ಕೋವಿಡ್ 19 ನಿಶ್ಯಕ್ತಿಗೆ ನರೇಗಾ ಬಲ

Team Udayavani, Apr 23, 2020, 12:18 PM IST

ಕೋವಿಡ್ 19 ನಿಶ್ಯಕ್ತಿಗೆ ನರೇಗಾ ಬಲ

ಧಾರವಾಡ: ದುಡಿಯಲು ಶಕ್ತಿ ಇದ್ದರೂ ಕೈಕಟ್ಟಿ ಕುಳಿತುಕೊಂಡಿದ್ದ ಕೂಲಿ ಕಾರ್ಮಿಕರ ಮುಖದಲ್ಲಿ ಇದೀಗ ಮಂದಹಾಸ ಮೂಡುತ್ತಿದೆ. ತಮ್ಮ ಹೊಲಗಳಲ್ಲಿಯೇ ಸಾಕಷ್ಟು ಕೆಲಸವಿದ್ದರೂ ಕೋವಿಡ್ 19 ಯಿಂದ 15 ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾದ ರೈತ ಸಮೂಹ ಮುಂಗಾರು ಪೂರ್ವ ಮಳೆಗಾಗಿ ಕಾಯುತ್ತಿತ್ತು. ಈಗ ಮಳೆಯೂ ಬಿದ್ದಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಇದೀಗ ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಸತತ ಬರಗಾಲ ಮತ್ತು ಬೆಳೆಹಾನಿಯಿಂದ ಸಂಕಷ್ಟಕ್ಕೊಳಗಾಗುವ ಹಳ್ಳಿಗರಿಗೆ ಸದಾ ಕಾಲ ತುತ್ತು ಅನ್ನ ನೀಡಿ ಕೈ ಹಿಡಿಯುವುದು ನರೇಗಾ ಯೋಜನೆ. ಕಳೆದ ತಿಂಗಳಿಂದ ಹೆಮ್ಮಾರಿ ಕೊರೊನಾ ರೈತ ಕೂಲಿ ಕಾರ್ಮಿಕರನ್ನು ನಿಜಕ್ಕೂ ಸಂಕಷ್ಟಕ್ಕೆ ಸಿಲುಕಿಸಿತ್ತು. ಒಂದೆಡೆ ಊಟಕ್ಕೆ ತತ್ವಾರ, ಇನ್ನೊಂದೆಡೆ ಕೆಲಸವೂ ಇಲ್ಲ. ಇಂತಿಪ್ಪ ಸ್ಥಿತಿ ಅರಿತ ಸರಕಾರ ಕೊನೆಗೂ ಕೃಷಿ ಕೂಲಿ ಕಾರ್ಮಿಕರ ಬೆನ್ನಿಗೆ ನಿಂತು ನರೇಗಾ ಯೋಜನೆ ಅಡಿಯಲ್ಲಿ ಬರುವ ಎಲ್ಲಾ ಕಾಮಗಾರಿಗಳಿಗೂ ಮರು ಚಾಲನೆ ನೀಡಿದೆ.  ಹೀಗಾಗಿ ಜಿಲ್ಲೆಯಾದ್ಯಂತ ನರೇಗಾ ಕೂಲಿ ಕಾಮಗಾರಿಗಳು ಮತ್ತೆ ಆರಂಭಗೊಂಡಿವೆ.

ಸುಸ್ಥಿರ ಕಾಮಗಾರಿಗಳಿಗೆ ಆದ್ಯತೆ: ಜಿಲ್ಲೆಯ ಎಲ್ಲಾ ತಾಲೂಕಿನಲ್ಲೂ ಕೃಷಿ ಸುಸ್ಥಿರ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನರೇಗಾ ಕೂಲಿ ಕಾರ್ಮಿಕರಿಂದ ಸುಸ್ಥಿರ ಕೃಷಿ, ಸುಸ್ಥಿರ ಮೀನುಗಾರಿಕೆ ಮತ್ತು ಸುಸ್ಥಿರ ಮೂಲಭೂತ ಸೌಕರ್ಯ ಒದಗಿಸಲು ಹೆಚ್ಚು ಒತ್ತು ನೀಡಲಾಗಿದೆ. ಹೊಲಗಳಲ್ಲಿ ಬದು ನಿರ್ಮಾಣ, ಕೃಷಿ ಅರಣೀಕರಣಕ್ಕೆ ಗುಂಡಿಗಳನ್ನು ತೋಡುವುದು, ಕೃಷಿ ಹೊಂಡಗಳ ನಿರ್ಮಾಣ, ತೋಟಗಾರಿಕೆಗೆ ಅಗತ್ಯ ಗುಂಡಿ ತೋಡುವುದು, ಹಿಪ್ಪು ನೇರಳೆ ಬೆಳೆಗೆ ಗುಂಡಿಗಳ ನಿರ್ಮಾಣ, ಗ್ರಾಮಗಳ ರಸ್ತೆ ಬದಿ ಗಿಡ ನೆಡಲು ಗುಂಡಿ ತೋಡುವ ಕೂಲಿ ಕೆಲಸಗಳನ್ನು ಆರಂಭಿಸಲಾಗಿದೆ. ಇನ್ನು ಕಟ್ಟಡ ನಿರ್ಮಾಣ ಕಾಮಗಾರಿಗಳು, ದನದ ಕೊಟ್ಟಿಗೆಗಳ ನಿರ್ಮಾಣ, ಮಳೆ ನೀರು ಕೊಯ್ಲುಗೆ ಸಂಬಂಧಿಸಿದ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಹೆಚ್ಚು ಒತ್ತು ನೀಡಿದೆ.

ಚಾಲ್ತಿಯಲ್ಲಿರುವ ಕಾಮಗಾರಿಗಳು: ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 1520 ಪ್ರಸ್ತಾವಿತ ಕಾಮಗಾರಿಗಳಿದ್ದು, ಅವುಗಳ ಎನ್‌ಎಂಆರ್‌ ಸಿದ್ಧಗೊಂಡಿದೆ. ಈ ಪೈಕಿ 1225 ಕಾಮಗಾರಿಗಳು ಪ್ರಸ್ತುತ ಪ್ರಗತಿಯಲ್ಲಿವೆ. ತಾಲೂಕಾವಾರು ಕಲಘಟಗಿ ತಾಲೂಕಿನಲ್ಲಿ ಹೆಚ್ಚು ಕಾಮಗಾರಿಗಳು ಚಾಲ್ತಿಯಲ್ಲಿವೆ. ಧಾರವಾಡ-312, ಹುಬ್ಬಳ್ಳಿ-224, ಕಲಘಟಗಿ-319, ಕುಂದಗೋಳ-225, ನವಲಗುಂದ-135 ಕಾಮಗಾರಿಗಳು ಪ್ರಸ್ತುತ ಚಾಲನೆಯಲ್ಲಿವೆ.

ಉದ್ಯೋಗ ಒದಗಿಸಿದ ವಿವರ :  ಜಿಲ್ಲೆಯಲ್ಲಿ ಉದ್ಯೋಗಕ್ಕಾಗಿ ಒಟ್ಟು 5051 ಕುಟುಂಬಗಳು ಅರ್ಜಿ ಸಲ್ಲಿಸಿದ್ದವು. ಈ ಪೈಕಿ ಒಟ್ಟು 29171 ಮಾನವ ದಿನಗಳ ಸೃಜನೆಯಾಗಿದ್ದು, 2166 ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದೆ.

ಕೋವಿಡ್ 19  ಹಿನ್ನೆಲೆಯಲ್ಲಿ ನರೇಗಾ ಕೆಲಸದ ವೇಳೆ ಎಲ್ಲಾ ನಿಯಮಗಳನ್ನು ಕೂಲಿ ಕಾರ್ಮಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಕೂಲಿ ಕಾರ್ಮಿಕರಿಗೆ ಅಗತ್ಯವಾದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್- ಸ್ಯಾನಿಟೈಸರ್‌ ಬಳಕೆಗೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಕೂಲಿ ಕಾರ್ಮಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅವರಲ್ಲಿ ಕೋವಿಡ್ 19  ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಕೊಟ್ಟು ಈ ಕುರಿತು ತಿಳಿವಳಿಕೆ ನೀಡಲಾಗಿದೆ. – ಡಾ| ಸತೀಶ, ಸಿಇಒ, ಜಿಪಂ ಧಾರವಾಡ

-ಬಸವರಾಜ ಹೊಂಗಲ

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.