ರೈತರಿಗೆ ತೊಂದರೆಯಾಗದಂತೆ ನೋಡ್ಕೊಳ್ಳಿ

Team Udayavani, Apr 20, 2020, 1:15 PM IST

ರೈತರಿಗೆ ತೊಂದರೆಯಾಗದಂತೆ ನೋಡ್ಕೊಳ್ಳಿ

ಸಾಂದರ್ಭಿಕ ಚಿತ್ರ

ಧಾರವಾಡ: ಮುಂಗಾರು ಹಂಗಾಮಿನ ಸಿದ್ಧತೆಯಲ್ಲಿ ತೊಡಗಿರುವ ರೈತರಿಗೆ ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಅವಧಿಯಲ್ಲಿ ತೊಂದರೆಯಾಗಬಾರದು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

ತಾಲೂಕಿನ ಗರಗ ಗ್ರಾಮದ ಸಮುದಾಯ ಭವನದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತಂತೆ ನಡೆದ ಗರಗ ಹೋಬಳಿ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಮಳೆ ಆರಂಭವಾಗುತ್ತಿದ್ದು, ರೈತರು ಬಿತ್ತನೆಗೆ ಸಿದ್ಧಗೊಳಿಸಲು ಹೋಗುತ್ತಿದ್ದು, ಪೊಲೀಸ್‌ ಅ ಧಿಕಾರಿಗಳು ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಯಾವುದೇ ತೊಂದರೆ ನೀಡಬಾರದು. ಸಕಾಲಕ್ಕೆ ಬೀಜ, ಗೊಬ್ಬರ ಸಿಗುವಂತೆ ಮುಂಜಾಗ್ರತೆ ವಹಿಸಬೇಕು. ಇದರ ಜತೆಗೆ ಪಡಿತರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ, ಪಡಿತರ ತೂಕದಲ್ಲಿ ವ್ಯತ್ಯಾಸ-ಮೋಸವಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು. ಗ್ರಾಮೀಣ ಭಾಗದ ಪಡಿತರ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ ಖಚಿತ ಪಡಿಸಿಕೊಳ್ಳಬೇಕೆಂದು ಸೂಚಿಸಿದರು.

ತಹಶೀಲ್ದಾರ್‌ ಸಂತೋಷ ಬಿರಾದಾರ ಮಾತನಾಡಿ, ಸಾರ್ವಜನಿಕರಿಗೆ ಕಿರಾಣಿ ಹಾಗೂ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಸರಬರಾಜು ಆಗುತ್ತಿರುವ ಬಗ್ಗೆ ಗಮನಿಸಲಾಗುತ್ತಿದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಮುಂದಿನ ಎರಡು ತಿಂಗಳ ಅವಧಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ತಾಲೂಕು ವ್ಯಾಪ್ತಿಯಲ್ಲಿ ಸಂತ್ರಸ್ತರ ಕೇಂದ್ರಗಳನ್ನು ತೆರೆಯಲಾಗಿದ್ದು, ಅಲ್ಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಹೊರ ಜಿಲ್ಲೆಯ ವ್ಯಕ್ತಿಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಅವರಿಗೆ ಉಚಿತ ಊಟ, ವಸತಿ ಹಾಗೂ ಔಷಧ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಎಂದರು.

ಸಹಾಯಕ ಕೃಷಿ ನಿರ್ದೇಶಕ ಸಿ.ಜಿ. ಮೆತ್ರಿ ಮಾತನಾಡಿ, ಕೃಷಿ ಚಟುವಟಿಕೆ ಆರಂಭಿಸಲು ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರ, ಕೃಷಿ ಉಪಕರಣ, ಔಷಧಗಳ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬೀಜ, ರಸಗೊಬ್ಬರ ಸಾಕಷ್ಟು ದಾಸ್ತಾನು ಇದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕಡಲೆ ಖರೀದಿ ಕೇಂದ್ರಗಳನ್ನು ಮರು ಆರಂಭಿಸಲಾಗಿದ್ದು, ರೈತರು ಖರೀದಿ ಕೇಂದ್ರಗಳಿಗೆ ಕಡಲೆ ತರುತ್ತಿದ್ದಾರೆ ಎಂದರು.

ಧಾರವಾಡ ಗ್ರಾಮೀಣ ಸಿಪಿಐ ಎಸ್‌ .ಸಿ. ಪಾಟೀಲ ಮಾತನಾಡಿ, ಧಾರವಾಡ ಗ್ರಾಮೀಣ ಭಾಗದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಹಾಗೂ ಲಾಕ್‌ಡೌನ್‌ ಮತ್ತು ನಿಷೇಧಾಜ್ಞೆ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುವವರ ಹಾಗೂ ವಾಹನ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಧ್ವನಿವರ್ಧಕ ಮೂಲಕ ಮಾಹಿತಿ ನೀಡಲಾಗಿದೆ ಎಂದರು.

ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಎಸ್‌.ಎಸ್‌. ಕಾದೊಳ್ಳಿ ಸೇರಿದಂತೆ ಗರಗ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಪಂ ಕಾರ್ಯದರ್ಶಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.