ಆಡಳಿತ ಮಂಡಳಿಯಿಂದ ಕೋಟಿ ಹಗರಣ


Team Udayavani, Mar 19, 2020, 3:00 AM IST

adalita-mandali

ಬಂಗಾರಪೇಟೆ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಬೂದಿಕೋಟೆ ಮಾರ್ಕಂಡೇಯಗೌಡ ನೇತೃತ್ವದ ಆಡಳಿತ ಮಂಡಳಿ ಒಂದು ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಯಲ್ಲಿ ಸರ್ಕಾರದ ಮಾರ್ಗಸೂಚಿ ಪಾಲಿಸಿಲ್ಲ. ಟೆಂಡರ್‌ ಕರೆಯದೇ ಅಕ್ರಮವಾಗಿ ಕಟ್ಟಡ ನಿರ್ಮಾಣವನ್ನು ತಕ್ಷಣವೇ ಸಹಕಾರ ಇಲಾಖೆ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಪಟ್ಟಣದ ಸರ್ಕಾರಿ ಅತಿಥಿ ಗೃಹ ಎದುರಿನಲ್ಲಿರುವ ಟಿಎಪಿಸಿಎಂಎಸ್‌ ಜಾಗದಲ್ಲಿ 10 ಅಂಗಡಿಗಳುಳ್ಳ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗುತ್ತಿದೆ. ಟಿಎಪಿಸಿಎಂಎಸ್‌ ಅಧ್ಯಕ್ಷ ಮಾರ್ಕಂಡೇಯಗೌಡರ ನೇತೃತ್ವದ ಸಮಿತಿ ನಿರ್ವಹಣೆ ಮಾಡುತ್ತಿದ್ದು, ಸರ್ಕಾರದ ಸುತ್ತೋಲೆ ಹಾಗೂ ಟೆಂಡರ್‌ ಪ್ರಕ್ರಿಯೆ ನಡೆಸದೇ ಏಕಾಏಕಿ ಕಾನೂನಿಗೆ ವಿರುದ್ಧ ಉಪ ಸಮಿತಿ ರಚಿಸಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಟಿಎಪಿಸಿಎಂಎಸ್‌ನ 2 ಕೋಟಿ ಅಧಿಕ ಬೆಲೆ ಬಾಳುವ ಆಸ್ತಿಯನ್ನು ಆಡಳಿತ ಮಂಡಳಿಯೇ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದೆ. ಕ್ಯಾಸಂಬಳ್ಳಿಯಲ್ಲಿರುವ ಕಟ್ಟಡ 10 ಲಕ್ಷ ರೂ, ಹಾಗೂ ಬೇತಮಂಗಲದಲ್ಲಿರುವ ಆಸ್ತಿಯನ್ನು 1.15 ಕೋಟಿಗೆ ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಹಕಾರ ಇಲಾಖೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಟಿಎಪಿಸಿಎಂಎಸ್‌ ಆಸ್ತಿ ಅಕ್ರಮವಾಗಿ ಮಾರಿ, ಆ ಹಣದಿಂದ ಟೆಂಡರ್‌ ಪ್ರಕ್ರಿಯೆಗಳನ್ನು ಪಾಲಿಸದೇ ಸಮಿತಿಯಿಂದಲೇ ಹಣ ಡ್ರಾ ಮಾಡಿ, ಅಕ್ರಮವಾಗಿ ಸಂಕೀರ್ಣ ನಿರ್ಮಾಣ ಮಾಡುತ್ತಿರುವುದಕ್ಕೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತಗೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರಿಗೆ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ, ಸಹಕಾರ ಇಲಾಖೆ ಜಂಟಿ ಉಪನಿಬಂಧಕರಿಗೆ ಲಿಖೀತ ದೂರು ನೀಡಿದ್ದಾರೆ.

ಟಿಎಪಿಸಿಎಂಎಸ್‌ ಆಡಳಿತ ಮಂಡಳಿ, ಅಕ್ರಮ ಕಟ್ಟಡ ನಿರ್ಮಾಣ ಮಾಡಲು ಕೆಜಿಎಫ್ ನಗರಾಭಿವೃದ್ಧಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ. ಬೇನಾಮಿಯಾಗಿ ಹಾಗೂ ಅತುರವಾಗಿ ನಿರ್ಮಾಣ ಮಾಡಲಾಗುತ್ತಿದೆ. ಖಾಸಗಿ ಎಂಜಿನಿಯರ್‌ರೊಬ್ಬರನ್ನು ನೇಮಿಸಿಕೊಂಡು ಒಂದು ಕೋಟಿ ಹಣಕ್ಕೆ ವಿವಿಧ ಹಂತಗಳ ನಿರ್ಮಾಣಕ್ಕೆ 25 ಲಕ್ಷಕ್ಕೆ ಒಂದರಂತೆ ನಾಲ್ಕು ಅಂದಾಜು ಪಟ್ಟಿ ಸಿದ್ಧಪಡಿಸಿಕೊಂಡು, ಈಗಾಗಲೇ 75 ಲಕ್ಷ ರೂ. ಸ್ವಂತವಾಗಿ ಹಣ ಡ್ರಾ ಮಾಡಲಾಗಿದೆ. ಕಟ್ಟಡ ನಿರ್ಮಾಣದ ಸಾಮಾಗ್ರಿಗಳಿಗೂ ಹಣ ಡ್ರಾ ಮಾಡಿ ಹಂಚಲಾಗಿದೆ ಎನ್ನಲಾಗಿದೆ.

ಲೋಕೋಪಯೋಗಿ ದರ ದಾಖಲಿಸದೇ ತಮ್ಮ ಇಷ್ಟಾನುಸಾರವಾಗಿ ಅಂದಾಜುಪಟ್ಟಿ ಮಾಡಿಕೊಂಡು ಒಂದು ಕೋಟಿ ಹಗರಣ ಮಾಡಿರುವ ಟಿಎಪಿಸಿಎಂಎಸ್‌ ಅಧ್ಯಕ್ಷರು, ಸಿಇಒ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಿ ಸಮಿತಿಯನ್ನು ಸೂಪರ್‌ಸೀಡ್‌ ಮಾಡಬೇಕು. ಈ ಹಗರಣದ ತನಿಖೆ ಮುಗಿಯುವವರೆಗೂ ಟಿಎಪಿಸಿಎಂಎಸ್‌ನಲ್ಲಿ ಹಣಕಾಸಿನ ವ್ಯವಹಾರ ನಡೆಸದಂತೆ ಕ್ರಮಕೈಗೊಳ್ಳುವಂತೆ ಸಹಕಾರ ಇಲಾಖೆಗೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಟಿಎಪಿಸಿಎಂಎಸ್‌ನ ಆಡಳಿತ ಮಂಡಳಿ, ಸಹಕಾರ ಇಲಾಖೆ ಹಾಗೂ ಸರ್ಕಾರದ ಅನುಮೋದನೆ ಪಡೆಯದೇ ವಾಣಿಜ್ಯ ಸಂಕೀರ್ಣ ನಿರ್ಮಾಣದಲ್ಲಿ ಸಾಕಷ್ಟು ಭ್ರಷಾಚಾರ, ಅಕ್ರಮ ನಡೆದಿದೆ. ಕೂಡಲೇ ಸೂಪರ್‌ಸೀಡ್‌ ಮಾಡಿ, ಅಗತ್ಯ ಕ್ರಮಕೈಗೊಳ್ಳಬೇಕು.
-ಎಸ್‌.ಎನ್‌.ನಾರಾಯಣಸ್ವಾಮಿ, ಶಾಸಕ

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಸಹಕಾರ ಇಲಾಖೆ ಉಪನಿಬಂಧಕರಿಂದ ಅನುಮೋದನೆ ಪಡೆಯಲಾಗಿದೆ. ದುಂದುವೆಚ್ಚ ಹಾಗೂ ಗುಣಮಟ್ಟದ ಕಾರಣಕ್ಕಾಗಿ ಟೆಂಡರ್‌ ಕರೆದಿಲ್ಲ.
-ಮಾರ್ಕಂಡೇಯಗೌಡ, ಅಧ್ಯಕ್ಷ, ಟಿಎಪಿಸಿಎಂಎಸ್‌, ಬಂಗಾರಪೇಟೆ

* ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.