ಈಗ ದೊಗ್ಗಳ್ಳಿಗೂ ಬಂತು ಹಕ್ಕಿಜ್ವರ ?

ಏಕಾಏಕಿ ಸತ್ತ 30 ಕೋಳಿ, ಉಳಿದ ಕೋಳಿಗಳ ಕಲ್ಲಿಂಗ್‌ಬನ್ನಿಕೋಡಲ್ಲಿ ಎರಡನೇ ದಿನವೂ 500 ಕೋಳಿ ಸಂಹಾರ

Team Udayavani, Mar 20, 2020, 11:29 AM IST

20-March-4

ಹರಿಹರ: ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಡು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ತಾಲೂಕಿನ ದೊಗ್ಗಳ್ಳಿ ಗ್ರಾಮದಲ್ಲೂ ಬುಧವಾರ ಏಕಾಏಕಿ 30 ಕೋಳಿಗಳು ಸಾವನ್ನಪ್ಪಿದ್ದು, ಇಲ್ಲೂ ಸಹ ಹಕ್ಕಿಜ್ವರ ಇರುವ ಭೀತಿ ಎದುರಾಗಿದೆ.

ದೊಗ್ಗಳ್ಳಿ ಗ್ರಾಮದ ಶಿರಡಿ ಶ್ರೀ ಹಾಲಿನ ಡೇರಿ ಸಮೀಪದ ಕೋಳಿ ಫಾರಂನಲ್ಲಿನ ಬುಧವಾರ ಸಂಜೆಯಿಂದ ರಾತ್ರಿಯೊಳಗೆ 4-5 ತಾಸುಗಳ ಅವಧಿಯಲ್ಲಿ ಅಂದಾಜು 30 ಕೋಳಿಗಳು ಸತ್ತು ನೆಲಕ್ಕುರಳಿದವು. ವಿಷಯ ತಿಳಿಯುತ್ತಿದ್ದಂತೆ ಗುರುವಾರ ಆರೋಗ್ಯ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸತ್ತ 30 ಕೋಳಿಗಳನ್ನು ಪಶು ವೈದ್ಯಾಧಿಕಾರಿ ಡಾ|ಗುರುಶಾಂತಪ್ಪ ನೇತೃತ್ವದ ತಂಡ ವೈಜ್ಞಾನಿಕ ರೀತಿಯಲ್ಲಿ ಹೂಳಿದ್ದಲ್ಲದೆ, ಫಾರಂನಲ್ಲಿ ಇನ್ನುಳಿದ 30 ಜೀವಂತ ಕೋಳಿಗಳನ್ನೂ ಗೋಣು ತಿರುವಿ ಕೊಂದು, ಕಲ್ಲಿಂಗ್‌ ಕಾರ್ಯಾಚರಣೆ ಮಾಡಲಾಯಿತು. ಸತ್ತ ಕೋಳಿಗಳ ರಕ್ತದ ಮಾದರಿಗಳನ್ನು ಪಡೆದುಕೊಂಡು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ಬಂದ ನಂತರ ಹಕ್ಕಿಜ್ವರ ಇರುವ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ.

ಕೋಳಿ ಫಾರಂ ಹಾಗೂ ಸುತ್ತಮುತ್ತಲ 10 ಜನರಿಗೆ ಯಾವದೆ ಸೋಂಕು ಹರಡದಂತೆ ಟೀಮಿಪ್ಲೂಯು ಮಾತ್ರೆಯನ್ನು ನೀಡಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾ ಕಾರಿ ಡಾ|ಚಂದ್ರಮೋಹನ ತಿಳಿಸಿದ್ದಾರೆ.

ತಾಲೂಕಿನ ನೋಡಲ್‌ ಅಧಿ ಕಾರಿ ಡಾ|ನಟರಾಜ, ಬಿಳಸನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಕಾರಿ ಡಾ|ಆಶಾ, ಹಿರಿಯ ಆರೋಗ್ಯ ಸಹಾಯಕರಾದ ಮಂಜುನಾಥ, ಎಂ.ವಿ.ಹೊರಕೇರಿ ಸ್ಥಳಕ್ಕೆ ಭೇಟಿ ನೀಡಿದ್ದರು.

ಬನ್ನಿಕೋಡು-ಮುಂದುವರಿದ ಕಲ್ಲಿಂಗ್‌
ಬನ್ನಿಕೋಡು ಗ್ರಾಮದಲ್ಲಿ ಬುಧವಾರದಿಂದ ಆರಂಭವಾಗಿರುವ ವೈಜ್ಞಾನಿಕ ರೀತಿಯ ಕೋಳಿ ಸಂಹಾರ ಮಾಡುವ ಕಲ್ಲಿಂಗ್‌ ಆಪರೇಷನ್‌ ಗುರುವಾರವೂ ಸಹ ಮುಂದುವರಿಯಿತು. ಎರಡನೆ ದಿನ 500ಕ್ಕೂ ಹೆಚ್ಚು ಕೋಳಿಗಳನ್ನು ಹಿಡಿದು ಸಾಯಿಸಿ, ಗ್ರಾಮ ಹೊರವಲಯದ ಕೆರೆ ದಂಡೆಯಲ್ಲಿ 2 ಮೀಟರ್‌ ಉದ್ದ, 2 ಮೀಟರ್‌ ಅಗಲ ಮತ್ತು 2 ಮೀಟರ್‌ ಆಳದ ಗುಂಡಿ ತೆಗೆದು ಹೂಳಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೆಶಕ ಡಾ|ನಂದಾ ತಿಳಿಸಿದ್ದಾರೆ. ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಭಾಸ್ಕರ್‌ ನಾಯ್ಕ ನೇತೃತ್ವದ ರ್ಯಾಪಿಡ್‌ ರೆಸ್ಪಾನ್ಸ್‌ ಟೀಮ್‌ ಒಂದು ಕಿಲೊಮೀಟರ್‌ ವ್ಯಾಪ್ತಿಯಲ್ಲಿ ಕೋಳಿ, ಹಕ್ಕಿ-ಪಕ್ಷಿಗಳನ್ನು ಸಾಯಿಸುವ ಕಾರ್ಯಾಚರಣೆ ನಡೆಸಿದೆ. ಗ್ರಾಮದಲ್ಲಿ 1600ಕ್ಕೂ ಹೆಚ್ಚು ಕೋಳಿಗಳಿವೆ
ಎಂದು ಅಂದಾಜಿಸಲಾಗಿದ್ದು, ಮೊದಲ ದಿನ 332 ಕೋಳಿಗಳನ್ನು ಸಂಹರಿಸಲಾಗಿತ್ತು.

„ಸಮೀಕ್ಷೆ: ಬನ್ನಿಕೋಡು ಗ್ರಾಮದ ಅಕ್ಕಪಕ್ಕದ ಸಲಗನಹಳ್ಳಿ, ಬೇವಿನಹಳ್ಳಿ ಮುಂತಾದ ಗ್ರಾಮಗಳಲ್ಲೂ ಗುರುವಾರ ಕೋಳಿಗಳ ಸಮೀಕ್ಷೆ ನಡೆಸಲಾಗಿದೆ. ತಾಲೂಕಿನಾದ್ಯಂತ ಎಲ್ಲಾ ಕೋಳಿ ಫಾರಂ ಮಾತ್ರವಲ್ಲದೆ ಸಾಕಿದ ಕೋಳಿಗಳ ಮೇಲೂ ನಿಗಾ ಇಡಲಾಗಿದೆ ಎಂದು ಪಶು ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.