ಮರುಕಳಿಸದಿರಲಿ ಹುಲಿಕೇರಿ ಕೆರೆ ಕಟ್ಟೆ ಒಡೆಯುವ ಆತಂಕ

Team Udayavani, May 1, 2020, 3:02 PM IST

ಮರುಕಳಿಸದಿರಲಿ ಹುಲಿಕೇರಿ ಕೆರೆ ಕಟ್ಟೆ  ಒಡೆಯುವ ಆತಂಕ

ಅಳ್ನಾವರ: ಅದೊಂದು ಮಧ್ಯರಾತ್ರಿ ಸಮಯ. ಒಂದೇ ಸಮನೆ ಏರುತ್ತಿರುವ ಹಳ್ಳದ ನೀರು. ಭೋರ್ಗರೆಯುತ್ತಿರುವ ನೀರಿನ ಸೆಳೆವಿನ ಸಪ್ಪಳ. ಇನ್ನೇನು ಮನೆಯೊಳಗೆ ನುಗ್ಗಲು ಹತ್ತಿರಕ್ಕೆ ಬರುತ್ತಿರುವ ನೀರು. ಹೇಗಾದರೂ ಮಾಡಿ ಜೀವ ಉಳಿಸಿಕೊಳ್ಳುವ ಚಡಪಡಿಕೆ. ನೆತ್ತಿಯ ಮೇಲೆ ಧೋ ಎಂದು ಸುರಿಯುತ್ತಿರುವ ಮಳೆ. ಕೈಯಲ್ಲಿ ಮಕ್ಕಳು ಮರಿಗಳು. ಜೀವ ಉಳಿದರೆ ಸಾಕು ಎನ್ನುವ ಅವಸರದಲ್ಲಿ ಸುರಕ್ಷಿತ ಸ್ಥಳಗಳಿಗೆ ಓಡುತ್ತಿರುವ ಜನರು..

ಇದು ಹಿಂದಿನ ವರ್ಷದ ಮಳೆಗಾಲದಲ್ಲಿ ಹುಲಿಕೇರಿ ಕೆರೆ ಒಡೆಯುವ ಭೀತಿಯಿಂದ ಅಳ್ನಾವರದಲ್ಲಿ ಕಂಡುಬಂದ ಆತಂಕದ ಕ್ಷಣಗಳು. ಮತ್ತೂಮ್ಮೆ ಇಂತಹ ಪರಿಸ್ಥಿತಿ ಮರುಕಳಿಸದಿರಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಿರುವ ಜನರು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಲ್ಲಿ ಒತ್ತಾಯಿಸಿದ್ದಾರೆ.

ಕಳೆದ ಮಳೆಗಾಲದಲ್ಲಿ ಭಾರೀ ಮಳೆಗೆ ಹುಲಿಕೇರಿ ಕೆರೆ ಹಾನಿಗೆ ಒಳಗಾಗಿದ್ದರಿಂದ ಕೆರೆ ಒಡೆಯುವ ಭೀತಿ ಪಟ್ಟಣದ ಜನರಲ್ಲಿ ಆವರಿಸಿ ಜೀವ ಉಳಿಸಿಕೊಳ್ಳಲು ಬೇರೆಡೆ ಸ್ಥಳಾಂತರಗೊಂಡಿದ್ದರು. ಆಗ ಹಾನಿಗೊಳಗಾಗಿ ಒಡೆದಿದ್ದ ಕೆರೆಯ ಒಡ್ಡನ್ನು ಮರು ನಿರ್ಮಾಣ ಮಾಡಿಲ್ಲ. ಇದರಿಂದಈಗ ಮತ್ತೂಂದು ಮಳೆಗಾಲ ಹತ್ತಿರಕ್ಕೆ ಬರುತ್ತಿದ್ದಂತೆ ಮತ್ತೇನು ಅನಾಹುತ ಕಾದಿದೆಯೋ ಎನ್ನುವ ಆತಂಕ ಪಟ್ಟಣ ಹಾಗೂ ತಾಲೂಕಿನ ಹುಲಿಕೇರಿ ಗ್ರಾಮಸ್ಥರಲ್ಲಿ ಕಾಡುತ್ತಿದೆ.

ಕಳೆದ ಮಳೆಗಾಲದಲ್ಲಿ ಉಂಟಾದ ನೆರೆ ಪ್ರವಾಹಕ್ಕೆ ಹುಲಿಕೇರಿ ಕೆರೆ ಒಡ್ಡು ಒಡೆಯುವ ಹಂತಕ್ಕೆ ತಲುಪಿ ಸ್ವಲ್ಪದರಲ್ಲಿಯೇ ಭಾರಿ ಅನಾಹುತ ತಪ್ಪಿ ಪಟ್ಟಣದ ಜನರು ನಿಟ್ಟುಸಿರು ಬಿಡುವಂತಾಗಿತ್ತು. ಆಗ ಕೆರೆಯ ಒಡ್ಡಿಗೆ ಉಂಟಾದ ಹಾನಿಯನ್ನು ಇನ್ನೂವರೆಗೂ ಸರಿ ಪಡಿಸಿಲ್ಲ. ಹೀಗಾಗಿ ಬರುವ ಮಳೆಗಾಲದಲ್ಲಿ ಕೆರೆ ಒಡೆಯುವುದು ಮಾತ್ರ ಶತಸಿದ್ಧವೆನ್ನುತ್ತಿರುವ ಜನರು ಕೂಡಲೇ ಇಲಾಖೆ ಇದರ ಬಗ್ಗೆ ಗಮನ ಹರಿಸಿ ದುರಸ್ತಿ ಕೆಲಸಕ್ಕೆ ಚಾಲನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗೆ ಶಿವಾಜಿ ಪತ್ರ :  ಹೆಚ್ಚುವರಿ ನೀರು ಹರಿದು ಹೋಗಲು ನಿರ್ಮಿಸಿದ್ದ ಗೋಡೆ ಸಂಪೂರ್ಣ ಒಡೆದು ಹಾಳಾಗಿದೆ. ಕಳೆದ ಸಾಲಿನ ಪ್ರವಾಹದಲ್ಲಿ ಹಳ್ಳದ ನೀರು ಬಡಾವಣೆಗಳಿಗೆ ನುಗ್ಗಿ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳು ಇನ್ನೂ ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಅನೇಕರ ಜಮೀನುಗಳು ನೀರಿಗೆ ಕೊಚ್ಚಿ ಹೋಗಿದ್ದವು. ಕೆರೆ ದುರಸ್ತಿ ಕೆಲಸ ಮಳೆಗಾಲ ಪ್ರಾರಂಭಕ್ಕೂ ಮೊದಲು ಮುಗಿಸದಿದ್ದರೆ ಜನರ ಸ್ಥಳಾಂತರ ಮಾಡುವುದು ಅನಿವಾರ್ಯವಾಗಲಿದೆ ಎಂದು ಹುಲಿಕೇರಿ ಗ್ರಾಮದ ಶಿವಾಜಿ ಡೊಳ್ಳಿನ ಜಿಲ್ಲಾಧಿಕಾರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಹುಲಿಕೇರಿ ಕೆರೆಯ ಒಡ್ಡಿನ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಕೆಲವೊಂದು ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಆದಷ್ಟು ಶೀಘ್ರ ಕೆಲಸ ಮಾಡಿ ಮುಗಿಸಲು ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ. -ಸಿ.ಎಂ. ನಿಂಬಣ್ಣವರ, ಶಾಸಕ

­-ಎಸ್‌. ಗೀತಾ

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.