ಮದ್ಯ ಮಾರಾಟ ತಡೆಗಟ್ಟಲು ತಾಕೀತು

Team Udayavani, Apr 20, 2020, 3:53 PM IST

20-April-25

ವಿಜಯಪುರ: ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ಕೊರೊನಾ ಕುರಿತು ಶಾಸಕರು-ಅಧಿಕಾರಿಗಳ ಸಭೆ ಜರುಗಿತು.

ವಿಜಯಪುರ: ಕೋವಿಡ್‌-19 ಕೊರೊನಾ ಸೋಂಕು ಹರಡದಂತೆ ಸರ್ಕಾರ ಲಾಕ್‌ಡೌನ್‌ ಮಾಡಿದ್ದರೂ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಸರಬರಾಜು ನಡೆಯುತ್ತಿದೆ ಎಂದು ಶಾಸಕರೇ ದೂರುತ್ತಿದ್ದಾರೆ. ಕಾರಣ ತಕ್ಷಣ ಇಂಥ ಅಕ್ರಮಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರವಿವಾರ ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕೋವಿಡ್‌-19 ಕೊರೊನಾ ರೋಗ ನಿಗ್ರಹಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮೇಲ್ಮನೆ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಅವರು, ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಮತ್ತೂಂದೆಡೆ ಜಿಲ್ಲೆಯ ಸುತ್ತಲೂ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳೇ ಇದ್ದು, ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯೂ ಆಗಿದೆ. ಆದರೆ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ಸಾಗಿರುವುದು ಆತಂಕ ಮೂಡಿಸಿದೆ ಎಂದು ದೂರಿದರು.

ಇದರಿಂದ ಅಬಕಾರಿ ಆಯುಕ್ತರು ತಕ್ಷಣ ಕಾರ್ಯಪ್ರವೃತ್ತರಾಗಿ ಅಕ್ರಮ ಮದ್ಯ ಸಾಗಾಟ- ಮಾರಾಟ ಬಗ್ಗೆ ದೂರುಗಳ ಬರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಕೊರೊನಾ ಸೋಂಕು ಪರೀಕ್ಷೆಗಾಗಿ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಲಬುರಗಿ, ಹುಬ್ಬಳ್ಳಿ, ಬಳ್ಳಾರಿ, ಗದಗ ಬೆಳಗಾವಿ ನಗರಗಳಲ್ಲಿ ಪ್ರಯೋಗಾಲಯ ಸ್ಥಾಪಿಸಲಾಗಿದೆ ಎಂದು ಸಚಿವೆ ಶಶಿಕಲಾ ಅವರು ಹೇಳಿದಾಗ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ. ಕಾರಣ ವಿಜಯಪುರ ಜಿಲ್ಲೆಯಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಆದ್ಯತೆ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಶಾಸಕರು ಆಗ್ರಹಿಸಿದರು. ಈ ಹಂತದಲ್ಲಿ ಪ್ರಯೋಗಾಲಯ ಸ್ಥಾಪನೆ ಮಾತ್ರವಲ್ಲ ಜಿಲ್ಲೆಗೆ ಅಗತ್ಯ ಔಷ ಧ-ವೈದ್ಯಕೀಯ ಪರಿಕರ ಸೌಲಭ್ಯಗಳನ್ನು ಪಡೆಯಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದರು.

ಬಡ ಜನರ ಹಿತಕ್ಕೆ ಆದ್ಯತೆ ನೀಡಬೇಕು ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ. ಪಾಟೀಲ ಆಗ್ರಹಿಸಿದರು. ನಗರದಲ್ಲಿ ಸೋಂಕಿತರು ಪತ್ತೆಯಾಗುತ್ತಲೇ ರೈತರು ನಗರಕ್ಕೆ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕರು ಆತಂಕ ವ್ಯಕ್ತಪಡಿಸಿದರು. ಈ ಹಂತದಲ್ಲಿ ಉತ್ತರ ನೀಡಿದ ಜಿಲ್ಲಾ ಧಿಕಾರಿ ವೈ. ಎಸ್‌. ಪಾಟೀಲ, ಈ ಕುರಿತು ರೈತರು ನೇರವಾಗಿ ಗ್ರಾಹಕರಿಗೆ ಹಣ್ಣು-ತರಕಾರಿ ಮಾರಾಟಕ್ಕೆ ನಗರದ ಹೊರ ವಲಯದ 5 ಕಡೆಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ರೈತರು ತಮ್ಮ ಉತ್ಪನ್ನ ಸಾಗಿಸಲು ಪಾಸ್‌ ವಿತರಿಸಲಾಗುತ್ತಿದೆ. ಪೊಲೀಸ್‌ ಇಲಾಖೆ ಕೂಡ ಈ ವಿಷಯದಲ್ಲಿ ಅಗತ್ಯ ಸಹಕಾರ ನೀಡುತ್ತಿದೆ ಎಂದು ವಿವರಿಸಿದರು.

ರೈತರು ತಮ್ಮ ಉತ್ಪನ್ನ ಮಾರಾಟಕ್ಕೆ ನಿರ್ಭಯವಾಗಿ ನಗರಕ್ಕೆ ಆಗಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯವಾಗಿ ರೈತರಿಗೆ ನೆರವು ನೀಡುವಲ್ಲಿ ಪಿಡಿಒಗಳು ಇನ್ನೂ ಕ್ರಿಯಾಶೀಲವಾಗಿ ಕೆಲಸ ಮಾಡುವಂತೆ ನಿರ್ದೇಶಿಸಬೇಕು ಎಂದು ಶಾಸಕ ಶಿವಾನಂದ ಪಾಟೀಲ ಆಗ್ರಹಿಸಿದಾಗ, ಈ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವರು ಜಿಪಂ ಸಿಇಒಗೆ ಸೂಚಿಸಿದರು. ಶಾಸಕರಾದ ಎಂ.ಸಿ. ಮನಗೂಳಿ, ಸೋಮನಗೌಡ ಪಾಟೀಲ, ದೇವಾನಂದ ಚವ್ಹಾಣ, ಅರುಣ ಶಹಾಪುರ, ಜಿಪಂ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ ಇದ್ದರು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.