ಕೀನ್ಯಾ ಕಾರ್ಯಪಡೆಯ ವಿಜ್ಞಾನಿಗಳಿಗೇ ಗೇಟ್‌ಪಾಸ್‌


Team Udayavani, Apr 29, 2020, 12:58 PM IST

ಕೀನ್ಯಾ ಕಾರ್ಯಪಡೆಯ ವಿಜ್ಞಾನಿಗಳಿಗೇ ಗೇಟ್‌ಪಾಸ್‌

ಕೀನ್ಯಾ: ದೇಶಾದ್ಯಂತ ಹಬ್ಬಿರುವ ಕೋವಿಡ್‌-19 ವಿರುದ್ಧ ಮುಖ್ಯಭೂಮಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ವಿಜ್ಞಾನಿಗಳನ್ನು ಕಾರ್ಯಪಡೆಯಿಂದ‌ ಕೀನ್ಯಾ ಸರಕಾರ ವಜಾಗೊಳಿಸಿದೆ.

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಡಿರುವ ಸರಕಾರದ ವಿರುದ್ಧ ದೇಶದೆಲ್ಲೆಡೆ ಟೀಕೆ ವ್ಯಕ್ತವಾಗುತ್ತಿದ್ದು, ಪರಿಸ್ಥಿತಿ ಯನ್ನು ನಿಭಾಯಿಸುವುದರ ಕುರಿತು ಕಳವಳ ವ್ಯಕ್ತವಾಗುತ್ತಿದೆ.

ಕೀನ್ಯಾ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಸೋಂಕು ಸಂಶೋಧನಾ ಕೇಂದ್ರದ ಉಪನಿರ್ದೇಶಕ ಡಾ. ಜೋಯಲ್‌ ಲುಟೋಮಿಯಾ ಅವರನ್ನು ವಜಾಗೊಳಿಸಲಾಗಿದೆ. ಶಂಕಿತರ ಪರೀಕ್ಷಾ ಮಾದರಿ ಫಲಿತಾಂಶಗಳ ವರದಿಯನ್ನು ನೀಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬುದೇ ಈ ವಜಾಕ್ಕೆ ಕಾರಣ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಆದರೆ ಸಮಸ್ಯೆಯನ್ನು ಪರಿಹರಿಸಲು ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಕೆಲವು ಅಧಿಕಾರಿಗಳೊಂದಿಗೆ ಸೇರಿ ಸರಕಾರದಿಂದ ಹೆಚ್ಚಿನ ಆರ್ಥಿಕ ನೆರವನ್ನು ಕೇಳಿದ್ದಕ್ಕೆ ಅವರನ್ನು ಕಾರ್ಯಪಡೆಯಿಂದ ಹೊರ ಹಾಕಲಾಗಿದೆ ಎನ್ನು ತ್ತಾರೆ ಸಂಸ್ಥೆಯ ಇತರೆ ಪರಿಣಿತರು.
ಡಾ| ಲುಟೋಮಿಯ ಅವರನ್ನು ವಜಾ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ಸರ ಕಾರ, ಶಂಕಿತರ ಪರೀಕ್ಷಾ ಮಾದರಿಗಳನ್ನು ವೇಗವಾಗಿ ಪಡೆಯುವ ಉದ್ದೇಶ ನಮ್ಮದು ಎಂದಿದೆ.
1979 ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಸಾಂಕ್ರಾಮಿಕ ರೋಗಗಳ ನಿಭಾವಣೆಯಲ್ಲಿ ತೊಡಗಿದೆ. ಮಲೇರಿಯಾ, ಎಚ್‌.ಐ.ವಿ. ಮತ್ತು ಕೋವಿಡ್‌-19ನ ಸೋಂಕಿನ ವಿರುದ್ಧದ ಹೋರಾಟದಲ್ಲೂ ಮುಂಚೂಣಿಯಲ್ಲಿ ನಿಂತು ಕಾರ್ಯ ನಿರ್ವ ಹಿಸುತ್ತಿದೆ.
ಕೀನ್ಯಾದಲ್ಲಿ ಒಟ್ಟು 363 ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ 14 ಮಂದಿ ಸಾವಿಗೀಡಾಗಿದ್ದಾರೆ. ಈ ಮಧ್ಯೆಯೇ ಬ್ರಿಟನ್‌ನಲ್ಲಿ ಸಿಲುಕಿಕೊಂಡಿರುವ ಕೀನ್ಯಾ ಪ್ರಜೆಗಳಿಗೆ ವಾಪಸು ಬರುವಂತೆ ಕೀನ್ಯಾ ಸರಕಾರ ಮತ್ತೂಂದು ಅವಕಾಶವನ್ನು ನೀಡಿದೆ. ಆಫ್ರಿಕನ್‌ ದೇಶಗಳಲ್ಲಿ ಕೀನ್ಯಾದಲ್ಲಿ ಸ್ವಲ್ಪ ಪರಿಸ್ಥಿತಿ ಪರವಾಗಿಲ್ಲ. ಉಳಿದಂತೆ ನೈಜೀರಿಯಾದಲ್ಲಿ 1,300ಕ್ಕೂ ಹೆಚ್ಚು ಪ್ರಕರಣಗಳಿದ್ದು, 40 ಮಂದಿ ಸಾವಿಗೀಡಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ 4,700ಕ್ಕೂ ಹೆಚ್ಚು ಪ್ರಕರಣಗಳಲ್ಲಿ, 90 ಮಂದಿ ಸತ್ತಿದ್ದರೆ, ಘಾನಾದಲ್ಲಿ 1500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 11 ಮಂದಿ ಮರಣ ಹೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.