ನೌಕಾಪಡೆ ಮಹಿಳಾ ಅಧಿಕಾರಿಗಳಿಗೂ ನ್ಯಾಯ
Team Udayavani, Mar 18, 2020, 7:15 AM IST
ಹೊಸದಿಲ್ಲಿ: ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗಳಿಗೆ ಕೂಡ ಶಾಶ್ವತ ಆಯೋಗ (ಪರ್ಮನೆಂಟ್ ಕಮಿಷನ್) ರಚಿಸಬೇಕು. ಈ ಬಗ್ಗೆ ಮೂರು ತಿಂಗಳುಗಳಲ್ಲಿ ನಿಯಮಾವಳಿ ಸಿದ್ಧಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ.
ನ್ಯಾ| ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಸೇನಾಪಡೆಯಲ್ಲಿ ಲಿಂಗ ತಾರತಮ್ಯ ನಿವಾರಿಸುವ ನಿಟ್ಟಿನಲ್ಲಿ ಹಲವಾರು ನೆಪಗಳನ್ನು ಸರಕಾರ ಹೇಳುವಂತೆಯೇ ಇಲ್ಲ ಎಂದು ಕೇಂದ್ರ ಸರಕಾರಕ್ಕೆ ಸ್ಪಷ್ಟವಾಗಿ ತಾಕೀತು ಮಾಡಿತು. ದೇಶಕ್ಕಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಶಾಶ್ವತ ಆಯೋಗ ರಚನೆ ಮಾಡದೇ ಇದ್ದರೆ ಅಂಥವರಿಗೆ ನ್ಯಾಯ ನೀಡಿಕೆಯಲ್ಲಿ ಭಾರಿ ಕೊರತೆಯಾದಂತೆ ಆದೀತು. ಸಮುದ್ರದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗಳಿಗೆ ಶಾರ್ಟ್ ಸರ್ವಿಸ್ ಕಮಿಷನ್ (ಎಸ್ಎಸ್ಸಿ) ರಚಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ವಾದವನ್ನು ಒಪ್ಪಲಾಗದು ಎಂದು ನ್ಯಾಯಪೀಠ ಹೇಳಿದೆ.
ಇದರ ಜತೆಗೆ 2008ರ ಮೊದಲು ನೌಕಾಪಡೆಗೆ ಸೇರಿದ ಮಹಿಳಾ ಅಧಿಕಾರಿಗಳಿಗೆ ಮಾತ್ರ ಶಾಶ್ವತ ಆಯೋಗ ರಚನೆ ಮಾಡಲು ಸಾಧ್ಯವೆಂಬ ಸರಕಾರದ ವಾದವನ್ನೂ ನ್ಯಾಯಪೀಠ ಒಪ್ಪಿಲ್ಲ.
ನಿವೃತ್ತ ಮಹಿಳಾ ಅಧಿಕಾರಿಯ ಹರ್ಷ
ಈ ವಿಚಾರದಲ್ಲಿ ಸರಕಾರದ ನೀತಿಯ ವಿರುದ್ಧ ಕಾನೂನು ಸಮರ ನಡೆಸಿದ್ದ ನೌಕಾಪಡೆಯ ನಿವೃತ್ತ ಮಹಿಳಾ ಆಫೀಸರ್ಗಳು ಐತಿಹಾಸಿಕ ಆದೇಶದಿಂದ ಹರ್ಷಗೊಂಡಿದ್ದಾರೆ. ಮಹಿಳಾ ಅಧಿಕಾರಿಗಳು ಸಮರ ನೌಕೆಯನ್ನು ಮುನ್ನಡೆಸುವ ಅಥವಾ ಸಬ್ಮರೀನ್ಗಳಲ್ಲಿ ಸೇವೆ ಸಲ್ಲಿಸುವ ದಿನಗಳನ್ನು ತಾವು ಕಾಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ