ಭಾರತೀಯ ಪರಂಪರೆ, ಸಂಸ್ಕೃತಿ ಅರಿಯಲು ಮಕ್ಕಳ ಅಸಡ್ಡೆ


Team Udayavani, Mar 12, 2020, 3:00 AM IST

bharatiya

ತುಮಕೂರು: ಪಾಶ್ಚಾತ್ಯರ ಅಂಧಾನುಕರಣೆಯಿಂದ ಇಂದಿನ ಮಕ್ಕಳಲ್ಲಿ ಭಾರತೀಯ ಪರಂಪರೆ, ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಅಸಡ್ಡೆ ಮತ್ತು ಕೀಳರಿಮೆ ಉಂಟಾಗಿದೆ. ಇದನ್ನು ಹೋಗಲಾಡಿಸಿ ಮಕ್ಕಳಲ್ಲಿ ಸಂಸ್ಕಾರದ ತಿಳಿವಳಿಕೆ ಮೂಡಿಸುವ ಮಹತ್ತರ ಹೊಣೆಗಾರಿಕೆ ಪೋಷಕರ ಮೇಲಿದೆ ಎಂದು ಹೆಬ್ಬೂರು ಕೋದಂಡಾಶ್ರಮಮಠದ ಪೀಠಾಧಿಪತಿ ಶ್ರೀ ಮಾಧವಾಶ್ರಮ ಸ್ವಾಮೀಜಿ ಅಭಿಪ್ರಾಯಪಟ್ಟರು. ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಶಾರದ ಶಂಕರ ಮಹಿಳಾ ಮಂಡಳಿ ಟ್ರಸ್ಟ್‌ ಏರ್ಪಡಿಸಿದ್ದ “ಶ್ರೀ ಶಾರದಮ್ಮನವರ ವಾರ್ಷಿಕೋತ್ಸವ ಮತ್ತು ಲಲಿತಾ ಹೋಮ’ದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ತಾಯಿಗೆ ಪ್ರಥಮ ಸ್ಥಾನ: ಮಕ್ಕಳಿಗೆ ಸಂಸ್ಕಾರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಹಿಳೆ ಪಾತ್ರ ಅತ್ಯಂತ ಪ್ರಮುಖ. “ಮಾತೃದೇವೋಭವ’ ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದ್ದು, ತಾಯಿಗೆ ಪ್ರಥಮ ಸ್ಥಾನ ನೀಡಲಾಗಿದೆ. ಹಿಂದೆ ಮಹಿಳೆ ಎಂದರೆ ಮನೆಗಷ್ಟೇ ಸೀಮಿತ ಎಂಬಂತಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ಮಹಿಳೆ ಪುರುಷರಿಗೆ ಸರಿಸಮನಾಗಿ ಎಲ್ಲ ಕ್ಷೇತ್ರಗಳಲ್ಲೂ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು.

“ಲಿವಿಂಗ್‌ ಟುಗೆದರ್‌’ ಎಂಬ ಹೊಸ ರೋಗ ಪ್ರಾರಂಭವಾಗಿದ್ದು, ಇದು ನಮ್ಮ ಸಂಸ್ಕೃತಿ ಮೇಲೆ ಸವಾರಿ ಮಾಡುತ್ತಿದೆ. ಇದನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಲು ಪ್ರತಿಯೊಬ್ಬರೂ ಆಲೋಚಿಸಬೇಕು. ಇಳಿ ವಯಸ್ಸಿನಲ್ಲಿಯೂ ಇಂದಿರಮ್ಮ ಸುಂದರರಾವ್‌ ಮಹಿಳೆಯರನ್ನು ಸಂಘಟಿಸಿ, ಅವರಲ್ಲಿ ಸಂಸ್ಕೃತಿ, ಪರಂಪರೆ ಬಗ್ಗೆ ಅರಿವು ಮೂಡಿಸುತ್ತಿರುವುದು ಪ್ರತಿಯೊಬ್ಬರಿಗೂ ಮಾದರಿ ಎಂದರು.

ಸೌಲಭ್ಯ ಕಲ್ಪಿಸುವ ಭರವಸೆ: ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಬಿ.ವಿ.ಕುಮಾರ್‌ ಮಾತನಾಡಿ, ವಿಪ್ರರಿಗೆ ವಿದ್ಯೆ ಶ್ರೇಷ್ಟ. ಕಡುಬಡತನ ಹಾಗೂ ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಸೂಕ್ತ ಸೌಲಭ್ಯ ಕಲ್ಪಿಸುವುದಾಗಿ ಹೇಳಿದರು. ಅತಿಥಿ ಉಪನ್ಯಾಸಕಿ ರಮ್ಯಾ ಕಲ್ಲೂರು, ಲಲಿತಾ ಹೋಮ ಹಾಗೂ ದೇವಿ ಮಹಾತ್ಮೆಯ ವೈಶಿಷ್ಟ್ಯತೆ ವಿವರಿಸಿದರು.

ಜಿಲ್ಲಾ ಬ್ರಾಹ್ಮಣ ಮಹಸಭಾ ಅಧ್ಯಕ್ಷ ನಾಗರಾಜರಾವ್‌, ಶಂಕರ ಸೇವಾ ಸಮಿತಿ ಉಪಾಧ್ಯಕ್ಷ ಸಂಪಿಗೆ ವೆಂಕಟನಾರಾಯಣ, ಸಂಘದ ಅಧ್ಯಕ್ಷೆ ಇಂದಿರಮ್ಮ ಸುಂದರರಾವ್‌, ಕಾರ್ಯದರ್ಶಿ ಸಿ.ಆರ್‌.ಸೌಮ್ಯಾ, ಕೆ.ನರಸಿಂಹಮೂರ್ತಿ, ನಿವೃತ್ತ ಪ್ರಾಚಾರ್ಯ ಜಿ.ಕೆ.ಗುಂಡಣ್ಣ, ನಿವೃತ್ತ ಶಿಕ್ಷಕಿ ಉಷಾ ಅನಂತರಾಮಯ್ಯ ಉಪಸ್ಥಿತರಿದ್ದರು.

ವಾರ್ಷಿಕೋತ್ಸವದ ಅಂಗವಾಗಿ ಬೆಳಗಿನಿಂದಲೇ ವಿಶೇಷ ಪೂಜೆ, ಲಲಿತಾಹೋಮ, ಪೂರ್ಣಾಹುತಿ ಮಠಮುದ್ರೆ ಶ್ರೀನಿವಾಸ ಜೋಯಿಸ್‌ ನೇತೃತ್ವದಲ್ಲಿ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ತುಮಕೂರು, ತಿಪಟೂರು, ಬೆಂಗಳೂರು ಸೇರಿ ವಿವಿಧೆಡೆಗಳಿಂದ ಭಕ್ತಾದಿಗಳು, ವಿವಿಧ ಬ್ರಾಹ್ಮಣ ಉಪಪಂಗಡಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.