್ನಲೆಯಲ್ಲಿ ಹೆಚ್ಚು ಜಾಗೃತಿ ವಹಿಸಿ ಶ್ರವಣ ದೋಷದ ಸಮಸ್ಯೆಗೆ ಆಸ್ಪದ ನೀಡದಂತೆ ಸಮಾಜ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಶೇಖರ್‌ ಮಾತನಾಡಿ, ಶ್ರಮಣ ದೋಷದ ಲಕ್ಷಣಗಳು ಶೀಘ್ರ ಪತ್ತೆಯಾದರೆ ಚಿಕಿತ್ಸೆ ಸುಲಭ ಸಾಧ್ಯ. ಒಂದು ವೇಳೆ ಸಂಪೂರ್ಣ ಸರಿಪಡಿಸಲಾಗದಿದ್ದರೂ ದುಷ್ಪರಿಣಾಮ ಕಡಿಮೆಗೊಳಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಕಿವಿಯ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ ಸಮಸ್ಯೆ ಎದುರಾಗುವ ಅನುಮಾನವಿದ್ದಲ್ಲಿ ಪರೀಕ್ಷಿಸಿಕೊಳ್ಳಬೇಕು. ಹುಟ್ಟುವ ಮಗುವಿನಿಂದ ಹಿಡಿದು ವೃದ್ಧರವರೆಗೂ ಕಿವುಡುತನ ಯಾವುದೇ ವಯಸ್ಸಿನ ಅಂತರವಿಲ್ಲದೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದರು.

ಜಾಥಾದಲ್ಲಿ ಡಾ| ಶ್ರೀಧರ್‌, ಪ್ರತಿಮಾ ಡಾಕಪ್ಪ ಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಇಎನ್‌ಟಿ ಸಿಬ್ಬಂದಿ ಹಾಗೂ ಸಿಮ್ಸ್‌ ವಿದ್ಯಾರ್ಥಿಗಳು ಇದ್ದರು. ಜಾಥಾ ಮೆಗ್ಗಾನ್‌ ಆಸ್ಪತ್ರೆಯ ಆವರಣದಿಂದ ಗೋಪಿ ಸರ್ಕಲ್‌ ಮಾರ್ಗ ಮೂಲಕ ಐ.ಎಂ.ಎ. ಆವರಣದಲ್ಲಿ ಸಂಪನ್ನಗೊಂಡಿತು.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.