ಸಾಲಕ್ಕೆ ಜಮಾ ಕೃಷಿ ಸಮ್ಮಾನ್‌, ಜನಧನ್‌ ಹಣ!

ಕೋವಿಡ್ ಅಟ್ಟಹಾಸ: ಲಾಕ್‌ಡೌನ್‌ ಸಂಕಷ್ಟದಲ್ಲಿ ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದ ಫ‌ಲಾನುಭವಿಗಳಿಗೆ ಶಾಕ್‌

Team Udayavani, Apr 22, 2020, 5:52 PM IST

ಸಾಲಕ್ಕೆ ಜಮಾ ಕೃಷಿ ಸಮ್ಮಾನ್‌, ಜನಧನ್‌ ಹಣ!

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಲಾಕ್‌ಡೌನ್‌ನಿಂದ ಕಂಗಾಲಾಗಿರುವ ರೈತರಿಗೆ ಹಾಗೂ ಮಹಿಳೆಯರ ಕೈ ಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಧನ್‌ ಖಾತೆದಾರರಿಗೆ ಮೊದಲ ಕಂತಾಗಿ 500 ರೂ. ಹಾಗೂ ಪ್ರಧಾನ ಮಂತ್ರಿ ಕೃಷಿ ಸನ್ಮಾನ್‌ ಯೋಜನೆಯಡಿ ಬಿಡುಗಡೆಗೊಂಡಿರುವ ತಲಾ 2000 ರೂ.ಗಳನ್ನು ಕೆಲವು ಬ್ಯಾಂಕ್‌ಗಳು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.

ಕೋವಿಡ್ ಸೋಂಕು ತಡೆಯುವ ಉದ್ದೇಶದಿಂದ ಇಡೀ ದೇಶವನ್ನು ಕೇಂದ್ರ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದು ಮೇ.3 ರ ತನಕ ಮುಂದುವರಿಯಲಿದೆ. ಇದರ ನಡುವೆ ಸರ್ಕಾರಗಳು ಜನರ ಸಂಕಷ್ಟಗಳಿಗೆ ನೆರವಾಗಲು ಜನಧನ್‌ ಖಾತೆಗೆ 500 ರೂ. ಹಾಗೂ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಡಿ 2000 ರೂ. ಬಿಡುಗಡೆ ಮಾಡಿ ರೈತರ ಹಾಗೂ ಕೃಷಿ ಕೂಲಿಕಾರರ ಕೈ ಹಿಡಿದಿದೆ.

ಸಾಲಕ್ಕೆ ಜಮೆ: ಆದರೆ ಕೇಂದ್ರ ಸರ್ಕಾರ ಹಾಕಿದ ಹಣವನ್ನು ಖುಷಿಯಿಂದ ಡ್ರಾ ಮಾಡಲು ಹೋಗುತ್ತಿರುವ ಗ್ರಾಹಕರಿಗೆ ಶಾಕ್‌ ನೀಡುವ ಕೆಲಸವನ್ನು ಬ್ಯಾಂಕ್‌ಗಳು ಮಾಡುತ್ತಿದ್ದು,
ಕಷ್ಟಕಾಲದಲ್ಲಿ ಮಾನವೀಯತೆ ಮರೆತು ಸಾಲದ ಹಣಕ್ಕೆ ಪಿಂಚಣಿ, ಜನಧನ್‌ ಖಾತೆಗೆ ಹಾಕಿರುವ ಹಣವನ್ನು ಜಮೆ ಮಾಡಿಕೊಳ್ಳುತ್ತಿದ್ದು, ಸದ್ಯದ ಗ್ರಾಹಕರ ಸ್ಥಿತಿ ದೇವರು ವರ
ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ. ಲಾಕ್‌ಡೌನ್‌ನಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಜೀವನ ತೀವ್ರ ಸಂಕಷ್ಟದಲ್ಲಿದೆ. ಆದರೆ ಜಿಲ್ಲೆಯ ಕೆಲ ಖಾಸಗಿ
ಹಾಗೂ ಸಾರ್ವಜನಿಕ ಬ್ಯಾಂಕ್‌ಗಳು ಜನರ ನೆರವಿಗೆ ಕೊಟ್ಟ ಹಣವನ್ನು ಸಾಲಕ್ಕೆ ಮುರಿದುಕೊಳ್ಳುವ ಕಾಯಕದಲ್ಲಿ ನಿರತವಾಗಿದ್ದು, ಜನರ ಆಕ್ರೋಶಕ್ಕೆ ತುತ್ತಾಗಿವೆ. ಜಿಲ್ಲೆಯಲ್ಲಿ ಅತಿ ಹಿಂದುಳಿದ ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ತಾಲೂಕುಗಳಲ್ಲಿ ಇತಂಹ ಆರೋಪಗಳು ಸಾರ್ವಜನಿಕರಿಂದ ವ್ಯಕ್ತವಾಗಿದ್ದು, ಈ ಬಗ್ಗೆ ಸಂಬಂದಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು ಎಚ್ಚೆತ್ತಿಕೊಂಡು ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕಿದೆ.

ಪಿಂಚಣಿ ಹಾಗೂ ಜನಧನ್‌ ಖಾತೆಗೆ ಜಮೆ ಆಗಿರುವ ಹಣವನ್ನು ಬ್ಯಾಂಕ್‌ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ. ಈ ಬಗ್ಗೆ ಯಾವುದೇ ಬ್ಯಾಂಕ್‌ನಲ್ಲಿ ಆಗಿದ್ದರೂ ನಾಗರಿಕರು ದೂರು
ಕೊಡಬಹುದು. ನರೇಗಾ ಕೂಲಿ ಹಣ ಸಾಲಕ್ಕೆ ಹಿಡಿಯುತ್ತಿದ್ದರ ಬಗ್ಗೆ ದೂರು ಬಂದ ತಕ್ಷಣ ಸ್ಪಂದಿಸಿ ಬ್ಯಾಂಕ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಬಸವರಾಜ್‌, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು

ವೃದ್ಧಗೆ ಬಿಡುಗಡೆಗೊಂಡಿರುವ ಪಿಂಚಣಿ, ಮಹಿಳೆಯ ಜನಧನ್‌ ಖಾತೆಗೆ ಜಮೆ ಆಗಿರುವ ಹಣ ಕೆಲವು ಬ್ಯಾಂಕ್‌ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ. ಲಾಕ್‌ಡೌನ್‌ ಮುಗಿದ ಮೇಲೆ ಕಟ್ಟು ತ್ತೇವೆಂದು ಹೇಳಿದರೂ ಕೇಳುತ್ತಿಲ್ಲ. ಸರ್ಕಾರ ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಪಡೆಯುತ್ತಿದೆ. ಬಿಳ್ಳೂರು ನಾಗರಾಜ್‌, ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯ

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.