ಕೋವಿಡ್ 19 : ಜ್ವರ ಪರೀಕ್ಷಾ ಕೇಂದ್ರ ಆರಂಭ

Team Udayavani, Mar 31, 2020, 11:38 AM IST

ಕೋವಿಡ್ 19 : ಜ್ವರ ಪರೀಕ್ಷಾ  ಕೇಂದ್ರ ಆರಂಭ

ಹರಪನಹಳ್ಳಿ: ಕೋವಿಡ್ 19 ವೈರಸ್‌ ನಿಯಂತ್ರಣಕ್ಕಾಗಿ ಹರಪನಹಳ್ಳಿ ಪಟ್ಟಣದಲ್ಲಿ ಇನ್ನೆರಡು ದಿನಗಳಲ್ಲಿ ಜ್ವರ ಪರೀಕ್ಷಾ ಕೇಂದ್ರ ಆರಂಭಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ ತಿಳಿಸಿದರು.

ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಕೋವಿಡ್ 19  ನಿಯಂತ್ರಣ ಸಂಬಂಧ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಾದ್ಯಾಂತ ಜ್ವರ ಬಂದಂತಹ ರೋಗಿಗಳು ಯಾವುದೇ ಆಸ್ಪತ್ರೆಗೆ ತೆರಳದೆ ಜ್ವರ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು. ಶಂಕಿತರಿಗೆ ಗೃಹಬಂಧನ ವಿಧಿ ಸಲಾಗುವುದು ಎಂದರು.

ಬೇರೆ ಜಿಲ್ಲೆಗಳಿಗೆ ಕೆಲಸಕ್ಕೆ ತೆರಳಿ ಆಗಮಿಸುವಂತಹ ಕಾರ್ಮಿಕರನ್ನು ಹೋಂ ಕ್ವಾರೆಂಟೈನ್‌ನಲ್ಲಿ ಇಡಲಾಗುವುದು.ಇದಕ್ಕಾಗಿ ತಾಲೂಕಿನ ಮೂರಾರ್ಜಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಒಟ್ಟು 5 ಹಾಸ್ಟೆಲ್‌ಗ‌ಳನ್ನು ಗುರುತಿಸಲಾಗಿದೆ. ಅಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಬಂದಂತಹ ಕಾರ್ಮಿಕರಿಗೆ ಪರೀಕ್ಷೆ ನಡೆಸಿ 14 ದಿನಗಳ ಕಾಲ ಇರಿಸಿಕೊಂಡು ನಂತರ ಅವರ ಮನೆಗಳಿಗೆ ಕಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಸದ್ಯ ಜ್ವರ ಬಂದಂತಹ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಕಳಿಸಿಕೊಡಬೇಕು. ಪ್ರತಿಯೊಂದು ಆಸ್ಪತ್ರೆಗೆ 30 ಲೀ. ಸ್ಯಾನಿಟೇಜರ್ ಜಿಲ್ಲಾಡಳಿತದಿಂದ ಕಳಿಸಲಾಗುವುದು. ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಜರ್ ಇಟ್ಟುಕೊಳ್ಳಬೇಕು ಎಂದ ಅವರು ಚೆಕ್‌ಪೋಸ್ಟ್‌ ಗಳಿಗೆ ಟೆಸ್ಟ್‌ಕಿಟ್‌ ಕೊಡಬೇಕೆಂಬ ಅಧಿಕಾರಿಗಳ ಮನವಿಗೆ ಉತ್ತರಿಸಿದ ಅವರು ಇನ್ನೆರಡು ದಿನಗಳಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಟೆಸ್ಟ್‌ ಕಿಟ್‌ ವಿತರಿಸಲಾಗುವುದು ಎಂದು ತಿಳಿಸಿದರು.

ದಿನಸಿ ಖರೀದಿಗೆ ದಿನದಲ್ಲಿ ಒಂದು ಸಮಯ ನಿಗದಿ ಮಾಡಿಕೊಳ್ಳಬೇಕು. ತರಕಾರಿ ಎಪಿಎಂಸಿ ದರಪಟ್ಟಿಗಿಂತ ಹೆಚ್ಚು ಮಾರಾಟ ಮಾಡುವಂತಿಲ್ಲ. ಕಿರಾಣಿ ಅಂಗಡಿಯವರು ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆ ಮಾರಾಟ ಮಾಡಿದ್ದಲ್ಲಿ ಅಂತವರ ವಿರುದ್ದ ಕ್ರಮ ಜರುಗಿಸಬೇಕು. ಅದಿಕಾರಿಗಳು ಕಡ್ಡಾಯವಾಗಿ ಯಾರು ಪೋನ್‌ ಸ್ವಿಚ್‌ಅಫ್‌ ಮಾಡುವಂತಿಲ್ಲ. ಒಂದು ವೇಳೆ ಅನಾವಶ್ಯಕವಾಗಿ ಪೋನ್‌ ಬಂದ್‌ ಮಾಡಿಕೊಂಡ್ರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಉಪವಿಭಾಗಾಕಾರಿ ವಿ.ಕೆ. ಪ್ರಸನ್ನಕುಮಾರ್‌, ತಹಶೀಲ್ದಾರ್‌ ಡಾ| ನಾಗವೇಣಿ, ಡಿವೈಎಸ್ಪಿ ದೊಡ್ಡಮನೆ ಮಲ್ಲೇಶ್‌, ತಾಪಂ ಇಒ ಅನಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ| ಇನಾಯತ್‌, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ| ಎಸ್‌.ಎನ್‌. ಮಹೇಶ್‌, ಪುರಸಭೆ ಮುಖ್ಯಾಧಿಕಾರಿ ನಾಗರಾಜನಾಯ್ಕ, ಪಿಎಸ್‌ಐ ಸಿ. ಪ್ರಕಾಶ್‌, ಸಮಾಜ ಕಲ್ಯಾಣ ಇಲಾಖೆ ಆನಂದ ಡೊಳ್ಳಿನ, ಬಿಸಿಎಂ ಇಲಾಖೆ ಭೀಮಾನಾಯ್ಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.