ಅಕಾಲಿಕ ಮಳೆಗೆ ಭತ್ತ ನಷ್ಟ: ರೈತರಿಗೆ ಶೀಘ್ರ ಪರಿಹಾರ ನೀಡಲಾಗುವುದು ಎಂದ ಸಚಿವ ಬಿ ಸಿ ಪಾಟೀಲ್
Team Udayavani, Apr 9, 2020, 1:17 PM IST
ಗಂಗಾವತಿ: ಅಕಾಲಿಕ ಮಳೆಗಾಳಿಗೆ ಗಂಗಾವತಿ, ಕಾರಟಗಿ, ಕನಕಗಿರಿ ತಾಲೂಕಿನ ಭತ್ತದ ಬೆಳೆದ ಪ್ರದೇಶಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಅಕಾಲಿಕ ಮಳೆಗೆ ರೈತರು ಬೆಳೆದ ಭತ್ತ ಸಂಪೂರ್ಣ ನಷ್ಟವಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಇದರಿಂದ ರೈತರು ಧೃತಿಗೆಡಬಾರದು. ಸರಕಾರ ರೈತರ ಪರವಾಗಿದ್ದು, ಮುಖ್ಯಮಂತ್ರಿಗಳಿಗೆ ಸರ್ವೇ ವರದಿ ಸಲ್ಲಿಸಿ ಪ್ರತಿ ಎಕರೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ ಪರಿಹಾರ ಕೊಡಲಾಗುತ್ತದೆ. ತೋಟಗಾರಿಕೆಯ ಬೆಳೆಗಳು ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು, ಇದಕ್ಕೂ ಪರಿಹಾರ ಕೊಡಿಸಲಾಗುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಭತ್ತ ಹಾಗು ಕೃಷಿ ತೋಟಗಾರಿಕೆ ಬೆಳೆಗಳ ಖರೀದಿ ಮತ್ತು ಸಾಗಾಣಿಕೆ ನಡೆಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಿ, ಪರವಾನಿಗೆ ನೀಡಲಾಗುತ್ತದೆ ಎಂದರು.
ಜೀರಾಳ ಕಲ್ಗುಡಿ, ಹಣವಾಳ ಬಾಪಿರೆಡ್ಡಿ ಕ್ಯಾಂಪ್, ಬಸಾಪಟ್ಟಣ ಸೇರಿ ವಿವಿಧ ಗ್ರಾಮಗಳಲ್ಲಿ ನಷ್ಟವಾದ ಭತ್ತದ ಗದ್ದೆಗರ ಭೇಟಿ ನೀಡಿ ವೀಕ್ಷಿಸಿ ರೈತರ ಜತೆ ಮಾತುಕತೆ ನಡೆಸಲಾಯಿತು.
ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ದಡೇಸುಗೂರು ಬಸವರಾಜ, ಮಾಜಿ ಶಾಸಕ ಜಿ.ವೀರಪ್ಪ,ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಬೆಳಗುರ್ಕಿ ಹನುಮನಗೌಡ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ರೈತ ಮುಖಂಡರಾದ ಸಿಂಗನಾಳ ವಿರೂಪಾಕ್ಷಪ್ಪ, ತಿಪ್ಪೇರುದ್ರಸ್ವಾಮಿ ಸೇರಿ ಅನೇಕರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ