ಸಾಮಾಜಿಕ ಅಂತರ ಕಾಯ್ದುಕೊಂಡರೆ ಸಾವಿನ ಅಂತರವೂ ಕಡಿಮೆ

Team Udayavani, Apr 3, 2020, 3:00 PM IST

ಸಾಮಾಜಿಕ ಅಂತರ ಕಾಯ್ದುಕೊಂಡರೆ ಸಾವಿನ ಅಂತರವೂ ಕಡಿಮೆ

ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೆಂದರೆ ಅದೇನೂ ಕೋವಿಡ್ ಗೆಂದು ರೂಪಿತವಾದ ಸೂತ್ರವಲ್ಲ. ಅದು ಬಹಳ ವರ್ಷಗಳಿಂದ ಅನುಸರಿಸುತ್ತಾ ಬಂದಿದ್ದ ಕ್ರಮ. ಹಿಂದೆಯೂ ಸಾಂಕ್ರಾಮಿಕ ರೋಗ ಕಾಡಿದಾಗಲೆಲ್ಲಾ ಹೀಗೆಯೇ ಮಾಡಿದ್ದು. ಅದರರ್ಥ ಹೀಗೆಯೇ ಲಾಕ್‌ಡೌನ್‌. ಯಾವುದೂ ಇಲ್ಲ, ಎಲ್ಲ ಬಂದ್‌ !

ನ್ಯೂಯಾರ್ಕ್‌: ಸಾಮಾಜಿಕ ಅಂತರ ನಿಯಮದಿಂದ ಆಗುವ ಲಾಭವೇನು? ಅದೇನು ಕೋವಿಡ್ವನ್ನು ಕಟ್ಟಿ ಹಾಕುತ್ತದೆಯೇ ಎಂದೆಲ್ಲಾ ಕೆಲವರು ಪ್ರಶ್ನಿಸುತ್ತಿದ್ದರು.

ವಿವಿಧ ದೇಶಗಳ ಸರಕಾರಗಳು ಈ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದರೆ, ಇನ್ನು ಕೆಲವು ರಾಷ್ಟ್ರಗಳು ಗಂಭೀರವಾಗಿ ತೆಗೆದುಕೊಂಡಿಲ್ಲ.

ಎಲ್ಲದರ ಪರಿಣಾಮ ಅಮೆರಿಕ, ಬ್ರಿಟನ್‌ ತತ್ತರಿಸುತ್ತಿರುವುದನ್ನು ಕಂಡರೆ ಅನುಭವಕ್ಕೆ ಬರುತ್ತದೆ. ಇಟಲಿಯಂತೂ ಸಾವಿನ ಬಿಸಿಗೆ ಹೆಚ್ಚು ಕಡಿಮೆ ಕರಗಿಯೇ ಹೋಗಿದೆ. ಈ ಮಧ್ಯೆಯೇ ಹಲವು ಪರಿಣಿತರು ಸಾಮಾಜಿಕ ಅಂತರದ ಮಹತ್ವವನ್ನು ವಿವರಿಸುತ್ತಿದ್ದಾರೆ.

ಈಗ ಮತ್ತೆ ಅಮೇರಿಕದ ಸಂಶೋಧಕರು ಮತ್ತೆ ಹೇಳಿರುವುದೇನು ಗೊತ್ತೇ?   -ಸಾಮಾಜಿಕ ಅಂತರ ಕಾಯ್ದುಕೊಂಡರೆ ಸಾವಿನ ಸಂಖ್ಯೆಯನ್ನು ತಡೆಯಬಹುದು.

ಜೀವ ಉಳಿಸುತ್ತಿರುವ ಸಾಮಾಜಿಕ ಅಂತರ
ವೈದ್ಯಕೀಯ ತಂತ್ರಜ್ಞಾನ ಸಂಸ್ಥೆಯೊಂದು ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಅಮೆರಿಕವು 29 ರಾಜ್ಯಗಳಲ್ಲಿ ಹೇರಿರುವ ಲಾಕ್‌ಡೌನ್‌ ಹಾಗೂ ಸಾಮಾಜಿಕ ಅಂತರ ಪಾಲನೆ ನಿಯಮ ಫ‌ಲ ಕೊಡುತ್ತಿವೆ. ಸೋಂಕು ಹರಡುವ ವೇಗಕ್ಕೆ ಕೊಂಚ ಹಿನ್ನಡೆಯಾಗಿದ್ದು, ಜನರ ಜೀವ ಉಳಿಯುತ್ತಿದೆ ಎಂದಿದೆ.

24.8 ಕೋಟಿ ಜನರು ಪಾರು
ಅಮೆರಿಕ ಸರಕಾರ ಸೋಂಕು ನಿಯಂತ್ರಣ ಕ್ಕಾಗಿ ಜನರನ್ನು ಮನೆಯಲ್ಲಿಯೇ ಇರುವಂತೆ ಆದೇಶ ನೀಡಿತ್ತು. ಈ ವೇಳೆ ಅಲ್ಲಿನ ವೈದ್ಯಕೀಯ ಇಲಾಖೆ ಈ ನಿಯಮವನ್ನು ಜನರು ಉಲ್ಲಂಘಿಸುತ್ತಾರೆ. ಅವರನ್ನು ನಿಯಂತ್ರಿಸುವುದು ಕಷ್ಟ ಎಂದೂ ಅಭಿಫ್ರಾಯಿಸಿತ್ತು. ಆದರೆ ಈ ಅಭಿಪ್ರಾಯವನ್ನು ತಳ್ಳಿ ಹಾಕುವಂತಹ ಬೆಳವಣಿಗೆಗೆ ಅಮೆರಿಕ ಸಾಕ್ಷಿಯಾಗಿದ್ದು, 29 ರಾಜ್ಯಗಳ 24.8 ಕೋಟಿ ಜನರು ಮನೆಯಲ್ಲೇ ಇದ್ದಾರೆ. ಇದರಿಂದ ರಾಜ್ಯಗಳಲ್ಲಿ ದಾಖಲಾಗುತ್ತಿರುವ ಸೋಂಕು ಪೀಡಿತರ ಸಂಖ್ಯೆಯಲ್ಲಿ ಅಲ್ಪ ಮಟ್ಟಿಗೆ ಕಡಿಮೆಯಾಗಿದೆ ಎನ್ನುತ್ತಾರೆ ತಜ್ಞರು.

ಕಿನ್ಸಾ ಹೆಲ್ತ್ ಆಸ್ಪತ್ರೆ ಸಿದ್ಧಪಡಿಸಿದ ಇಂಟರ್‌ನೆಟ್‌ ಸಂಪರ್ಕಿತ ಥರ್ಮಾಮೀಟರ್‌ಗಳು ಯಾವ ಪ್ರದೇಶದಲ್ಲಿ ಎಷ್ಟು ಸೋಂಕಿತರಿದ್ದಾರೆ, ಶಂಕಿತರಿದ್ದಾರೆ ಎಂಬ ಮಾಹಿತಿ ಕಲೆ ಹಾಕಲಿದೆ. ಸೋಂಕು ನಿಯಂತ್ರಣಕ್ಕೆ ಇದರಿಂದ ಅನುಕೂಲವಾಗಲಿದೆ. ಇಲ್ಲಿ ಲಭ್ಯವಾಗುತ್ತಿರುವ ಅಂಕಿ-ಅಂಶವನ್ನು ಮತ್ತು ಸಾರ್ವಜನಿಕರ ದೇಹದ ತಾಪಮಾನ ಮಟ್ಟವನ್ನು ಕೇಂದ್ರೀಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತಿದ್ದು, ಈ ಮಾಹಿತಿಯಿಂದ ಸೋಂಕಿತರನ್ನು ಮತ್ತು ಶಂಕಿತರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಭಾರತಕ್ಕೆ ಆಭಾರಿ ಎಂದ ಅಮೆರಿಕ
ನಾವು ತೋರಿದ ನಿರ್ಲಕ್ಷéದ ಪರಿಣಾಮ ಇಂದು ಅಮೆರಿಕದಲ್ಲಿ ಶ್ಮಶಾನ ಸದೃಶ ಸ್ಥಿತಿ ನಿರ್ಮಾಣವಾಗಿದೆ. ಗುರುವಾರ ಆರು ವಾರದ ನವಜಾತ ಶಿಶುಗಳ‌ನ್ನು ಕಳೆದುಕೊಂಡಿದ್ದೇವೆ. ಆದರೆ ಈ ವಿಷಯದಲ್ಲಿ ಭಾರತ ಸರಕಾರ ಬೇಗ ಎಚ್ಚೆತ್ತುಕೊಂಡಿದ್ದು, ಲಾಕ್‌ಡೌನ್‌ ಆದೇಶ ಹೊರಡಿಸಿದ್ದು ಉತ್ತಮ ನಿರ್ಧಾರ ಎಂದು ಅಮೆರಿಕದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಮ್ಮ ಪ್ರಜೆಗಳನ್ನು ಕರೆಸಿಕೊಳ್ಳುವಲ್ಲಿ ಭಾರತ ಸರಕಾರ ನೀಡುತ್ತಿರುವ ಸಹಕಾರಕ್ಕೆ ನಾವು ಆಭಾರಿಗಳಾಗಿದ್ದೇವೆ ಎಂದು ರಾಯಭಾರ ವ್ಯವಹಾರಗಳ ಪ್ರಿನ್ಸಿಪಲ್‌ ಡೆಪ್ಯುಟಿ ಅಸಿಸ್ಟೆಂಟ್‌ ಸೆಕ್ರೆಟರಿ ಇಯಾನ್‌ ಬ್ರೌನ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.