ಲ್ಯಾಪ್‌ಟಾಪ್‌ನಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಳ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆಮಾರಾಟ-ದುರುಪಯೋಗ ಬೇಡ

Team Udayavani, Mar 9, 2020, 5:47 PM IST

9-March-27

ಚನ್ನಗಿರಿ: ವಿದ್ಯಾರ್ಥಿಗಳು ಗುರಿಯನ್ನಿಟ್ಟುಕೊಂಡು ಮುಂದೆ ಸಾಗಬೇಕು. ಆಗ ಮಾತ್ರ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಕಠಿಣ ಶ್ರಮವಿಲ್ಲದೇ ಯಾರೊಬ್ಬರೂ ಸಾಧನೆ ಮೆಟ್ಟಿಲೇರಲು ಸಾಧ್ಯವಿಲ್ಲ. ಅದ್ದರಿಂದ ದೇಶದ ಕೀರ್ತಿ ಯುವಸಮೂಹದ ಸಾಧನೆಯಲ್ಲಡಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್‌ ಅಭಿಪ್ರಾಯಪಟ್ಟರು.

ತಾಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ ಹಾಗೂ ಕಾಲೇಜ್‌ನ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬಡವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಗುತ್ತಿದೆ. ಲ್ಯಾಪ್‌ಟಾಪ್‌ ಬಳಕೆ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲಿದೆ. ಲ್ಯಾಪ್‌ಟಾಪ್‌ ಮಾರಿಕೊಳ್ಳುವುದು ಅಥವಾ ದುರ್ಬಳಕೆ ಮಾಡಿಕೊಳ್ಳದೆ ನಿಮ್ಮ ಶೈಕ್ಷಣಿಕ ಬದುಕನ್ನು ಗಟ್ಟಿಗೊಳಿಸುವುದಕ್ಕೆ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪದವಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡುವಂತೆ ಸರ್ಕಾರದ ಜೊತೆ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪದವಿ ಪಡೆಯುತ್ತಿರುವ ಎಲ್ಲರಿಗೂ ಲ್ಯಾಪ್‌ಟಾಪ್‌ ವಿತರಣೆಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಿದ್ದರೂ ಬಗೆಹರಿಸುವುದು ನಮ್ಮ ಜವಬ್ದಾರಿಯಾಗಿದೆ. ಅದೇ ರೀತಿ ಸಾಧನೆ ಮಾಡಿ ಕಾಲೇಜಿಗೆ, ಗ್ರಾಮಕ್ಕೆ ಮತ್ತು ಕುಟುಂಬಕ್ಕೆ ಹೆಸರು ಮತ್ತು ಕೀರ್ತಿ ತರುವ ಕೆಲಸ ನಿಮ್ಮದಾಗಿದೆ. ಇಂದಿನ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದ್ದು, ಇದಕ್ಕೆ ಹೊಂದಿಕೊಂಡು ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ಬದುಕನ್ನ ಕಟ್ಟಿಕೊಳ್ಳಬೇಕು. ಕೀಳರಿಮೆ ಬಿಟ್ಟು, ಛಲ, ಧೈರ್ಯ ಮತ್ತು ನಿಷ್ಠೆಯಿಂದ ಯಶಸ್ಸು ಪಡೆಯಲು ಸಾಧ್ಯ ಎಂದು ಹೇಳಿದರು.

ಬಸ್‌ ನಿಲ್ದಾಣ ಸ್ಥಳದಲ್ಲೇ ಮಂಜೂರು: ವಿದ್ಯಾರ್ಥಿಗಳು ಕಾಲೇಜ್‌ ಮುಂಭಾಗದಲ್ಲಿ ಬಸ್‌ ನಿಲ್ದಾಣವನ್ನು ನಿರ್ಮಿಸುವಂತೆ ಸಲ್ಲಿಸಿದ ಮನವಿಗೆ ತಕ್ಷಣ ಸ್ಪಂದಿ ಸಿದ ಸಂಸದ ಜಿ.ಎಂ. ಸಿದ್ದೇಶ್ವರ್‌, ಸ್ಥಳದಲ್ಲಿಯೇ ಹಣ ಮಂಜೂರು ಮಾಡಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಪಿ. ವಾಗೀಶ್‌, ತಾಪಂ ಅಧ್ಯಕ್ಷ ಉಷಾ ಶಶಿಕುಮಾರ್‌, ಬಿಜೆಪಿ ಮುಖಂಡ ಕೆ.ಬಸವರಾಜ್‌, ಗ್ರಾಪಂ ಅಧ್ಯಕ್ಷ ದೇವೆಂದ್ರಪ್ಪ, ಸಿಡಿಪಿ ಅಧ್ಯಕ್ಷ ಹುಚ್ಚಂಗಿ ಪ್ರಸಾದ್‌, ಪ್ರಾಂಶುಪಾಲ ಡಾ|ಎನ್‌.ಕರಿಬಸಪ್ಪ, ಷಣ್ಮಖ, ರಾಜ್‌ ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.