ಜಿಲ್ಲಾಸ್ಪತ್ರೆ ಸುತ್ತಮುತ್ತ ಬಿಗಿ ಬಂದೋಬಸ್ತ್

ಮೃತ ಬಂಟ್ವಾಳದ ಮಹಿಳೆಗೆ ಕೋವಿಡ್‌ 19 ದೃಢಪಟ್ಟ ಹಿನ್ನೆಲೆ

Team Udayavani, Apr 21, 2020, 6:15 AM IST

ಜಿಲ್ಲಾಸ್ಪತ್ರೆ ಸುತ್ತಮುತ್ತ ಬಿಗಿ ಬಂದೋಬಸ್ತ್

ಮಂಗಳೂರು: ಬಂಟ್ವಾಳದ ಮೃತ ಮಹಿಳೆಗೆ ಕೋವಿಡ್‌ 19 ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್‌ ಆಸ್ಪತ್ರೆಯಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಆಸ್ಪತ್ರೆಯ ಎರಡೂ ಗೇಟ್‌ಗಳಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು, ಆಸ್ಪತ್ರೆ ಆವರಣಕ್ಕೆ ಪ್ರವೇಶ ತಡೆ ಹಿಡಿಯಲಾಗಿದೆ.

ವೆನ್ಲಾಕ್‌ ನಲ್ಲಿ ಕೋವಿಡ್‌ 19ಕ್ಕೆ ಚಿಕಿತ್ಸೆ ಪಡೆಯುತ್ತಿದ್ದ 12 ಮಂದಿ ಗುಣ ಮುಖರಾದ ಬೆನ್ನಲ್ಲೇ ಎರಡು ದಿನಗಳಲ್ಲಿ ಮೂರು ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ರವಿವಾರ ಮೃತ ಪಟ್ಟಿದ್ದರು. ಎ. 16ರ ವರೆಗೆ ಸತತ 12 ದಿನಗಳಿಂದ ಪಾಸಿಟಿವ್‌ ಪ್ರಕರಣ ದಾಖಲಾಗದ ಜಿಲ್ಲೆಗೆ ಪ್ರಸ್ತುತ ಹೊಸ ಆತಂಕ ಎದುರಾಗಿದೆ.

ಹೆಲ್ಪ್ ಡೆಸ್ಕ್ನಿಂದ ಹಿಂದಕ್ಕೆ
ವೆನ್ಲಾಕ್‌ ನಲ್ಲಿ ರೋಗಿಗಳು ಪೊಲೀಸರ ಅನುಮತಿ ಪಡೆದು ಆಸ್ಪತ್ರೆ ಆವರಣದಲ್ಲಿರುವ ಹೆಲ್ಪ್ ಡೆಸ್ಕ್ ಬಳಿಗೆ ತೆರಳಬಹುದು. ಕೋವಿಡ್‌ 19 ಲಕ್ಷಣಗಳಿಲ್ಲದಿದ್ದರೆ ಅಲ್ಲಿಂದಲೇ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಿ ಹಿಂದಕ್ಕೆ ಕಳುಹಿಸಲಾಗುತ್ತದೆ. ಶಂಕಿತ ಕೋವಿಡ್‌ 19 ಲಕ್ಷಣಗಳಿದ್ದರೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಹೊಸ ಬ್ಲಾಕ್‌ಗೆ ಶಿಫಾರಸು ಮಾಡಲಾಗುತ್ತದೆ.

ರಸ್ತೆ ಬಂದ್‌; ಬ್ಯಾರಿಕೇಡ್‌ ಅಳವಡಿಕೆ
ಕೋವಿಡ್‌-19ಕ್ಕೆ ಮೀಸಲಾಗಿರುವ ವೆನ್ಲಾಕ್‌ ಆಸ್ಪತ್ರೆ ಆವರಣ ಪ್ರವೇಶಿಸುವ ಗೇಟ್‌ನಲ್ಲಿ ಪೊಲೀಸರು ಕಾವಲಿದ್ದಾರೆ. ಮಿಲಾಗ್ರಿಸ್‌ ಮುಖ್ಯರಸ್ತೆಯಿಂದ ಎಡಕ್ಕೆ ತಿರುವು ಪಡೆದು ಆಸ್ಪತ್ರೆಯ ಒಳಹೋ ಗುವ ರಸ್ತೆಯನ್ನು ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿದೆ. ಚಿಲಿಂಬಿ, ರೈಲ್ವೇ
ಸ್ಟೇಷನ್‌ಗಳಿಂದ ಬರುವ ಒಳ ರಸ್ತೆಗೂ ಬ್ಯಾರಿಕೇಡ್‌ ಅಳವಡಿಸಸಲಾಗಿದೆ.

ಮತ್ತೆ ಎದುರಾದ ಆತಂಕ
ದ.ಕ. ಜಿಲ್ಲೆಯಲ್ಲಿ ಮೊದಲ ಕೋವಿಡ್‌ 19 ದೃಢಪಟ್ಟದ್ದು ಭಟ್ಕಳ ಮೂಲದ ವ್ಯಕ್ತಿ ಯಲ್ಲಿ, ಮಾ. 22ರಂದು. ಅನಂತರ ಎ. 4ರ ವರೆಗೆ ಒಟ್ಟು 12 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದವು. ಎ. 5ರಿಂದ 16ರ ವರೆಗೆ ಹೊಸ ಪ್ರಕರಣ ದೃಢಪಡದ ಮತ್ತು ಚಿಕಿತ್ಸೆ ಪಡೆಯುತ್ತಿದ್ದ 12 ಮಂದಿಯೂ ಗುಣಮುಖರಾದ ಹಿನ್ನೆಲೆಯಲ್ಲಿ ಜಿಲ್ಲೆ ಕೋವಿಡ್‌ 19 ಮುಕ್ತವಾಗುವ ಸನ್ನಾಹದಲ್ಲಿತ್ತು. ಆದರೆ ಈಗ ಮೂರು ಪ್ರಕರಣ ದಾಖಲಾಗಿ ಆತಂಕ ಹೆಚ್ಚಿದೆ.

ಫೋಟೋ, ವೀಡಿಯೋಗ್ರಫಿಗೆ ಅವಕಾಶವಿಲ್ಲ
ವೆನ್ಲಾಕ್‌ ಕೋವಿಡ್‌-19 ಮೀಸಲು ಆಸ್ಪತ್ರೆಯಾಗಿರುವ ಕಾರಣ ಇಲ್ಲಿ ಒಳ ಮತ್ತು ಹೊರ ಆವರಣದಲ್ಲಿ ಫೋಟೋಗ್ರಫಿ, ವೀಡಿಯೋಗ್ರಫಿಗೆ ಅವಕಾಶ ನಿರಾಕರಿಸಲಾಗಿದೆ.

ಹೊರಭಾಗದಲ್ಲಿರುವ ರಿಕ್ಷಾ ಪಾರ್ಕಿಂಗ್‌ ಸ್ಥಳದಲ್ಲಿ ಮಾತ್ರ ವೀಡಿಯೋ, ಫೋಟೋ ತೆಗೆಯಲು ಅವಕಾಶವಿದ್ದು, ಅಗತ್ಯವಿದ್ದಲ್ಲಿ ಮಾತ್ರ ಶೂಟಿಂಗ್‌ ಮಾಡಬಹುದು ಎಂದು ಜಿಲ್ಲಾಡಳಿತ ಹೇಳಿದೆ.

ಸೂಕ್ತ ಮುನ್ನೆಚ್ಚರಿಕೆ
ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕೋವಿಡ್‌ 19 ಲಕ್ಷಣಗಳಿಲ್ಲದ ರೋಗಿಗಳನ್ನು ಹೆಲ್ಪ್ ಡೆಸ್ಕ್ನಿಂದಲೇ ಹಿಂದಕ್ಕೆ ಕಳುಹಿಸಲಾಗುತ್ತದೆ. ಶಂಕಿತ ಲಕ್ಷಣಗಳಿದ್ದಲ್ಲಿ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಹೊಸ ಬ್ಲಾಕ್‌ಗೆ ಕಳುಹಿಸಲಾಗುತ್ತದೆ. ವಿನಾಕಾರಣ ಯಾರಿಗೂ ಅನುಮತಿ ಇಲ್ಲ.
 -ಡಾ| ಸದಾಶಿವ, ವೈದ್ಯಕೀಯ ಅಧೀಕ್ಷಕರು
ವೆನ್ಲಾಕ್‌ ಆಸ್ಪತ್ರೆ, ಮಂಗಳೂರು

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.