ಕೋವಿಡ್ 19 ತಪಾಸಣೆಗೆ ಸಹಕರಿಸಲು ಬಿಎಸ್‌ವೈ ಮನವಿ

ಮುಸ್ಲಿಂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಭೆ ; ಸಕಾರಾತ್ಮಕ ಸ್ಪಂದನೆಯ ಭರವಸೆ

Team Udayavani, Apr 4, 2020, 10:17 AM IST

ಕೋವಿಡ್ 19 ತಪಾಸಣೆಗೆ ಸಹಕರಿಸಲು ಬಿಎಸ್‌ವೈ ಮನವಿ

ಬೆಂಗಳೂರು: ಕೋವಿಡ್ 19 ನಿಯಂತ್ರಣ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ, ನಿಜಾಮುದ್ದೀನ್‌ ಧರ್ಮ ಸಭೆಯಲ್ಲಿ ಪಾಲ್ಗೊಂಡವರ ವೈದ್ಯಕೀಯ ತಪಾಸಣೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಶುಕ್ರವಾರ ಮುಸ್ಲಿಂ ಮುಖಂಡರು ಮತ್ತು ಶಾಸಕರಾದ ಸಿ.ಎಂ.ಇಬ್ರಾಹಿಂ, ಎನ್‌.ಎ. ಹ್ಯಾರಿಸ್‌, ಜಮೀರ್‌ ಅಹ್ಮದ್‌, ನಸೀರ್‌ ಅಹಮದ್‌, ರಿಜ್ವಾನ್‌ ಅರ್ಷದ್‌, ಅಖಂಡ ಶ್ರೀನಿವಾಸಮೂರ್ತಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಅವರೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಿದರು.

ಸಭೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಕೋವಿಡ್ 19 ವೈರಸ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಮುಸ್ಲಿಂ ಸಮುದಾಯದವರಲ್ಲಿ ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ನಿಜಾಮುದ್ದೀನ್‌ ತಬ್ಲೀ ಮರ್ಕಜ್‌ಗೆ ಭೇಟಿ ನೀಡಿದ ರಾಜ್ಯದ ವ್ಯಕ್ತಿಗಳ ಮಾಹಿತಿ ನೀಡಿ, ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗುವಂತೆ ಮತ್ತು ಕ್ವಾರಂಟೈನ್‌ ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವೊಲಿಸಲು ಸಹಕಾರ ನೀಡುವುದಾಗಿ ಸಮುದಾಯದ ಮುಖಂಡರು ತಿಳಿಸಿದ್ದಾರೆ.

ಕೋವಿಡ್ 19 ವೈರಸ್‌ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೊಂದೇ ಪರಿಹಾರ. ಲಾಕ್‌ಡೌನ್‌ ಅವಧಿ ಮುಗಿಯುವವರೆಗೆ ಎಲ್ಲರ ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾತಿ, ಧರ್ಮ ಭೇದ ಮರೆತು ಶ್ರಮಿಸಬೇಕಾಗಿದೆ ಎಂದು ಎಲ್ಲ ಮುಖಂಡರೂ ಸರ್ವಾನುಮತದ ಅಭಿಪ್ರಾಯ ವ್ಯಕ್ತಪಡಿಸಿದರು. ಆರೋಗ್ಯ ಕಾರ್ಯಕರ್ತರಿಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ತಮ್ಮ ಸಮುದಾಯದ ಜನರ ಮನವೊಲಿಸುವುದಾಗಿ ಭರವಸೆ ನೀಡಿದ್ದಾರೆ. ರಾಜ್ಯದ ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಒಟ್ಟಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೋವಿಡ್ 19 ವಿರುದ್ಧದ ಸಮರವನ್ನು ಜಯಿಸಬೇಕಿದೆ ಎಂದರು.

ಉಚಿತವಾಗಿ ತಪಾಸಣೆ ಮಾಡಿಸಿಕೊಳ್ಳೋಕೆ ಏನಂತೆ? ಯಾರ್ಯಾರ ಮೇಲೆ ಅನುಮಾನ ಇದೆ ಎಂದು ಹೇಳುತ್ತಾರೆಯೋ ಆ ಮುಸ್ಲಿಂ ಬಾಂಧವರೆಲ್ಲ ತಪಾಸಣೆ ಮಾಡಿಸಿಕೊಳ್ಳಲೇಬೇಕು. ಸರಕಾರ ಸಾಮೂಹಿಕ ನಮಾಜ್‌ ನಿಲ್ಲಿಸುವಂತೆ ಹೇಳಿದೆ. ನಾವೂ ಸರಕಾರಕ್ಕೆ ಸಹಕಾರ ಕೊಡುತ್ತಿದ್ದೇವೆ. ಎಲ್ಲ ಕಡೆಗಳಲ್ಲೂ ಮಾಂಸ, ಮೀನು ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆಯೂ ಮುಖ್ಯಮಂತ್ರಿ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ.
-ಸಿ.ಎಂ.ಇಬ್ರಾಹಿಂ, ವಿಧಾನಪರಿಷತ್‌ ಸದಸ್ಯ

ನಿಜಾಮುದ್ದೀನ್‌ ಧರ್ಮ ಸಭೆಯಲ್ಲಿ ಪಾಲ್ಗೊಂಡವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ನನ್ನ ಕ್ಷೇತ್ರದಲ್ಲಿ ಹಲವರನ್ನು ನಾನೇ ಪರೀಕ್ಷೆ ಗೊಳಪಡಿಸಿದ್ದೇನೆ. ಜನರು ಸರಕಾರದ ಕ್ರಮಕ್ಕೆ ಬೆಂಬಲ ನೀಡ ಬೇಕು. ಆಶಾ ಕಾರ್ಯಕರ್ತೆಯರು ಯಾಕೆ ಬಂದಿದ್ದರು ಎನ್ನುವುದು ಜನರಿಗೆ ಗೊತ್ತಿ ರಲಿಲ್ಲ. ಎನ್‌ಆರ್‌ಸಿ ಸಮೀಕ್ಷೆಗೆ ಬಂದಿದ್ದಾರೆಂದು ಭಯಗೊಂಡು ಆ ರೀತಿ ಮಾಡಿದ್ದಾರೆ.
ಜಮೀರ್‌ ಅಹ್ಮದ್‌ ಖಾನ್‌, ಶಾಸಕ‌

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.