ರೈತರ ಸಂಕಷ್ಟ ಪರಿಹಾರಕ್ಕೆ ಚಿಂತನೆ

ಮೇ 1 ರಿಂದ ಕೇಂದ್ರ ಸರಕಾರದಿಂದ ಎರಡು ತಿಂಗಳ ಪಡಿತರ ವಿತರಣೆ

Team Udayavani, Apr 14, 2020, 6:00 PM IST

ರೈತರ ಸಂಕಷ್ಟ ಪರಿಹಾರಕ್ಕೆ ಚಿಂತನೆ

ಬಳ್ಳಾರಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯ  ಸರ್ಕಾರದ ಮಾದರಿಯಲ್ಲೇ ಕೇಂದ್ರ ಸರ್ಕಾರಸಹ ಬಿಪಿಎಲ್‌ ಪಡಿತರದಾರರಿಗೆ ಎರಡು ತಿಂಗಳ ಪಡಿತರ ವಿತರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್‌. ಆನಂದ್‌ಸಿಂಗ್‌ ಹೇಳಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೊರೊನಾ ವೈರಸ್‌ ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಬಿಪಿಎಲ್‌ ಪಡಿತರದಾರರಿಗೆ ಎರಡು ತಿಂಗಳ ಪಡಿತರ ಧಾನ್ಯಗಳನ್ನು ವಿತರಿಸಿದ್ದು, ಜಿಲ್ಲೆಯಲ್ಲಿ ಶೇ.85 ರಷ್ಟು ಪೂರ್ಣಗೊಳಿಸಿದೆ. ಇದೀಗ ಅದೇ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ಬಿಪಿಎಲ್‌  ಪಡಿತರದಾರರಿಗೆ ಒಬ್ಬರಿಗೆ ತಿಂಗಳಿಗೆ 5 ಕೆಜಿ ಅಕ್ಕಿ, ಪಡಿತರ ಚೀಟಿಯೊಂದಕ್ಕೆ 2 ಕೆಜಿ ಬೇಳೆಯಂತೆ ಎರಡು ತಿಂಗಳಿಗೆ 10 ಕೆಜಿ ಅಕ್ಕಿ, ಬೇಳೆಯನ್ನು ವಿತರಿಸಲಾಗುತ್ತದೆ. ಇದೇ ಮೇ 1 ರಿಂದ ದೇಶಾದ್ಯಂತ ಪಡಿತರ ವಿತರಣೆ ಕಾರ್ಯ ಚಾಲನೆ ಪಡೆದುಕೊಳ್ಳಲಿದೆ ಎಂದು ವಿವರಿಸಿದರು.

ದೆಹಲಿ ಜಮಾತ್‌ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯಿಂದ 112 ಜನ ಭಾಗವಹಿಸಿದ್ದು, ಈ ಪೈಕಿ 80 ಜನರು ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಇದರಲ್ಲಿ ಒಬ್ಬರಿಗೆ ಪಾಸಿಟಿವ್‌ ಬಂದಿದ್ದು, ಉಳಿದ 79 ಜನರಿಗೆ ನೆಗೆಟಿವ್‌ ಇದೆ. ಈ 79 ಜನರಿಗೆ ಏ.16 ರಂದು ಎರಡನೇ ಬಾರಿಗೆ ಪರೀಕ್ಷೆ ನಡೆಸಲಾಗುವುದು. ಈ ವೇಳೆ ಶೇ.85 ರಷ್ಟು ಎಲ್ಲರದ್ದು ನೆಗೆಟಿವ್‌ ಎಂದು ಬರುವ ವಿಶ್ವಾಸವಿದೆ. ಈ ಮೂಲಕ ಬಳ್ಳಾರಿ ಜಿಲ್ಲೆ ಸುರಕ್ಷಿತವಾಗಲಿದೆ ಎಂದು  ತಿಳಿಸಿದರು.

ರೈತರಿಗೆ ಪರಿಹಾರ ನೀಡಲು ಚಿಂತನೆ:
ದೇಶಾದ್ಯಂತ ಲಾಕ್‌ಡೌನ್‌ ವಿಧಿಸಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ಸೇರಿ ರಾಜ್ಯಾದ್ಯಂತ ರೈತರು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ರೈತರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ನಿರ್ದೇಶಕರಿಂದ ಸಹಾಯವಾಣಿ ಆರಂಭಿಸಲಾಗುತ್ತಿದೆ ಎಂದರು. ಇದಕ್ಕೂ ಮುಖ್ಯವಾಗಿ ಬೆಳೆಯ ಬೆಲೆ ಕುಸಿಯುತ್ತಿದೆ. ಈಚೆಗೆ ಹೈದರಾಬಾದ್‌ ಗೆ ಲಾರಿಯಲ್ಲಿ ಕೊಂಡೊಯ್ದಿದ್ದ ಅಂಜೂರವನ್ನು ಖರೀದಿಸುವವರಿಲ್ಲದೇ ವಾಪಸ್‌ ತರಲಾಗಿದೆ. ಬಳ್ಳಾರಿ, ಸಿರುಗುಪ್ಪ,
ಕೊಪ್ಪಳ, ಗಂಗಾವತಿಯಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳೆಹಾನಿಯಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ಸಂಕಷ್ಟದಲ್ಲಿರುವ ರೈತರಿಗೆ ಸಾಧ್ಯವಾದಷ್ಟು ಪರಿಹಾರ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಭರವಸೆ ನೀಡಿದರು.

ಬಳ್ಳಾರಿ ವಿಮ್ಸ್‌ನಲ್ಲಿ ನೂತನವಾಗಿ ತೆರೆಯಲಾಗಿರುವ ಟೆಸ್ಟಿಂಗ್‌ ಲ್ಯಾಬ್‌ನಲ್ಲಿ ಸಿಬ್ಬಂದಿ ಕೊರತೆ ಇರುವ ಬಗ್ಗೆ ವಿಮ್ಸ್‌ ನಿರ್ದೇಶಕರೊಂದಿಗೆ ಚರ್ಚಿಸಲಾಗುವುದು
ಎಂದ ಸಚಿವರು, ಕೊರೊನಾ ವೈರಸ್‌ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಪೊಲೀಸರು, ಜಿಲ್ಲಾಡಳಿತಕ್ಕೆ ಒಂದು ಸೆಲ್ಯೂಟ್‌ ಹೊಡೆಯುತ್ತೇನೆ ಎಂದರು.  ಸಂಸದ ವೈ.ದೇವೇಂದ್ರಪ್ಪ, ಶಾಸಕ ಎಂ.ಸೋಮಲಿಂಗಪ್ಪ, ಜಿಪಂ ಸಿಇಒ ಕೆ.ನಿತೀಶ್‌, ಎಸ್‌ಪಿ ಸಿ.ಕೆ. ಬಾಬಾ ಇತರರಿದ್ದರು.

ಬಳ್ಳಾರಿ ವಿಮ್ಸ್‌ನಲ್ಲಿ ಈಚೆಗೆ ತೆರೆಯಲಾಗಿರುವ ಟೆಸ್ಟಿಂಗ್‌ ಲ್ಯಾಬ್‌ 110 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯ ಹೊಂದಿದೆ. ಆದರೆ, ರಕ್ತದ ಮಾದರಿಗಳನ್ನು ಸಂಗ್ರಹಿಸುವಲ್ಲಿ ನಿಧಾನವಾಗುತ್ತಿದೆ. ಸದ್ಯ ಲ್ಯಾಬ್‌ನಲ್ಲೂ ಕಡಿಮೆ ಸಿಬ್ಬಂದಿ ಇದ್ದು, 2 ಶಿಫ್ಟ್‌ ನಡೆಯುತ್ತಿದೆ. ಇನ್ನು ಕೇಂದ್ರ ಸರ್ಕಾರದ ನಿಯಮದ ಪ್ರಕಾರ ಅಧಿಕಾರಿಗಳು ಟ್ರಿಪಲ್‌ ಲೇಯರ್‌ ಮಾಸ್ಕ್ ಧರಿಸಬೇಕು. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಸಿಬ್ಬಂದಿ ಎನ್‌95 ಮಾಸ್ಕ್ ನೀಡಬೇಕು ಎಂದಿದೆ. ಅದರಂತೆ ಆಶಾ, ಅಂಗನವಾಡಿ ಕಾರ್ಯಕರ್ತರಿಗೆ ಟ್ರಿಪಲ್‌ ಲೇಯರ್‌ ಮಾಸ್ಕ್ ನೀಡಲಾಗಿದೆ. ಜತೆಗೆ ಜಿಲ್ಲೆಗೆ ಟ್ರಿಪಲ್‌ ಲೇಯರ್‌ ಮಾಸ್ಕ್ 2 ಲಕ್ಷ ಬಂದಿದ್ದು, ಸದ್ಯ 94 ಸಾವಿರ ದಾಸ್ತಾನಿದೆ. ಆಶಾ, ಅಂಗನವಾಡಿ ಕಾರ್ಯಕರ್ತರಿಗೆ ಒಬ್ಬರಿಗೆ 10 ರಂತೆ ಎಲ್ಲ ಪಿಎಚ್‌ಸಿ, ತಾಲೂಕು ಆಸ್ಪತ್ರೆಗಳಿಗೆ ಪೂರೈಸಲಾಗಿದೆ. ಜತೆಗೆ ಗೌನ್‌ಗಳನ್ನು ನೀಡಲಾಗಿದೆ ಎಂದು ಡಿಸಿ ಎಸ್‌.ಎಸ್‌. ನಕುಲ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.