ಅರೆ ಸುಟ್ಟ ಕಟ್ಟಿಗೆ ಬಳಸಿ ಮಗನ ಅಂತ್ಯ ಸಂಸ್ಕಾರ


Team Udayavani, Apr 15, 2020, 7:44 AM IST

ಅರೆ ಸುಟ್ಟ ಕಟ್ಟಿಗೆ ಬಳಸಿ ಮಗನ ಅಂತ್ಯ ಸಂಸ್ಕಾರ

ಬೆಳಗಾವಿ: ಅರೆಬರೆ ಸುಟ್ಟ ಕಟ್ಟಿಗೆ ಬಳಸಿ ಅಂತ್ಯಸಂಸ್ಕಾರ ನಡೆಸಿದ ತಾಯಿ-ಮಗಳು.

– ಬೆಳಗಾವಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆ
– ಕಣ್ಣೀರು ಸುರಿಸುತ್ತಲೇ ಅಣ್ಣನ ಚಿತೆಗೆ ಬೆಂಕಿ ಇಟ್ಟ ತಂಗಿ
– ತಾಯಿ-ಮಗಳ ಸಂಕಷ್ಟಕ್ಕೆ ಸ್ಪಂದಿಸಿದ ಎಸ್‌ಪಿ
– ವಾಹನ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು

ಬೆಳಗಾವಿ: ಮೃತ ಪಟ್ಟ ಮಗನ ಶವ ಸುಡಲು ಹಣವಿಲ್ಲದೇ, ಇತರೆ ಶವಗಳನ್ನು ಸುಟ್ಟು ಅಳಿದುಳಿದು ಬಿದ್ದಿದ್ದ ಕಟ್ಟಿಗೆಗಳನ್ನೇ ಕೂಡಿಸಿ ಅಂತ್ಯಸಂಸ್ಕಾರ ನೆರ ವೇರಿಸಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ಸದಾಶಿವ ನಗರದ ಸ್ಮಶಾನದಲ್ಲಿ ಜರುಗಿದೆ. ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದ ವೃದ್ಧ ತಾಯಿ ಕೆಲ ದಿನಗಳ ಹಿಂದೆ ತನ್ನ ಮಗ ಸಾಗರ ಶಿಂಗೆ (33 ವರ್ಷ)ಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಸೋಮವಾರ ಮಗ ಚಿಕಿತ್ಸೆ ಫಲಿಸದೆ ಮೃತಪಟ್ಟ. ಕೊರೊನಾ ಲಾಕ್‌ಡೌನ್‌ ಕಾರಣ ಶವವನ್ನು ತನ್ನೂರಿಗೆ ಕೊಂಡೊಯ್ಯಲಾಗದೆ ನಗರದಲ್ಲೇ ಅಂತ್ಯಸಂಸ್ಕಾರ ನಡೆಸಬೇಕಾದ ಅನಿವಾರ್ಯತೆ ಬಂತು.

ವೈದ್ಯರ ಸಲಹೆಯಂತೆ ಇಲ್ಲಿಯ ಸದಾಶಿವ ನಗರದ ಸ್ಮಶಾನಕ್ಕೆ ಮಗನ ಮೃತದೇಹವನ್ನು ಆಂಬ್ಯುಲನ್ಸ್‌ನಲ್ಲಿ ತರಲಾಯಿತಾದರೂ ಶವ ಸುಡಲು ಕಟ್ಟಿಗೆಗೆ 1200 ರೂ. ನೀಡಬೇಕಿತ್ತು. ಆದರೆ ಇಷ್ಟೊಂದು ಹಣವಿಲ್ಲದ್ದರಿಂದ ಬೇರೆ ಶವ ಸುಟ್ಟಿದ್ದ ಅರೆಬರೆ ಕಟ್ಟಿಗೆಗಳನ್ನೇ ತಾಯಿ-ಮಗಳು ಆಯ್ದುಕೊಂಡು ತಂದು ಚಿತಾಗಾರ ಮೇಲಿಟ್ಟು ಅಂತಿಮ ನಮನ ಸಲ್ಲಿಸುವ ದೃಶ್ಯ ಕಲ್ಲು ಹೃದಯವನ್ನೂ ಕರಗಿಸುವಂತಿತ್ತು. ಕಣ್ಣೀರು ಸುರಿಸುತ್ತಲೇ ಅಣ್ಣನ ಮೃತದೇಹಕ್ಕೆ ತಂಗಿಯೇ ಬೆಂಕಿ ನೀಡುವುದರ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದಳು. ಈ ತಾಯಿಗೆ ಕರುಳ ಬಳ್ಳಿ ಕಳೆದುಕೊಂಡ ನೋವು ಒಂದೆಡೆ ಕಾಡುತ್ತಿದ್ದರೆ, ಇನ್ನೊಂದೆಡೆ ತನ್ನ ಸ್ವಂತ ಊರು ಸೇರಬೇಕೆಂಬ ಸಂಕಟವೂ ಇತ್ತು. ಈ ವಿಷಯ ತಿಳಿದು ತಾಯಿ-ಮಗಳ ಸಂಕಟಕ್ಕೆ ಸ್ಪಂದಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ವಾಹನ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಟಾಪ್ ನ್ಯೂಸ್

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.