ಕೋವಿಡ್ 19: ವಿದ್ಯಾರ್ಥಿಗಳ ಭವಿಷ್ಯ ಅತಂತ್ರ


Team Udayavani, Apr 27, 2020, 7:03 PM IST

mumbai-tdy-1

ಸಾಂದರ್ಭಿಕ ಚಿತ್ರ

ಮುಂಬಯಿ,ಎ. 25:  ಕೋವಿಡ್ 19 ಸೋಂಕು ಜನರ ಆರೋಗ್ಯ ಹದಗೆಡುಸುವುದರ ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ. ದೇಶಾದ್ಯಂತದ 11ನೇ ತರಗತಿ ಮತ್ತು 12 ವಿದ್ಯಾರ್ಥಿಗಳಲ್ಲಿ ಸಮೀಕ್ಷೆ ನಡೆಸಿದ್ದು ಇದರಲ್ಲಿ ಶೇ. 42ರಷ್ಟು ವಿದ್ಯಾರ್ಥಿಗಳು ಕೋವಿಡ್ 19 ಹಿನ್ನೆಲೆಯಲ್ಲಿ ತಮ್ಮ ವೃತ್ತಿ ಯೋಜನೆಗಳನ್ನು ಮರುಪರಿಶೀಲಿಸುತ್ತಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ವೃತ್ತಿಜೀವನದ ಸಮಾಲೋಚನೆ ಮತ್ತು ಮಾರ್ಗದರ್ಶನ ವೇದಿಕೆಯಾದ ಮೈಂಡ್ಲರ್‌ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಭಾಗವಾಗಿ ದೇಶಾದ್ಯಂತ ಒಟ್ಟು 47,560 ವಿದ್ಯಾರ್ಥಿಗಳನ್ನು ಪರೀಕ್ಷಿಸಿದೆ. ಪ್ರವೇಶ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳು ತಮ್ಮ ಪ್ರವೇಶವನ್ನು ಮುಂದೂಡಿದ್ದರಿಂದ, ಸಮೀಕ್ಷೆಯ ಫ‌ಲಿತಾಂಶದಲ್ಲಿ ವಿದ್ಯಾರ್ಥಿಗಳು ಈಗ ತಮ್ಮ ವೃತ್ತಿ ಯೋಜನೆಗಳನ್ನು ಪುನರ್‌ವಿಮರ್ಶಿಸುತ್ತಿದ್ದಾರೆ ಎನ್ನಲಾಗಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದ್ದವರಲ್ಲಿ ಶೇ. 19ರಷ್ಟು ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುವ ಯೋಜನೆಯನ್ನು ಹೊಂದಿದ್ದರು, ಅವರಲ್ಲಿ ಶೇ. 78ರಷ್ಟು ವಿದ್ಯಾರ್ಥಿಗಳು ಈ ಯೋಜನೆಗಳಲ್ಲಿನ ಬದಲಾವಣೆಗಳನ್ನು ಪರಿಗಣಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗವು ವಿದೇಶ ಪ್ರವಾಸದ ಬಗ್ಗೆ ಸಂಶಯವನ್ನು ಹುಟ್ಟುಹಾಕಿದೆ. ಅಂತಹ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವಿದೇಶಿ ವಿಶ್ವವಿದ್ಯಾಲಯಕ್ಕೆ ಹೋಗುವ ಕುರಿತು ಚಿಂತಿತರಾಗಿದ್ದಾರೆ ಎಂದು ವರದಿ ಹೇಳಿದೆ. ಈ ಪೈಕಿ ಶೇ. 55ರಷ್ಟು ವಿದ್ಯಾರ್ಥಿಗಳು ತಮ್ಮ ಯೋಜನೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ವರದಿ ಹೇಳಿದರೆ ಶೇ. 35ರಷ್ಟು ವಿದ್ಯಾರ್ಥಿಗಳು ತಮ್ಮ ಯೋಜನೆಗಳನ್ನು ಒಂದು ವರ್ಷದವರೆಗೆ ಮುಂದೂಡಲು ಯೋಜಿಸುತ್ತಿದ್ದಾರೆಂದು ಹೇಳಿದೆ. ಇನ್ನು ಉಳಿದಂತೆ ಶೇ. 10ರಷ್ಟು ವಿದ್ಯಾರ್ಥಿಗಳು ಇತರ ಆಯ್ಕೆಗಳತ್ತ ಗಮನ ಹರಿಸುತ್ತಿದ್ದಾರೆ ಎಂದು ಹೇಳಿದೆ. ವಿದೇಶದಲ್ಲಿ ಅಧ್ಯಯನ ಮಾಡಲು ಯೋಜಿಸಿದ್ದ ಸುಮಾರು ಅರ್ಧದಷ್ಟು ವಿದ್ಯಾರ್ಥಿಗಳು ಯುಎಸ್‌ಎ ಮತ್ತು ಯುಕೆಗೆ ಹೋಗುವ ಉದ್ದೇಶ ಹೊಂದಿದ್ದರು ಎಂದು ಸಮೀಕ್ಷೆ ತಿಳಿಸಿದೆ.

ಕೋವಿಡ್ 19 ವೈರಸ್‌ ಹಿನ್ನೆಲೆ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕ ಮತ್ತು ಅನಿಶ್ಚಿತತೆಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಸಮೀಕ್ಷೆಯ ಅರ್ಧದಷ್ಟು ವಿದ್ಯಾರ್ಥಿಗಳು ತಾವು ಹೆಚ್ಚಿನ ಸಮಯವನ್ನು ಮುಂದೂಡಿಕೆ ಮತ್ತು ಆಲಸ್ಯದಲ್ಲಿ ಕಳೆದಿದ್ದೇವೆ ಎಂದು ಹೇಳಿದರು. ಶೇ 66ರಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ ಪ್ರವೇಶದ್ವಾರಗಳತ್ತ ಸಕಾರಾತ್ಮಕ ಒಲವನ್ನು ತೋರಿಸುವುದರಿಂದ, ಇದು ವಿಶ್ವವಿದ್ಯಾಲಯಗಳಿಗೆ ಪರಿಹಾರವಾಗಿ ಬರಬಹುದು. ಆನ್‌ಲೈನ್‌ ಮೌಲ್ಯಮಾಪನಗಳ ಕಲ್ಪನೆಯೊಂದಿಗೆ ವಿದ್ಯಾರ್ಥಿಗಳು ಹೆಚ್ಚಾಗಿ ಆರಾಮದಾಯಕವಾಗಿದ್ದಾರೆ. ಶೇ. 79ರಷ್ಟು ವಿದ್ಯಾರ್ಥಿಗಳು ಅಗತ್ಯವಿದ್ದಲ್ಲಿ ಆನ್‌ಲೈನ್‌ ಸಂದರ್ಶನಗಳೊಂದಿಗೆ ಆರಾಮವಾಗಿರುತ್ತಾರೆ ಎಂದು ವರದಿ ಹೇಳಿದೆ.

ಮೈಂಡ್ಲರ್‌ನ ಸ್ಥಾಪಕ ಮತ್ತು ಸಿಇಒ ಪ್ರತೀಕ್‌ ಭಾರ್ಗವ ಅವರು ಮಾತನಾಡಿ, ದೇಶಾದ್ಯಂತ ನಡೆಯುತ್ತಿರುವ ಬಿಕ್ಕಟ್ಟು ವಿದ್ಯಾರ್ಥಿಗಳಿಗೆ ಮತ್ತು ಆನ್‌ಲೈನ್‌ ಶಿಕ್ಷಣ ವೇದಿಕೆಗಳಿಗೆ ದೀರ್ಘ‌ಕಾಲೀನ ಪರಿಣಾಮ ಬೀರುತ್ತದೆಯಾದರೂ, ಸಮಯಕ್ಕೆ ಸರಿಯಾಗಿ ಅವರಿಗೆ ಅಗತ್ಯ ನಿರ್ದೇಶನವನ್ನುನೀಡುವುದರಿಂದ ಅವರ ವೃತ್ತಿಜೀವನ ಯೋಜನೆಗಳಿಗೆ ಮಾರ್ಗ ತೋರಿಸಬಹುದು. ಕಲಿಕೆಯ ಪ್ರಕ್ರಿಯೆಯು ಮುಂದುವರಿಯುತ್ತಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ಎಲ್ಲರ ಅಂತಿಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.