ನೆಪ ಹೇಳಿಕೊಂಡು ರಸ್ತೆಗಿಳಿದರೆ ಕೇಸ್‌: ಎಸ್ಪಿ

ಲಾಕ್‌ಡೌನ್‌ ಪಾಲನೆಯಲ್ಲಿ ಗ್ರಾಮೀಣ ಭಾಗ ಬೆಸ್ಟ್‌: ರವಿ ಡಿ.ಚನ್ನಣ್ಣನವರ್‌

Team Udayavani, Apr 29, 2020, 11:05 AM IST

ನೆಪ ಹೇಳಿಕೊಂಡು ರಸೆಗಿಳಿದರೆ ಕೇಸ್‌: ಎಸ್ಪಿ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಜನರು ಲಾಕ್‌ಡೌನ್‌ ನಿಯಮ ಪಾಲನೆ ಮಾಡುವ ಜೊತೆ ಸಂಪೂರ್ಣ ಬೆಂಬಲ ನೀಡಿದ ಪರಿಣಾಮ
ಪರಿಸ್ಥಿತಿ ನಿರ್ವಹಣೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಎಸ್ಪಿ ರವಿ.ಡಿ ಚೆನ್ನಣ್ಣನವರ್‌ ಹರ್ಷವ್ಯಕ್ತಪಡಿಸಿದರು. ನಗರದ ಟೌನ್‌ ಠಾಣೆಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸಂಬಂಧ ನಿಯಮ 11 ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ನೆಲಮಂಗಲ ಉಪವಿಭಾಗ ವ್ಯಾಪ್ತಿಯಲ್ಲಿ 1295 ವಾಹನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಲಾಕ್‌ಡೌನ್‌ ಮುಗಿಯುವವರೆಗೂ ನೆಪ ಹೇಳಿಕೊಂಡು ನಗರದ ಕಡೆ ಬರುವ ವಾಹನ ಚಾಲಕರಿಂದ ವಾಹನ ವಶಕ್ಕೆ ಪಡೆದು ಪರಿಸ್ಥಿತಿಗನು ಗುಣವಾಗಿ ಕೇಸ್‌
ದಾಖಲಿಸಿಕೊಳ್ಳಲಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶ ಬೆಸ್ಟ್‌: ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ಕಾರ್ಯಪಡೆ ಸಹಕಾರದೊಂದಿಗೆ ಲಾಕ್‌ಡೌನ್‌ ಯಶಸ್ವಿಯಾಗಿದೆ. ಹಳ್ಳಿಯ ಜನ ಕೋವಿಡ್ ಸೃಷ್ಟಿಸುತ್ತಿರುವ ಪರಿಸ್ಥಿತಿ ತಿಳಿದು ಮನೆಯಲ್ಲಿದ್ದಾರೆ. ಆದರೆ ಕೆಲವು ನಗರ ಪ್ರದೇಶಗಳಲ್ಲಿ ನೆಪ ಹೇಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಗರ ಪ್ರದೇಶಕ್ಕಿಂತ ಗ್ರಾಮೀಣ
ಪ್ರದೇಶಗಳು ಕೊರೊನಾ ನಿಯಂತ್ರಣ ಕ್ರಮಗಳ ಅನುಕರಣೆಯಲ್ಲಿ ಬೆಸ್ಟ್‌ ಎಂದರು.

ಕರುಣೆ ಗೋಡೆ ವೀಕ್ಷಣೆ: ನಗರದ ಬಸ್‌ ನಿಲ್ದಾಣದ ಬಳಿ ನಿರ್ಮಾಣ ಮಾಡಲಾಗಿರುವ ಕರುಣೆಯ ಗೋಡೆ ವೀಕ್ಷಣೆ ಮಾಡಿ ಜನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು
ಮನವಿ ಮಾಡಿದರು. ಕರುಣೆ ಗೋಡೆ ನಿರ್ವಹಣೆ ಜವಾಬ್ದಾರಿಯನ್ನು ರಾಜಶೇಖರ್‌ಗೆ ನೀಡಿದರು. ಬಸ್‌ ನಿಲ್ದಾಣದಿಂದ ಪೊಲೀಸ್‌ ಠಾಣೆ ಸಮೀಪ ಅಥವಾ ಆವರಣದಲ್ಲಿ ಬದಲಿಸಿದರೆ ಬಳಕೆ ಪಾರದರ್ಶಕವಾಗಿರುತ್ತದೆ, ಅರ್ಹ ವ್ಯಕ್ತಿಗಳಿಗೆ ಸಿಗಲಿದೆ ಎಂದು ಸ್ಥಳೀಯರು ಮನವಿ ಮಾಡಿದರು.

ಸಿಟಿ ರೌಂಡ್ಸ್‌: ನೆಲಮಂಗಲ ನಗರದ ಮುಖ್ಯರಸ್ತೆ, ಪೇಟೆಬೀದಿ, ಬಸ್‌ ನಿಲ್ದಾಣ, ತಾಲೂಕು ಕಚೇರಿ ಸೇರಿ ಗೋಪಿ ವೆಂಕಟೇಶ್ವರ ಕಲ್ಯಾಣ ಮಂಟಪದವರೆಗೂ ಜನರ
ಓಡಾಟ, ಅಂಗಡಿ ಮುಚ್ಚಿರುವುದು, ಸಾಮಾಜಿಕ ಅಂತರ ಸೇರಿ ನಗರದ ವಾಸ್ತವತೆ ಬಗ್ಗೆ ರೌಂಡ್ಸ್‌ ಮಾಡುವ ಮೂಲಕ ಸಾರ್ವಜನಿಕರಿಗೆ ಮನೆಯಿಂದ ಹೊರಬರದಂತೆ ಎಚ್ಚರಿಕೆ
ಸಂದೇಶ ನೀಡಿದ್ದಾರೆ.

ದಂಡ ವಸೂಲಿ ಉದ್ದೇಶವಿಲ್ಲ
ಬೈಕ್‌ಗಳನ್ನು ವಶಕ್ಕೆ ಪಡೆದು ದಂಡ ವಸೂಲಿ ಮಾಡುವುದು ನಮ್ಮ ಮೂಲ ಉದ್ದೇಶವಲ್ಲ, ಸುಖಾಸುಮ್ಮನೆ ಬರಬೇಡಿ ಎಂದು ಮನವಿ ಮಾಡಿದರೂ ಅನವಶ್ಯಕವಾಗಿ ಬರುವವರ ವಾಹನ ವಶಕ್ಕೆ ಪಡೆಯುವುದು ಅನಿವಾರ್ಯ. ದಂಡ ವಿಧಿಸದಿದ್ದರೆ ಸಮಸ್ಯೆ ಹೆಚ್ಚಾಗುತ್ತದೆ ಆದ್ದರಿಂದ ಸಹಕರಿಸಬೇಕು, ಪರಿಸ್ಥಿತಿಗನುಗುಣವಾಗಿ ಕೇಸ್‌ ಕೂಡ ದಾಖಲಿಸಲಾಗುತ್ತದೆ ಎಂದು ಎಸ್ಪಿ ರವಿ.ಡಿ ಚೆನ್ನಣ್ಣನವರ್‌ ತಿಳಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.