ಪಡಿತರ ಪಡೆಯುವಾಗ ಇರಲಿ ಅಂತರ

ಎರಡು ತಿಂಗಳ ಪಡಿತರ ಈಗಲೇ ವಿತರಣೆ: ಡಿಸಿಅಂಗಡಿ ಎದುರು ಹಾಕಲಾದ ಚೌಕದಲ್ಲೇ ನಿಲ್ಲಿ

Team Udayavani, Apr 8, 2020, 1:33 PM IST

08-April-16

ಶಿವಮೊಗ್ಗ: ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಎಪ್ರಿಲ್‌ ಮತ್ತು ಮೇ ತಿಂಗಳ ಪಡಿತರವನ್ನು ಈಗಾಗಲೇ ವಿತರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಜನ ನೂಕುನುಗ್ಗಲಾಗದಂತೆ ಸಾಮಾಜಿಕ ಅಂತರ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದ್ದಾರೆ.

ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತು ಮಾಡುವಂತೆ ಸೂಚನೆ ನೀಡಲಾಗಿದೆ. ಅಂಗಡಿಗಳ ಎದುರು ಬಾಕ್ಸ್‌ ಗುರುತು ಹಾಕಲಾಗಿದೆ. ಜನ ಕಡ್ಡಾಯವಾಗಿ ನಿಗದಿತ ಚೌಕದೊಳಗೆ ನಿಂತು ಸರತಿ ಸಾಲಿನಲ್ಲಿ ಪಡಿತರ ಪಡೆಯುವಂತೆ ಸೂಚನೆ ನೀಡಿದ್ದಾರೆ. ಕೆಲವು ಕಡೆ ಜನ ನಿಗದಿತ ಗುರುತಿನ ಒಳಗೆ ನಿಲ್ಲದೆ, ಗುಂಪಾಗಿ ನಿಲ್ಲುತ್ತಿರುವ ಬಗ್ಗೆ ದೂರುಗಳು ಬಂದಿವೆ. ಪ್ರತಿಯೊಂದು ಕಡೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರುವುದನ್ನು ಖಾತ್ರಿಪಡಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪಿಡಿಒಗಳು, ನಗರ ಮಟ್ಟದಲ್ಲಿ ಆಹಾರ ನಿರೀಕ್ಷಕರು, ಮಹಾನಗರ ಪಾಲಿಕೆ ಸಿಬ್ಬಂದಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳ ಮಾಲಿಕರಿಗೆ ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಜಿಲ್ಲೆಯ ಶೇ 94ರಷ್ಟು ಜನರಿಗೆ ಪಡಿತರ: ಜಿಲ್ಲೆಯಲ್ಲಿ 3,55,232 ಬಿಪಿಎಲ್‌ ಕಾರ್ಡುಗಳು, 37,912 ಅಂತ್ಯೋದಯ ಕಾರ್ಡ್‌ಗಳಿವೆ. 3.93 ಲಕ್ಷ ಕುಟುಂಬಗಳು ಪಡಿತರ ವ್ಯವಸ್ಥೆ ಅಡಿ ಬರುತ್ತವೆ. 2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಇರುವುದು 4.6 ಲಕ್ಷ ಕುಟುಂಬಗಳು ಅಂದರೆ ಜಿಲ್ಲೆಯ ಶೇ. 94ರಷ್ಟು ಜನ ಬಡವರು. ಎಲ್ಲರಿಗೂ ಈ ಬಾರಿ ಎರಡು ತಿಂಗಳ ಪಡಿತರ ದೊರೆಯುತ್ತಿದೆ. ಜಿಲ್ಲೆಯಲ್ಲಿ 567 ನ್ಯಾಯಬೆಲೆ ಅಂಗಡಿಗಳಿವೆ. ಸಹಕಾರ ಸಂಘಗಳೂ ಸೇರಿ ಪಡಿತರ ವಿತರಿಸುವ ಪ್ರತಿಯೊಂದು ಅಂಗಡಿಗೂ ಕನಿಷ್ಠ 300 ರಿಂದ 2,500 ಪಡಿತರ ಚೀಟಿದಾರರಿಗೆ ಪಡಿತರ ವಿತರಿಸುವ ಜವಾಬ್ದಾರಿ ನೀಡಲಾಗಿದೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳು ಅತಿ ಹೆಚ್ಚು ಪಡಿತರ ವಿತರಿಸುತ್ತವೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ತಲಾ 10 ಕೆ.ಜಿ.ಅಕ್ಕಿ, 4 ಕೆ.ಜಿ. ಗೋಧಿ ನೀಡಲಾಗುತ್ತಿದೆ. ಅಂತ್ಯೋದಯ ಕಾರ್ಡ್‌ ಹೊಂದಿರುವವರಿಗೆ 70 ಕೆ.ಜಿ.ಅಕ್ಕಿ ವಿತರಿಸಲಾಗುತ್ತಿದೆ. ಎಪಿಎಲ್‌ ಹೊಂದಿರುವ ಏಕ ಸದಸ್ಯ ಕಾರ್ಡಿಗೆ 10
ಕೆ.ಜಿ. ಅಕ್ಕಿ, ಇಬ್ಬರಿಗಿಂತ ಹೆಚ್ಚಿನ ಸದಸ್ಯರಿರುವ ಕಾರ್ಡುದಾರರಿಗೆ 20 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.