ಪಿಎಂ ಪರಿಹಾರ ನಿಧಿಗೆ 71 ಲಕ್ಷ ರೂ. ದೇಣಿಗೆ ನೀಡಿದ ಭಾರತ ಒಲಿಂಪಿಕ್ಸ್ ಸಂಸ್ಥೆ
Team Udayavani, Apr 4, 2020, 10:12 AM IST
ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಒಟ್ಟು 71 ಲಕ್ಷ ರೂ. ಸಂಗ್ರಹಿಸಿ ಸರ್ಕಾರಕ್ಕೆ ನೀಡಿದೆ.
ವಿವಿಧ ರಾಜ್ಯಗಳ ಸಂಸ್ಥೆ ಹಾಗೂ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್ಎಸ್ ಎಫ್) ಮೂಲಕ ಹಣವನ್ನು ಸಂಗ್ರಹಿಸಲಾಗಿದೆ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆ ತಿಳಿಸಿದೆ.
“ಕೋವಿಡ್-19 ವಿರುದ್ಧ ಇಡೀ ದೇಶವೇ ಹೋರಾಡುತ್ತಿರುವ ಸಂದರ್ಭದಲ್ಲಿ ವಿವಿಧ ರಾಜ್ಯಗಳ ಸಂಸ್ಥೆಯಿಂದ ನಾವೆಲ್ಲ ಒಗ್ಗಟಾಗಿ ಹಣವನ್ನು ಕಲೆ ಹಾಕಿದ್ದೇವೆ. ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನೀಡಲಾಗುತ್ತದೆ’ ಎಂದು ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.
ಈ ವರ್ಷ ಜಪಾನಿನ ಟೋಕಿಯೋದಲ್ಲಿ ನಡೆಯಬೇಕಿದ್ದ ಒಲಿಂಪಿಕ್ಸ್ ಕೋವಿಡ್-19 ಸೋಂಕಿನ ಕಾರಣ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ