ಭಯ ಬೇಡ ಕೊರೊನಾ ಬಗ್ಗೆ ಎಚ್ಚರವಿರಲಿ

Team Udayavani, Mar 16, 2020, 3:00 AM IST

bhaya-beda

ತುಮಕೂರು: ಕೊರೊನಾ ವೈರಸ್‌ ಬಗ್ಗೆ ಯಾವುದೇ ಯಾವುದೇ ಭಯ ಬೇಡ, ಆದರೆ ಅಲಸ್ಯ ಮಾಡದೇ ಎಚ್ಚರಿಕೆಯಿಂದ ಎದರಿಸೋಣ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಅಗತ್ಯ ಮುಂಜಾಗ್ರತೆ ಕೈಗೊಂಡಿದೆ, ನಾಗರೀಕರೂ ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಭಾನುವಾರ ವೈದ್ಯರೊಂದಿಗೆ ಸಭೆ ನಡೆಸಿ ಕೊರೊನಾ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಮುನ್ನೆಚ್ಚರಿಕೆ ವಹಿಸಿ: ವಿದೇಶಗಳಲ್ಲಿ ಕೋವಿಡ್‌ -19 ವೈರಸ್‌ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಭಾರತದಲ್ಲಿ ಅಲ್ಪ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಇದ್ದು, ಇದರ ಬಗ್ಗೆ ಜಾಗೃತಗೊಂಡು ಮುನ್ನೆಚ್ಚರಿಕೆ ವಹಿಸಿದರೆ, ಈ ವೈರಸನ್ನು ತಡೆಯಬಹುದು ಎಂದು ಹೇಳಿದರು.

ವ್ಯಾಪಕವಾಗಿ ಆರೋಗ್ಯ ಜಾಗೃತಿ: ಕೊರೊನಾ ವೈರಸ್‌ ಬಗ್ಗೆ ಜಿಲ್ಲೆಯಲ್ಲಿ ತೆಗೆದುಕೊಂಡಿರುವ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆದು 100 ರಿಂದ 150 ಹಾಸಿಗೆ ವ್ಯವಸ್ಥೆಯನ್ನು ಕೊರೊನಾ ಸೋಂಕಿತರಿಗೆ ಎಂದು ಮೀಸಲಿಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವ್ಯಾಪಕವಾಗಿ ಆರೋಗ್ಯ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದರು.

ಸಾರ್ವಜನಿಕರು ಸ್ವಯಂ ಜಾಗೃತರಾಗಿ ಕಾಯಿಲೆ ಇರುವವರ ಬಳಿ ತೆರಳದೆ ಅಂತರ ಕಾಯ್ದುಕೊಳ್ಳಬೇಕು, ಜನರು ಗುಂಪು ಗುಂಪಾಗಿ ಸೇರುವುದನ್ನು ನಿಯಂತ್ರಣ ಮಾಡಬೇಕು, ಹಲವಾರು ಬಾರಿ ಕೈಗಳನ್ನು ತೊಳೆದುಕೊಂಡು ಶುಚಿಯಾಗಿಟ್ಟು ಕೊಳ್ಳಬೇಕು, ಪದೇ ಪದೆ ಕಣ್ಣು, ಮೂಗು, ಬಾಯಿಯನ್ನು ಕೈಗಳಿಂದ ಮುಟ್ಟಿಕೊಳ್ಳಬೇಡಿ ಎಂದು ತಿಳಿಸಿದರು.

ತುಮಕೂರು ಜಿಲ್ಲಾ ಆಸ್ಪತ್ರೆಯ ಸಹಾಯವಾಣಿ ದೂ: 0816-2278387 ಹಾಗೂ 0816-2251414 ಈ ಸಂಖ್ಯೆಗಳಿಗೆ ಸಾರ್ವಜನಿಕರು ಸಂಪರ್ಕಿಸಬಹುದಾಗಿದೆ. ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಬಿ.ಆರ್‌. ಚಂದ್ರಿಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ಹಾಗೂ ಹಿರಿಯ ವೈಧ್ಯಾಧಿಕಾರಿಗಳು ಇದ್ದರು.

ವಿಶ್ವದೆಲ್ಲಡೆ ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದೆ ನಮ್ಮ ಜಿಲ್ಲೆಯಲ್ಲಿ ಯಾರಿಗೂ ಈ ವೈರಸ್‌ ಹರಡಿಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಇದ್ದು, ಇದರ ಬಗ್ಗೆ ಜಾಗೃತಗೊಂಡು ಮುನ್ನೆಚ್ಚರಿಕೆ ವಹಿಸಿದರೆ, ಈ ವೈರಸನ್ನು ತಡೆಯಬಹುದು, ನಗರದ ನಾಗರಿಕರು ಈ ವೈರಸ್‌ ಬಗ್ಗೆ ಭಯ ಬೇಡ ಸ್ವಚ್ಛತೆ ಕಾಪಾಡಿ, ಜಾಗೃತವಾಗಿ ಇರಿ ಸದಾ ಕೈ ತೊಳೆಯಿರಿ ನಿರಂತರ ಕೆಮ್ಮು, ನೆಗಡೆ ಜ್ವರ ಬಂದರೆ ವೈದ್ಯರಲ್ಲಿ ತೋರಿಸಿ ಚಿಕಿತ್ಸೆ ಪಡೆಯಿರಿ.
-ಜಿ.ಬಿ.ಜ್ಯೋತಿಗಣೇಶ್‌, ಶಾಸಕ

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.