ಮತ್ತೂಂದು ಭರ್ಜರಿ ಆ್ಯಕ್ಷನ್‌ ಚಿತ್ರ ಒಪ್ಪಿದ ವಿನೋದ್‌ ಪ್ರಭಾಕರ್‌


Team Udayavani, Apr 15, 2020, 9:58 AM IST

cinema-tdy-2

ವಿನೋದ್‌ ಪ್ರಭಾಕರ್‌ ದರ್ಶನ್‌ ಜೊತೆ “ರಾಬರ್ಟ್‌’ ನಲ್ಲಿ ನಟಿಸಿರೋದು ಗೊತ್ತೇ ಇದೆ. ಸದ್ಯಕ್ಕೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿದ್ದಾರೆ.

ಆದರೂ, ಹೊಸ ಸಿನಿಮಾಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಹಾಗಂತ, ಚಿತ್ರೀಕರಣಕ್ಕೆ ಹೊರಡುತ್ತಿಲ್ಲ. ಕೋವಿಡ್ 19 ಸಮಸ್ಯೆ ಬಗೆಹರಿದ ನಂತರ ಅವರು ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹೌದು, ವಿನೋದ್‌ ಪ್ರಭಾಕರ್‌ ನಟಿಸಲಿರುವ ಹೊಸ ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ. ಈ ಚಿತ್ರಕ್ಕೆ ಪ್ರಮೋದ್‌ ಕುಮಾರ್‌ ನಿರ್ದೇಶಕರು. ಇನ್ನು, ಹೇಮಾವತಿ ಮುನಿಸ್ವಾಮಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಇವರು “ಕುಲ್ಫಿ’ ಚಿತ್ರ ನಿರ್ಮಿಸಿದ್ದರು. ಈಗ ವಿನೋದ್‌ ಪ್ರಭಾಕರ್‌ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇನ್ನು, “ಗೀತಾ’ ಸಿನಿಮಾದಲ್ಲಿ ನಾಯಕಿಯಾಗಿದ್ದ ಮಲಯಾಳಂ ಚಿತ್ರರಂಗದ ನಟಿ ಪಾರ್ವತಿ ಅರುಣ್‌ ವಿನೋದ್‌ ಪ್ರಭಾಕರ್‌ ಆವರಿಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ವಿನೋದ್‌ ಪ್ರಭಾಕರ್‌ ಚಿತ್ರಗಳೆಂದರೆ, ಪಕ್ಕಾ ಆ್ಯಕ್ಷನ್‌ ಮಯವಾಗಿರುತ್ತವೆ. ಈ ಸಿನಿಮಾ ಕೂಡ ಭರ್ಜರಿ ಆ್ಯಕ್ಷನ್‌ ಹೊಂದಿದ್ದು, ಈಗಿನ ಟ್ರೆಂಡ್‌ಗೆ ತಕ್ಕಂತೆ ಕಥೆ ಹೆಣೆದಿರುವ ನಿರ್ದೇಶಕರು, ವಿನೋದ್‌ ಪ್ರಭಾಕರ್‌ ಫ್ಯಾನ್ಸ್‌ಗೆ ಬೇಕಾದ ಎಲ್ಲಾ ಎಲಿಮೆಂಟ್ಸ್‌ ಇಟ್ಟು ಸಿನಿಮಾ ಮಾಡುತ್ತಿದ್ದಾರೆ.

ಕೋವಿಡ್ 19  ಸಮಸ್ಯೆ ಬಗೆಹರಿದ ಬಳಿಕ ಚಿತ್ರದ ಫ‌ಸ್ಟ್‌ ಲುಕ್‌ ಅನ್ನು ಗ್ರ್ಯಾಂಡ್‌ ಆಗಿ ರಿಲೀಸ್‌ ಮಾಡುವ ಮೂಲಕ ಮುಹೂರ್ತ ಮಾಡುವ ಯೋಚನೆ ನಿರ್ಮಾಪಕರದ್ದು. ಚಿತ್ರದಲ್ಲಿ ಭರ್ಜರಿ ಐದು ಫೈಟ್ಸ್‌ಗಳಿದ್ದು, ಚಿತ್ರದ ಎಲ್ಲಾ ಹಾಡುಗಳಿಗೂ “ಬಹದ್ದೂರ್‌’ ಚೇತನ್‌ ಸಾಹಿತ್ಯ ಬರೆಯುತ್ತಿದ್ದಾರೆ. “3 ಪೆಗ್‌’ ಖ್ಯಾತಿಯ ವಿಜೇತ್‌ ಕೃಷ್ಣ ಅವರು ಸಂಗೀತ ನೀಡುತ್ತಿದ್ದಾರೆ. ವಿನೋದ್‌ ಪ್ರಭಾಕರ್‌ ಅಭಿನಯದ “ರಾಬರ್ಟ್‌’, “ಫೈಟರ್‌’ ಹಾಗು “ಶ್ಯಾಡೋ’ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ.

ಟಾಪ್ ನ್ಯೂಸ್

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.