ಇಂಗ್ಲೀಷ್ ಟ್ರೈಲರ್ ರಿಲೀಸ್ಗೆ ಅನಂತ್ನಾಗ್
Team Udayavani, Mar 5, 2020, 5:16 AM IST
ತುಳು ಸಿನೆಮಾಗಳ ಪಾಲಿಗೆ ಮುಂದಿನ ತಿಂಗಳು ತೆರೆಕಾಣಲಿರುವ “ಇಂಗ್ಲೀಷ್’ ಸಿನೆಮಾ ಹೊಸ ನಿರೀಕ್ಷೆ ಮೂಡಿಸಿದೆ. ಅನಂತ್ನಾಗ್ ಸೇರಿದಂತೆ ಕರಾವಳಿಯ ಎಲ್ಲ ಕಲಾವಿದರು ಅಭಿನಯಿಸಿದ ಈ ಸಿನೆಮಾದ ಹಾಡು ಕೂಡ ಈಗಾಗಲೇ ಕೋಸ್ಟಲ್ವುಡ್ನಲ್ಲಿ ಸೌಂಡ್ ಮಾಡುತ್ತಿದ್ದು, ಟ್ರೈಲರ್ ಬಿಡುಗಡೆಯ ನಿರೀಕ್ಷೆಯಲ್ಲಿದೆ.
ಶುಕ್ರವಾರ ಸಂಜೆ ಮಂಗಳೂರಿನಲ್ಲಿ ಇಂಗ್ಲೀಷ್ನ ಟ್ರೈಲರ್ ಬಿಡುಗಡೆಯಾಗಲಿದ್ದು, ಅನಂತ್ನಾಗ್ ಅವರೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸೂರಜ್ ಶೆಟ್ಟಿ ಅವರ ನಿರ್ದೇಶನದ “ಇಂಗ್ಲೀಷ್’ಸಿನೆಮಾವನ್ನು ಹರೀಶ್ ಶೇರಿಗಾರ್ ಹಾಗೂ ಶರ್ಮಿಳಾ ಶೇರಿಗಾರ್ ನಿರ್ಮಾಣ ಮಾಡಿದ್ದಾರೆ. ಪ್ರೀತಿಗಾಗಿ ಭಾರಿ ಪ್ರಯತ್ನಪಟ್ಟು “ಇಂಗ್ಲೀಷ್’ಕಲಿಯುವುದೇ ಈ ಸಿನೆಮಾದ ಪ್ರಮುಖ ವಿಷಯ. ಪರಿಶ್ರಮದಿಂದ ಏನನ್ನೂ ಮಾಡಬಹುದು ಎಂಬ ಸಂದೇಶ ವನ್ನೂ ಹೊಂದಿರುವ ಈ ಸಿನೆಮಾದಲ್ಲಿ ಆ ಯುವಕನು “ಇಂಗ್ಲೀಷ್’ಕಲಿಯಲು ಪಡುವ ಪಾಡು, ಆಕೆಯ ಮನ ಗೆಲ್ಲುವುದು ಮತ್ತು ಆಕೆಯ ಮನೆಯವರನ್ನೂ ಮದುವೆಗೆ ಒಪ್ಪಿಸಲು ಸಫಲವಾಗುವವರೆಗೆ ಸಾಗುವ ಕಥೆ ಅತ್ಯಂತ ಕುತೂಹಲದಿಂದ ಕೂಡಿದೆ. ಮಾಲ್ನಲ್ಲಿ ವೇಷ ಹಾಕಿ ಗ್ರಾಹಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದ ಈತ ಏರುವ ಎತ್ತರ ಎಲ್ಲರನ್ನೂ ನಿಬ್ಬೆರಗಾಗಿಸುತ್ತದೆ. ಪೃಥ್ವಿ ಅಂಬರ್, ನವ್ಯಾ ಪೂಜಾರಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್, ದೀಪಕ್ ರೈ ಪಾಣಾಜೆ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಶೆಟ್ಟಿ ಬೈಲೂರು, ರವಿ ರಾಮಕುಂಜ ಮುಂತಾ ದವರು ಇಂಗ್ಲೀಷ್ನಲ್ಲಿದ್ದಾರೆ. ಲೋಕು ಕುಡ್ಲ ಬರೆದಿರುವ ಹಾಡಿಗೆ ಕದ್ರಿ ಮಣಿಕಾಂತ್ ಅವರ ಸಂಗೀತವಿದೆ. ಸುಪ್ರಿಯಾ ಲೋಹಿತ್ ಹಾಡಿರುವ “ರಂಗ್ ರಂಗೋಲಿ… ಲವ್ ಫುಲ್ ಲಾಲಿ’ ಎಂಬ ರೊಮ್ಯಾಂಟಿಕ್ ಹಾಡು ಸದ್ಯ ಕೋಸ್ಟಲ್ವುಡ್ನಲ್ಲಿ ಗುನುಗುನಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್