ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಕಲಬುರಗಿಯ ಸೋಂಕಿತ ಮೃತನ ಏರಿಯಾದಲ್ಲಿ ಸಹೋದರ ಸುತ್ತಾಟ ; ಬಸ್ ಮೂಲಕ ನಗರಕ್ಕೆ ವಾಪಸ್

Team Udayavani, Apr 6, 2020, 10:20 PM IST

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಬಾಗಲಕೋಟೆ : ನಗರದ ಕಿರಾಣಿ ಅಂಗಡಿ ವರ್ತಕ, ಕೋವಿಡ್ 19 ವೈರಸ್ ಸೋಂಕಿನಿಂದ ಮೃತಪಟ್ಟ ವೃದ್ಧನ ಕುಟುಂಬಕ್ಕೆ ಈ ಸೋಂಕು ತಗುಲುವುದಕ್ಕೆ ಕಲಬುರಗಿಯ ನಂಟು ಇರುವ ಸಂಶಯವಿದ್ದು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೃದ್ಧ ಈ ಸೋಂಕಿಗೆ ಬಲಿಯಾಗಿದ್ದಾನೆ. ಆತನ ಸಹೋದರ ಮತ್ತು ಪತ್ನಿಗೂ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ನಗರಕ್ಕೆ ಈ ಸೋಂಕು ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸದ್ಯದ ಪ್ರಾಥಮಿಕ ಮಾಹಿತಿ ಪ್ರಕಾರ, ಕಲಬುರಗಿಯಿಂದ ಈ ಸೋಂಕು ಬಂದಿರುವ ಸಾಧ್ಯತೆ ಇದೆ ಎಂದರು.

ಮೃತ ವೃದ್ಧನ ಸಹೋದರ ಮಾ. 15ರಂದು ರೈಲ್ವೆ ಮೂಲಕ ಕಲಬುರಗಿಗೆ ಹೋಗಿದ್ದ. ಅಲ್ಲಿನ ಮೊಮಿನಪುರ, ಗಂಜ್ ಪ್ರದೇಶದಲ್ಲಿ (ಕಲಬುರಗಿಯಲ್ಲಿ ಸೋಂಕಿನಿಂದ ಮೃತಪಟ್ಟವನ ಪ್ರದೇಶ ಇದಾಗಿತ್ತು) ಆತನ ಸ್ನೇಹಿತರೊಂದಿಗೆ ತಿರುಗಾಡಿದ್ದ. ಕಲಬುರಗಿಯಲ್ಲಿ ಮೃತಪಟ್ಟ ವ್ಯಕ್ತಿಯ ಏರಿಯಾದ ಮನೆಯ ಬಳಿಯೂ ಬಾಗಲಕೋಟೆಯ ವೃದ್ಧನ ಸಹೋದರ ತಿರುಗಾಡಿದ ಕುರಿತು ಪ್ರಾಥಮಿಕ ಮಾಹಿತಿ ಇದೆ.

ಅಲ್ಲದೇ ಕಲಬುರಗಿಯಲ್ಲಿನ ಅವರ ಸಂಬಂಧಿಕರ ಮನೆ, ಹೊಟೇಲ್‌ನಲ್ಲಿ ಊಟವೂ ಮಾಡಿದ್ದಾರೆ. ಬಳಿಕ ಮಾ. 16ರಂದು ಬಸ್ ಮೂಲಕ ವಿಜಯಪುರಕ್ಕೆ ಬಂದು, ಅಲ್ಲಿಂದ ರಾತ್ರಿ 10.30ಕ್ಕೆ ಬಾಗಲಕೋಟೆಗೆ ಬಂದಿದ್ದಾರೆ. ಈ ಕುರಿತು ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.

ವೃದ್ಧನ ಸಹೋದರನಿಗೆ ಕಲಬುರಗಿಯಿಂದಲೇ ಈ ಸೋಂಕು ಬಂದಿರುವ ಸಾಧ್ಯತೆ ಇದೆ. ವೃದ್ಧನಿಗೆ ವಯಸ್ಸಾದ ಹಿನ್ನೆಲೆಯಲ್ಲಿ ಅತಿಬೇಗ ಈ ಸೋಂಕು ಕಾಣಿಸಿಕೊಂಡಿದ್ದು, ತಪಾಸಣೆ ಮಾಡಿದ ಬಳಿಕ ಸಹೋದರ ಮತ್ತು ವೃದ್ಧನ ಪತ್ನಿಗೂ ಪಾಜಿಟಿವ್ ಎಂದು ಬಂದಿದೆ. ಈ ಕುರಿತು ಕೂಲಂಕುಶ ಪರಿಶೀಲನೆ ನಡೆಯುತ್ತಿದೆ ಎಂದು ಕಾರಜೋಳ ಹೇಳಿದರು.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.