ಹರಪನಹಳ್ಳಿ ಬಚಾವೋ;ಭ್ರಷಾಚಾರ ಹಠಾವೋ!

ಲಂಚ ಕೇಳುವ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಘೇರಾವ್‌: ಇದ್ಲಿ ರಾಮಪ್ಪ ಹೇಳಿಕೆ

Team Udayavani, Mar 12, 2020, 12:55 PM IST

12-March-17

ಹರಪನಹಳ್ಳಿ: ಹರಪನಹಳ್ಳಿ ಬಚಾವೋ, ಭ್ರಷ್ಠಚಾರ ಹಠಾವೋ ಎನ್ನುವ ಘೋಷವಾಕ್ಯದಡಿಯಲ್ಲಿ ಲಂಚ ಕೇಳುವ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಘೇರಾವ್‌ ಹಾಕುವ ಕಾರ್ಯಕ್ರಮವನ್ನು ಸಿಪಿಐ(ಎಂಎಲ್‌) ಲಿಬರೇಷನ್‌ ಪಕ್ಷ ಮತ್ತು ಅಖೀಲ ಭಾರತ ಕಿಸಾನ್‌ ಮಹಾಸಭಾ ಹಮ್ಮಿಕೊಂಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖೀಲ ಭಾರತ ಕಿಸಾನ್‌ ಮಹಾಸಭಾ ರಾಜ್ಯಾಧ್ಯಕ್ಷ ಇದ್ಲಿ ರಾಮಪ್ಪ ಅವರು, ಪಟ್ಟಣದ ಮಿನಿವಿಧಾನಸೌಧ ಎದುರು ಮಾ. 25ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ‌ಮ್ಮಿಕೊಳ್ಳಲಾಗುವುದು. ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತದೆ. ಹೈಕೋರ್ಟ್‌ ಆದೇಶವಿದ್ದರೂ ಹಿರೇಕೆರೆ ಒತ್ತುವರಿ ತೆರವುಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಕಂದಾಯ ಇಲಾಖೆಯಲ್ಲಿ ಲಂಚಕೊಟ್ಟರೆ ಮಾತ್ರ ಕೆಲಸ ಎನ್ನುವಂತಾಗಿದೆ ಎಂದು ದೂರಿದರು.

ತಾಲೂಕಿನ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅಧಿಕಾರಿಗಳು ರೈತರ, ಬಡವರ ಪರ ಕೆಲಸ ಕಾರ್ಯ ಮಾಡುತ್ತಿಲ್ಲ. ಕ್ಷೇತ್ರದ ಶಾಸಕ ಕರುಣಾಕರರೆಡ್ಡಿಯವರ ಆಡಳಿತ ವೈಖರಿ ಇದಕ್ಕೆಲ್ಲ ಕಾರಣವಾಗಿದೆ. ಶಾಸಕರು ಹರಪನಹಳ್ಳಿ ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ವಾಸಿಸದೇ ಅತಿಥಿ ರೀತಿ ಕ್ಷೇತ್ರಕ್ಕೆ ಬಂದು ಅತಿಥಿ ರೀತಿ ಹೋಗುತ್ತಾರೆ. ಹೀಗಾಗಿ ತಾಲೂಕಿನಲ್ಲಿ ಬೋಗಸ್‌ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತಿದ್ದು, ಇದಕ್ಕೆ ಶಾಸಕರ ಕೃಪಾಕಟಾಕ್ಷವಿದೆ ಎಂದು ಆರೋಪಿಸಿದರು. ಜಿ. ದಾದಪುರ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಈ ಹಿಂದೆ 2 ಬಾರಿ ನಡೆದಿದ್ದು, ಈಗ ಅದೇ ರಸ್ತೆ ಕಾಮಗಾರಿಗೆ ಮತ್ತೇ ಜೆಸಿಬಿಯಿಂದ ಹೊಸಮುಖ ಮಾಡಿ ಬಿಲ್‌ ತೆಗೆದುಕೊಳ್ಳುವ ಸಂಚಿನಲ್ಲಿರುತ್ತಾರೆ. ಮತ್ತಿಹಳ್ಳಿ ಗ್ರಾಮದ ಹತ್ತಿರ 1 ಕೋಟಿರೂ ವೆಚ್ಚದಲ್ಲಿ ಕಲ್ಲು ಹೋಳಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ ಕಾಮಗಾರಿ ಅಂದಾಜು ಪಟ್ಟಿ ರೀತಿ ನಡೆದಿಲ್ಲ. ವಡೇರಹಳ್ಳಿಯಿಂದ ತೆಲಿಗಿ, ಪರುಶುರಾಮನಕಟ್ಟಿ, ವಡೇರಹಳ್ಳಿಯಿಂದ ರಾಗಿಮಸಲವಾಡದವರೆಗೆ ರಸ್ತೆ ಚೆನ್ನಾಗಿದ್ದರೂ ಸಹ ಅದೇ ರಸ್ತೆಯ ಪಕ್ಕದಲ್ಲಿ ಮಣ್ಣು ಹಾಕಿ ಹೊಸಮುಖ ಮಾಡಿ ಬೋಗಸ್‌ ಬಿಲ್‌ ಮಾಡಲಾಗುತ್ತಿದೆ.

ತಾಲೂಕಿನಲ್ಲಿ ಅವಶ್ಯಕತೆ ಇರುವೆಡೆ ಕಾಮಗಾರಿ ನಡೆಸದೇ ತಮಗೆ ಬೇಕಾದ ಕಡೆ ಕಾಮಗಾರಿ ನಡೆಸಿ ಹಣ ಲೂಟಿ ಹೊಡೆಯಲಾಗುತ್ತಿದೆ. ನೆರೆ ಪರಿಹಾರದಲ್ಲಿ ಸಾಕಷ್ಟು ಭ್ರಷ್ಟಚಾರ ನಡೆದಿದೆ ಎಂದು ಆಪಾದಿಸಿದರು.

ಸಂಘಟನೆ ಮುಖಂಡರಾದ ಸಂದೇರ ಪರುಶುರಾಮ, ಮತ್ತಿಹಳ್ಳಿ ಓ.ಕೊಟ್ರೇಶ್‌, ಹುಲಿಕಟ್ಟಿ ಮೈಲಪ್ಪ, ದಾದಾಪುರ ಭರ್ಮಪ್ಪ, ಮೈದೂರು ಬಾಲಗಂಗಾಧರ, ಹಾರಕನಾಳು ಮೈಲಪ್ಪ, ಅಲಗಿಲವಾಡ ದೇವೇಂದ್ರಪ್ಪ, ಪೃಥ್ವೇಶ್ವರ ದುರುಗೇಶ್‌, ನೀಲುವಂಜಿ ತಿರುಕಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.