ಮೇ 3ರ ವರೆಗೆ ಲಾಕ್‌ಡೌನ್‌ ಸಡಿಲಿಕೆ ಬೇಡ

ಯಥಾಸ್ಥಿತಿ ಮುಂದುವರಿಸಲು ಶಾಸಕ ರೆಡ್ಡಿ ಮನವಿ |ರೇಷನ್‌ ಕಿಟ್‌ ವಿತರಣೆಗೆ ಚಾಲನೆ

Team Udayavani, Apr 20, 2020, 12:15 PM IST

20-April-09

ಬಳ್ಳಾರಿ: ಮಾರ್ಕಂಡೇಯ ದೇವಸ್ಥಾನದ ಆವರಣದಲ್ಲಿ ಶಾಸಕ ಸೋಮಶೇಖರ ರೆಡ್ಡಿ ರೇಷನ್‌ ಕಿಟ್‌ಗಳನ್ನು ವಿತರಿಸಿದರು.

ಬಳ್ಳಾರಿ: ಕೋವಿಡ್ ವೈರಸ್‌ ನಿಯಂತ್ರಿಸುವ ಸಲುವಾಗಿ ಜಾರಿಗೊಳಿಸಿರುವ ಲಾಕ್‌ಡೌನ್‌ನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸದೆ ಮೇ 3ರವರೆಗೆ ಮುಂದುವರಿದರೆ ಒಳ್ಳೆಯದು ಎಂದು ನಗರ ಶಾಸಕ ಜಿ. ಸೋಮಶೇಖರರೆಡ್ಡಿ ಹೇಳಿದರು.

ನಗರದ ಮಾರ್ಕಂಡೇಯ ದೇವಸ್ಥಾನದ ಆವರಣದಲ್ಲಿ ಪದ್ಮಶಾಲಿ ಸಮುದಾಯದಿಂದ ಸಮುದಾಯದ ಬಡಜನರಿಗೆ ರೇಷನ್‌ಕಿಟ್‌ ವಿತರಣೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಯಾವುದೇ ಔಷಧವಿಲ್ಲ. ಲಾಕ್‌ಡೌನ್‌ನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸದೆ ಮೇ 3ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಸಬೇಕು. ಮೇಲಾಗಿ ಲಾಕ್‌ಡೌನ್‌ನ್ನು ರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಂತ್ರಜ್ಞಾನದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿರುವ ಅಮೆರಿಕಾ, ಇಟಲಿ, ಸ್ಪೇನ್‌ ಸೇರಿ ಇನ್ನಿತರೆ ದೇಶಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸದ ಕಾರಣ ಸಾವಿರಾರು ಸಂಖ್ಯೆಯಲ್ಲಿ ಜನರು ಮೃತಪಟ್ಟಿದ್ದಾರೆ. ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ನಮ್ಮ ದೇಶ ಸುರಕ್ಷಿತವಾಗಿ ಇರೋದು ಎಂದ ಶಾಸಕ ಸೋಮಶೇಖರ ರೆಡ್ಡಿ, ಲಾಕ್‌ಡೌನ್‌ ಸಡಿಲಿಕೆ ವಿಚಾರದಲ್ಲಿ ಸಿಎಂ ಯಡಿಯೂರಪ್ಪನವರದ್ದು ಯಾವುದೇ ತಪ್ಪಿಲ್ಲ. ಕೂಲಿ ಕೆಲಸ ಮಾಡುವ ಬಡಜನರು ಹಸಿವಿನಿಂದ ಬಳಲುತ್ತಾರೆ ಎಂಬ ಉದ್ದೇಶದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರು.

ಎಲ್ಲವೂ ಬೇಡ ಎಂದಿದ್ದಕ್ಕೆ ಸಡಿಲಿಕೆಯನ್ನು ಹಿಂಪಡೆದಿದ್ದಾರೆ. ಇದು ಜನಾಭಿಪ್ರಾಯವಾಗಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ದೇಶದ ಇತಿಹಾಸದಲ್ಲಿ ನರೇಂದ್ರ ಮೋದಿಯವರಂಥ ಪ್ರಧಾನಿ ಸಿಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದರೆ ಇಡಿ ದೇಶವೇ ಮನ್ನಣೆ ನೀಡುತ್ತದೆ ಎಂದವರು ಕೊಂಡಾಡಿದರು. ಇದಕ್ಕೂ ಮುನ್ನ ಪದ್ಮಶಾಲಿ ಸಮುದಾಯದ ಬಡಜನರಿಗೆ ಅಕ್ಕಿ, ಬೇಳೆ, ಎಣ್ಣೆ, ಸೋಪು ಸೇರಿ ಇತರೆ ವಿವಿಧ ದಿನಸಿ ವಸ್ತುಗಳುಳ್ಳ ರೇಷನ್‌ ಕಿಟ್‌ಗಳನ್ನು ವಿತರಿಸಲಾಯಿತು.

ಈ ವೇಳೆ ಪಾಲಿಕೆ ಸದಸ್ಯ ಮೋತ್ಕರ್‌ ಶ್ರೀನಿವಾಸ್‌, ಕೆಎಂಎಫ್‌ ನಿರ್ದೇಶಕ ವೀರಶೇಖರರೆಡ್ಡಿ, ಸಮುದಾಯದ ಮುಖಂಡ ಅವ್ವಾರು ಮಂಜುನಾಥ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.