ವೇತನ, ಪಿಂಚಣಿಗೆ ಓವರ್‌ ಡ್ರಾಫ್ಟ್ ಗೆ ನಿರ್ಧಾರ

ರಾಜ್ಯ ಸರ್ಕಾರಕ್ಕೆ ಮಾಸಿಕ ಬೇಕಿದೆ ಸುಮಾರು 10 ಸಾವಿರ ಕೋಟಿ ರೂ

Team Udayavani, Apr 27, 2020, 10:33 AM IST

ವೇತನ, ಪಿಂಚಣಿಗೆ ಓವರ್‌ ಡ್ರಾಫ್ಟ್ ಗೆ ನಿರ್ಧಾರ

ಬೆಂಗಳೂರು: ಕೋವಿಡ್ ಲಾಕ್‌ಡೌನ್‌ನಿಂದಾಗಿ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ನೌಕರರ ವೇತನ, ಪಿಂಚಣಿ, ಸಾಮಾಜಿಕ ಭದ್ರತಾ ಯೋಜನೆ ಜಾರಿಗಾಗಿ 15 ಸಾವಿರ ಕೋಟಿ ರೂ. ವರೆಗೆ ಓವರ್‌ಡ್ರಾಫ್ಟ್ ಪಡೆಯಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಪ್ರಸ್ತುತ ಕೋವಿಡ್ ನಿಯಂತ್ರಣ ಕ್ರಮಗಳಿಗೂ ಸೇರಿ ಮಾಸಿಕ ಸುಮಾರು 10 ಸಾವಿರ ಕೋಟಿ ರೂ. ಅಗತ್ಯವಿದೆ. ಹೀಗಾಗಿ ಓವರ್‌ ಡ್ರಾಫ್ಟ್ ಅವಕಾಶ ಉಪಯೋಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಜತೆಗೆ, ರಾಜ್ಯ ಸರ್ಕಾರ ಪಡೆಯಬಹುದಾದ ಸಾಲದ ಪ್ರಮಾಣ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ ಹೇರಲು ಮುಂದಾಗಿದೆ. ಸಾರ್ವಜನಿಕ ಬಾಂಡ್‌ ಗಳ ಮೂಲಕ ಸಂಪನ್ಮೂಲ ಕ್ರೋಢೀಕರಣದ ಮಾರ್ಗದ ಬಗ್ಗೆಯೂ ಗಂಭೀರ ಚಿಂತನೆ ನಡೆದಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ತಿಂಗಳಲ್ಲಿ ಎಲ್ಲ ಮೂಲಗಳಿಂದ 14,724 ಕೋಟಿ ರೂ. ಆದಾಯ ಸಂಗ್ರಹವಾಗಬೇಕಿದ್ದರೂ ಶೇ.3ರಷ್ಟು ಮಾತ್ರ ಸಂಗ್ರಹದ ಅಂದಾಜು ಮಾಡಲಾಗಿದೆ.

ಸರ್ಕಾರಿ ನೌಕರರ ವೇತನಕ್ಕೆ 3,107 ಕೋಟಿ ರೂ., ನಿವೃತ್ತ ನೌಕರರ ಪಿಂಚಣಿಗೆ 1,850 ಕೋಟಿ ರೂ.,ಆಡಳಿತಾತ್ಮಕ ವೆಚ್ಚಕ್ಕೆ 261 ಕೋಟಿ ರೂ., ಸಹಾಯಾನುಧಾನಕ್ಕೆ 1650
ಕೋಟಿ ರೂ., ಬದ್ಧ ವೆಚ್ಚಕ್ಕೆ 727 ಕೋಟಿ ರೂ., ಬಡ್ಡಿ ಪಾವತಿಗೆ 1851 ಕೋಟಿ ರೂ. ಕೊರೊನಾ ನಿಯಂತ್ರಣ ಕ್ರಮಗಳಿಗೆ ಪರಿಹಾರಕ್ಕೆ 500 ಕೋಟಿ ರೂ. ಸೇರಿ 9946 ಕೋಟಿ ರೂ.ಗಳ ಅಗತ್ಯ ವಿದೆ. ಕೋವಿಡ್  ಹಿನ್ನಲೆಯಲ್ಲಿ ಮಹಾರಾಷ್ಟ್ರ, ತೆಲಂಗಾಣ ಮಾದರಿಯಲ್ಲಿ ಶೇ.10 ರಿಂದ 15 ರಷ್ಟು ಸರ್ಕಾರಿ ನೌಕರರ ವೇತನ ಕಡಿತಕ್ಕೆ ಹಣಕಾಸು ಇಲಾಖೆ ಅಧಿಕಾರಿಗಳು ಪ್ರಸ್ತಾಪ ಇಟ್ಟರೂ ಮುಖ್ಯಮಂತ್ರಿ ಯವರು ಒಪ್ಪಲಿಲ್ಲ ಎನ್ನಲಾಗಿದೆ.

ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು, ಇತ್ತೀಚೆಗೆ ಸಂಪುಟ ಸಭೆಯಲ್ಲೂ ಪ್ರಸ್ತಾಪಿಸಿ ಸಹಮತ ಪಡೆದುಕೊಂಡಿದ್ದರು ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ. ಈ ಹಿಂದೆಯೂ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದಾಗ ಬರ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಾದಾಗ ಓವರ್‌ ಡ್ರಾಫ್ಟ್ ಪಡೆಯಲಾಗಿತ್ತು. ಹಿಂದೊಮ್ಮೆ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ  ಎದುರಾದಾಗ ಪಿಯರ್‌ಲೆಸ್‌ ಸಂಸ್ಥೆ ಯಿಂದ ಸಾಲ ಪಡೆದಿತ್ತು.

ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.