ಯೋಧನಿಗೆ ಥಳಿತ: ಫೋಟೋ ವೈರಲ್
Team Udayavani, Apr 30, 2020, 12:53 PM IST
ಬೆಳಗಾವಿ: ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಸಿಆರ್ಪಿಎಫ್ ವಿಂಗ್ ಕಮಾಂಡೋ ಸಚಿನ್ ಸಾವಂತ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ಬಾಸುಂಡೆ ಬರುವಂತೆ ಹೊಡೆದಿರುವ ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿವೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸ್ ಪೇದೆ ಜತೆ ನಡೆದ ಜಟಾಪಟಿಯಲ್ಲಿ ಸಚಿನ್ ವಿರುದ್ಧ ದೂರು ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಕಸ್ಟಡಿಯಲ್ಲಿದ್ದಾಗಲೇ ಕೈಕೋಳ ತೊಡಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಪ್ರಕರಣ ವಾಪಸ್?
ಕಮಾಂಡೋ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆ ಇದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಈ ಎರಡೂ ಘಟಕಗಳ ನಡುವೆ ಸೌಹಾರ್ದಯುತ ಬಾಂಧವ್ಯ ವೃದ್ಧಿಸಬೇಕೆಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಹೈಕೋರ್ಟ್ಗೆ ದೂರು
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು ಎಂದು ಕೋರಿ ವಕೀಲ ಜಿ.ಆರ್.ಮೋಹನ್ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.