ಇಂಟರ್ಯಾಕ್ಟೀವ್‌ ಆನ್‌ಲೈನ್‌ ಕೋರ್ಸ್‌


Team Udayavani, Mar 6, 2020, 3:01 AM IST

interctive

ರಾಜ್ಯದ ಉನ್ನತ ಶಿಕ್ಷಣದ ನಿವ್ವಳ ನೋಂದಣಿ ಅನುಪಾತ ಹೆಚ್ಚಿಸಲು ಇಂಟ ರ್ಯಾಕ್ಟೀವ್‌ ಆನ್‌ಲೈನ್‌ ಕೋರ್ಸ್‌ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಅವಶ್ಯವಿರುವ ಗುಣಾತ್ಮಕ ಇ-ಕಂಟೆಂಟ್‌ ಅನ್ನು 1 ಕೋಟಿ ರೂ. ವೆಚ್ಚ ದಲ್ಲಿ ಸಿದ್ಧಪಡಿಸಲಾಗುವುದು. ಪಾಲಿಟೆಕ್ನಿಕ್‌ ಮತು ಎಂಜಿನಿಯರಿಂಗ್‌ ವಿದ್ಯಾರ್ಥಿ ಗಳಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿ ತಲಾ 5 ಕೋಟಿ ರೂ. ವೆಚ್ಚ ದಲ್ಲಿ ಜಿಯೋಸ್ಪೇಶಿಯಲ್‌ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯನ್ನು ತಂತ್ರ ಜ್ಞಾನದ ನೆರವಿನಿಂದ ಸಮರ್ಥವಾಗಿ ನಿರ್ವಹಿಸಲು ಒಂದು ಶಾಶ್ವತ ವ್ಯವಸ್ಥೆ ರೂಪಿಸಲು 1 ಕೋಟಿ ರೂ. ಮೀಸಲಿಟ್ಟಿದೆ.

ಸರ್ಕಾರಿ ನೌಕರರಿಗೆ ನಗದು ರಹಿತ ಶಸ್ತ್ರಚಿಕಿತ್ಸೆ: ಸರ್ಕಾರಿ ನೌಕರರು, ಅವರ ಅವಲಂಬಿತರಿಗೆ ಚಾಲ್ತಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಮಾರ್ಪಡಿಸಿ ಶಸ್ತ್ರ ಚಿಕಿತ್ಸಾ ವಿಧಾನ ಗಳಿಗೆ ನಗದುರಹಿತ ಚಿಕಿತ್ಸೆ ನೀಡಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ನಗದು ರಹಿತ ಚಿಕಿತ್ಸೆ ರಾಜ್ಯ ಸರ್ಕಾರಿ ನೌಕರರ ದೀರ್ಘ‌ಕಾಲದ ಬೇಡಿಕೆಯಾಗಿದ್ದು, ಈ ಯೋಜನೆಯಿಂದ 22.5 ಲಕ್ಷ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿ ತರು ಪ್ರಯೋಜನ ಪಡೆಯಲಿದ್ದು, ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ. ಆಗಲಿದೆ.

ಮೊಬೈಲ್‌ ಕ್ಲಿನಿಕ್‌: ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ ರಕ್ಷಣೆ ನೀಡುವ ದೃಷ್ಟಿಯಿಂದ 10 ಮೊಬೈಲ್‌ ಕ್ಲಿನಿಕ್‌ಗಳನ್ನು ಪ್ರಾರಂಭಿಸುವ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ.

ವಸತಿ ಶಾಲೆಗಳ ಮೇಲ್ವಿಚಾರಣೆಗೆ ಸಮಿತಿ: ರಾಜ್ಯದ ಸರ್ಕಾರಿ ವಸತಿ ಶಿಕ್ಷಣ ಸಂಸ್ಥೆಗಳಿಗೆ ಕಾಯಕಲ್ಪ ನೀಡಲು ಮುಂದಾಗಿರುವ ಸರ್ಕಾರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್‌)ದ ವತಿಯಿಂದ ನಡೆಸಲಾಗುತ್ತಿರುವ ವಸತಿ ಶಾಲೆಗಳನ್ನು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸುವುದಾಗಿ ಘೋಷಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ನಡೆಸಲಾಗುತ್ತಿರುವ ವಸತಿ ಶಾಲೆಗಳಲ್ಲಿ ಕನಿಷ್ಠ ಶೇ.25 ಸೀಟುಗಳನ್ನು ಆಯಾ ತಾಲೂಕಿನ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲು ಅವಕಾಶ ಕಲ್ಪಿಸಲು ಮುಂದಾಗಿದೆ. ಇದರಿಂದ ಸ್ಥಳೀಯವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳು ವಸತಿ ಶಾಲೆ ಸೇರಿಕೊಳ್ಳಲು ಅನುಕೂಲವಾಗಲಿದೆ.

ಹೊಸ ಚಿಕಿತ್ಸಾ ಘಟಕ: ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆ ಮತ್ತು ಸಿ.ವಿ. ರಾಮನ್‌ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಕ್ಯಾತ್‌ಲ್ಯಾಬ್‌, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಗಳಲ್ಲಿ ತಲಾ 3ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್‌ ಲ್ಯಾಬ್‌ಗಳನ್ನು ಮತ್ತು ತಲಾ 30 ಲಕ್ಷ ರೂ. ಗಳ ವೆಚ್ಚದಲ್ಲಿ ಮಾಲಿಕ್ಯು ಲಾರ್‌ ಬರಾಲಜಿ ಲ್ಯಾಬ್‌ಗಳನ್ನು ಸ್ಥಾಪನೆ ಮುಂದಾಗಿದ್ದಾರೆ.

ವನ್ಯಜೀವಿ ಸಂರಕ್ಷಣೆ: ಐದು ಕೋಟಿ ರೂ. ವೆಚ್ಚ ಮಾಡಿ ರಾಜ್ಯದಲ್ಲಿರುವ ಶೋಲಾ ಅರಣ್ಯಗಳನ್ನು ಸರ್ವೇಕ್ಷಣೆ ಮಾಡಲು ಸಿಎಂ ಬಿಎ ಸ್‌ವೈ ಮುಂದಾಗಿದ್ದಾರೆ. ಶಿವಮೊಗ್ಗ ಹೊರವಲಯ ದಲ್ಲಿರುವ ತಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿರುವ ಮಿನಿ ಮೃಗಾಲಯ ಉನ್ನತೀಕರಿಸಲು 5 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ರಾಮನಗರ ಜಿಲ್ಲೆಯ ರಣಹದ್ದುಧಾಮದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರವನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ಮೊದಲ ಕಡಲಧಾಮ: ರಾಜ್ಯದ ಮೊದಲ ಕಡಲಧಾಮವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರ್ಮಿಸಲಾಗುವುದು. ಜಿಲ್ಲೆ ಅನೇಕ ಸಮುದ್ರ ತೀರಗಳ ಪೈಕಿ ಯಾವುದಾದರೊಂದು ಸಮುದ್ರ ತೀರದಲ್ಲಿ 1 ಕೋಟಿ ರೂ.ಗಳ ಕಡಲಧಾಮ ಸ್ಥಾಪಿಸಲಾಗಲಿದೆ.

ಮಂಗಗಳ ಪುನರ್ವಸತಿ: ಮಲೆನಾಡಿನಲ್ಲಿ ಮಂಗಗಳ ಉಪಟಳದಿಂದ ಅಡಕೆ ಬೆಳೆ ರಕ್ಷಿಸಲು ಹಾಗೂ ಮಂಗನ ಕಾಯಿಲೆ ಅತೋಟಿ ನಿಟ್ಟಿನಲ್ಲಿ ಮಂಗಗಳ ಪುನರ್ವಸತಿಗೆ ರಾಜ್ಯ ಸರ್ಕಾರ ಮುಂದಾಗಿದೆ. 5ವರ್ಷಗಳಿಗೆ ಒಟ್ಟಾರೆ 6.25 ಕೋಟಿ ರೂ. ವೆಚ್ಚದಲ್ಲಿ ಪುನರ್ವಸತಿಗೆ ಯೋಜನೆ ರೂಪಿಸುತ್ತದೆ. 2020-21ನೇ ಸಾಲಿನಲ್ಲಿ 1.25 ಕೋಟಿ ರೂ. ಒದಗಿಸಲಾಗುತ್ತಿದೆ.

ಉದ್ಯೋಗ ಕೋಶ: ರಾಜ್ಯದಿಂದ ಉತ್ತೀರ್ಣರಾಗುವ ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರಿಕೃತ ಉದ್ಯೋಗ ಕೋಶ ತೆರೆಯಲು ಸರ್ಕಾರ ಉದ್ದೇಶಿಸಿದೆ. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಒಂದು ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್‌ ಸಂಸ್ಥೆಗಳನ್ನು ಸರ್ಕಾರ ಸ್ಥಾಪಿಸಲಿದೆ.

ಮಠಗಳಿಗೆ ಆರ್ಥಿಕ ಸಹಕಾರ: ರಾಜ್ಯದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮರಸ್ಯ ಕಾಪಾಡಲು ಮಠ ಮಾನ್ಯಗಳ ಕೂಡುಗೆ ಅಪಾರ. ವಿವಿಧ ಸಮುದಾಯಗಳ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದು ಇಂತಹ ಮಠಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ನೀಡಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜತೆಗೆ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಕೋಟಿ ರೂ.ನೀಡಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಮಂಡಿಸಿರುವ ಬಜೆಟ್‌ ಜನಪರ, ರೈತಪರ ಬಜೆಟ್‌ ಆಗಿದ್ದು, ಇದನ್ನು ಸ್ವಾಗತಿಸುತ್ತೇನೆ, ಬಜೆಟ್‌ನಲ್ಲಿ ಸೇರಿರುವ ಹಲವು ಯೋಜನೆಗಳು ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯುತ್ತದೆ.
-ಜೆ.ಸಿ ಮಾಧುಸ್ವಾಮಿ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ

ಮಾನವ ಹಾಗೂ ಪ್ರಾಣಿ ಸಂಘರ್ಷದ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪವಿಲ್ಲ. ಮಳೆ ಹಾನಿ ಪರಿಹಾರಕ್ಕೆ ವಿಶೇಷ ಅನುದಾನದ ನಿರೀಕ್ಷೆಯಲ್ಲಿದ್ದೆವು. ಆದರೆ ಅದಕ್ಕೂ ಯಾವುದೇ ಅನುದಾನವಿಲ್ಲ. ಮಲೆನಾಡು ಜನರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.
-ಎಚ್‌.ಕೆ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ

ರಾಜ್ಯ ಬಜೆಟ್‌ನಲ್ಲಿ ಯಾವುದೇ ಜಿಲ್ಲೆ ಅಥವಾ ತಾಲೂಕುಗಳನ್ನು ಪ್ರಮುಖವಾಗಿ ಗುರಿಯಾಗಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಾರಿ ಅನುದಾನ ಬಿಡುಗಡೆ ಮಾಡಿಲ್ಲ. ಆದರೆ ಇಲಾಖಾವಾರು ಅನುದಾನ ಬಿಡುಗಡೆಮಾಡಿದ್ದಾರೆ.
-ನಾರಾಯಣಗೌಡ, ಪೌರಾಡಳಿತ ಸಚಿವ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.