ಮಹಿಳಾ ಜನಧನ ಖಾತೆಗೆ ನೇರ ನಗದು ಜಮೆ


Team Udayavani, Apr 3, 2020, 12:06 PM IST

ಮಹಿಳಾ ಜನಧನ ಖಾತೆಗೆ ನೇರ ನಗದು ಜಮೆ

ಧಾರವಾಡ: ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಮಹಿಳೆಯರ ಜನಧನ ಖಾತೆಗಳಿಗೆ ತಲಾ 500 ರೂ. ನೇರ ನಗದು ಜಮೆ ಮಾಡುವ ಕಾರ್ಯ ಏ.3ರಿಂದ ಜಿಲ್ಲೆಯಲ್ಲಿ ಆರಂಭಗೊಳ್ಳಲಿದೆ ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ನಗರದಲ್ಲಿ ಜಿಲ್ಲಾ ಮಟ್ಟದ ಬ್ಯಾಂಕರ್ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾದ್ಯಂತ ಸುಮಾರು ಐದು ಲಕ್ಷಕ್ಕೂ ಅಧಿಕ ಜನರಿಗೆ ಈ ಪ್ರಯೋಜನ ದೊರೆಯಲಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ “ಬ್ಯಾಂಕ್‌ ಮಿತ್ರ’ರ ಮೂಲಕ ಗ್ರಾಹಕರು ಈ ಸೌಲಭ್ಯದ ಸದುಪಯೋಗಪಡೆಯಬೇಕು. ಕಷ್ಟಕಾಲದಲ್ಲಿ ಜನರಿಗೆ ಸಹಾಯವಾಗಲಿ ಎಂಬ ಆಶಯದೊಂದಿಗೆ ಈ ಯೋಜನೆಯನ್ನು ಜಿಲ್ಲೆಯ ಬ್ಯಾಂಕ್‌ ಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.

ಎಲ್ಲ ಬ್ಯಾಂಕ್‌ಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು ಒಂದು ಮೀಟರ್‌ ಅಂತರದಲ್ಲಿ ಗುರುತುಗಳನ್ನು ಹಾಕಿ ಗ್ರಾಹಕರಿಗೆ ಆರೋಗ್ಯದ ಅರಿವು ಕೂಡಾ ಮೂಡಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ತಮ್ಮ ಬ್ಯಾಂಕಿಂಗ್‌ ಕರೆಸ್ಪಾಂಡೆಂಟ್‌ ಅಥವಾ ಬ್ಯಾಂಕ್‌ ಮಿತ್ರರ ಮೂಲಕ ಗ್ರಾಹಕರಿಗೆ ನಗದು ವಿಲೇವಾರಿ ಮಾಡಬೇಕು. ಬ್ಯಾಂಕ್‌ ಮಿತ್ರರಿಗೆ ಅಧಿಕೃತವಾಗಿ ಗುರುತಿನ ಕಾರ್ಡು ನೀಡಿ ಪೊಲೀಸರಿಗೆ ಮಾಹಿತಿ ಒದಗಿಸಬೇಕು. ನಗರ ಪ್ರದೇಶಗಳಲ್ಲಿ ಎಟಿಎಂಗಳ ಮೂಲಕ ಫಲಾನುಭವಿಗಳು ತಮ್ಮ ನಗದು ಪಡೆಯಬಹುದು ಎಂದರು. ಬ್ಯಾಂಕ್‌ ಗಳಲ್ಲಿ 500ಕ್ಕಿಂತ ಹೆಚ್ಚು ಪಿಎಮ್‌ಜೆಡಿವಾಯ್‌ ಖಾತೆಗಳನ್ನು ಹೊಂದಿದ್ದರೆ ಅಂತಹ ಬ್ಯಾಂಕ್‌ಗಳ ವ್ಯವಸ್ಥಾಪಕರು ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ನೆರವು ಪಡೆಯಬಹುದು. ಕೋವಿಡ್ 19  ಸೋಂಕು ತಡೆಯಲು ಅಗತ್ಯವಿರುವ ಸ್ಯಾನಿಟೈಸರ್‌ ಉಪಯೋಗಿಸಬೇಕು ಎಂದು ಹೇಳಿದರು.

ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಕೆ.ಎಂ.ಈಶ್ವರ ಮಾತನಾಡಿ, ಜಿಲ್ಲೆಯ ಐದು ಲಕ್ಷಕ್ಕೂ ಅ ಧಿಕ ಗ್ರಾಹಕರಿಗೆ ವಿವಿಧ ಬ್ಯಾಂಕ್‌ಗಳ 348 ಶಾಖೆಗಳು ಹಾಗೂ 450 ಎಟಿಎಮ್‌ ಗಳ ಮೂಲಕ ಈ ಸೇವೆ ಒದಗಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ. ಸಿಇಒ ಡಾ|ಬಿ.ಸಿ.ಸತೀಶ ಇನ್ನಿತರರು ಇದ್ದರು.

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.