ಬರಿದಾಗುತ್ತಿದೆ ಕೃಷ್ಣೆ; ಮತ್ತೆ ಈ ವರ್ಷವೂ ಸಮಸ್ಯೆ?


Team Udayavani, May 1, 2020, 6:15 PM IST

ಬರಿದಾಗುತ್ತಿದೆ ಕೃಷ್ಣೆ; ಮತ್ತೆ ಈ ವರ್ಷವೂ ಸಮಸ್ಯೆ?

ಚಿಕ್ಕೋಡಿ: ಕೋವಿಡ್ 19 ಭೀತಿಯಿಂದ ಗಡಿ ಭಾಗದ ಜನ ತತ್ತರಿಸಿ ಹೋಗಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಜೀವನಾಡಿ ಕೃಷ್ಣಾ ನದಿ ನೀರು ಖಾಲಿಯಾಗುತ್ತಿರುವುದು ಜನರಲ್ಲಿ ಹೊಸ ಆತಂಕ ಮೂಡಿಸಿದೆ. ಶೀಘ್ರ ಮಹಾರಾಷ್ಟ್ರದಿಂದ ನಾಲ್ಕು ಟಿಎಂಸಿ ನೀರು ಹರಿಸಿ ಬೇಸಿಗೆಯಲ್ಲಿ ಜನರ ದಾಹ ತೀರಿಸಬೇಕೆನ್ನುವ ಒತ್ತಾಯ ಕೇಳಿ ಬರಲಾಂಭಿಸಿದೆ.

ಕಳೆದ ವರ್ಷ ಏಪ್ರೀಲ್‌ ತಿಂಗಳಲ್ಲಿ ಕೃಷ್ಣಾ ನದಿ ಬತ್ತಿ ಬರಿದಾಗಿ ಬೆಳಗಾವಿ, ಬಾಗಲಕೋಟ ಹಾಗೂ ವಿಜಯಪೂರ ಜಿಲ್ಲೆಯ ಜನ, ಜಾನುವಾರುಗಳು ಕುಡಿಯಲು ನೀರು ಇಲ್ಲದೆ ಎರಡು ತಿಂಗಳು ಸಂಕಷ್ಟ ಎದುರಿಸಿದರು. ಈಗ ಮತ್ತೆ ಬೇಸಿಗೆ ಆರಂಭವಾಗಿದೆ. ನದಿಯಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ಕಳೆದ ವರ್ಷದ ಪರಿಸ್ಥಿತಿ ಮತ್ತೆ ಎದುರಾಗುವ ಆತಂಕ ಜನರಲ್ಲಿ ಮೂಡಿದೆ.

ನೀರಿನ ಪ್ರಮಾಣ ಕುಸಿಯುತ್ತಿರುವುದರಿಂದ ರೈತರು ಬೆಳೆದ ಬೆಳೆಗಳು ಕಮರಿ ಹೋಗುತ್ತಿದ್ದು, ಮೇವಿನ ಕೊರತೆ, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಕೃಷ್ಣಾ ನದಿ ನೀರಿನ ಮೇಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಕಾಗವಾಡ, ರಾಯಬಾಗ ಮತ್ತು ಅಥಣಿ ತಾಲೂಕು ಅವಲಂಬಿತವಾಗಿವೆ. ನೆರೆಯ ಜಿಲ್ಲೆಗಳಾದ ಬಾಗಲಕೋಟ ಮತ್ತು ವಿಜಯಪೂರ ಜಿಲ್ಲೆಯ ಜನರು ಸಹ ನದಿ ನೀರನ್ನು ಅವಲಂಬಿಸಿದ್ದಾರೆ. ನದಿಯಲ್ಲಿ ಇರುವ ನೀರು ಹದಿನೈದು ದಿನಗಳವರಿಗೆ ಸಾಕಾಗಬಹುದು, ಅಷ್ಟರಲ್ಲಿ ಮಹಾರಾಷ್ಟ್ರದಿಂದ ದಿಂದ ನೀರು ಬಂದರೆ ಅನುಕೂಲ, ಇಲ್ಲವಾದರೇ ಮತ್ತೆ ಹನಿ ನೀರಿಗಾಗಿ ಜನ ಪರದಾಡುವ ಪ್ರಸಂಗ ಎದುರಾಗುವ ಸಂಭವ ಹೆಚ್ಚಿದೆ.

ನಾಲ್ಕು ಟಿಎಂಸಿ ನೀರು ಬಿಡಬೇಕು: ಪ್ರತಿ ವರ್ಷ ಬೇಸಿಗೆಯಲ್ಲಿ ಕೃಷ್ಣಾ ನದಿ ನೀರು ಖಾಲಿಯಾಗುತ್ತದೆ. ರಾಜ್ಯದ ಮೂರು ಜಿಲ್ಲೆಗಳು ನೀರಿಗಾಗಿ ಪರಿತಪಿಸುತ್ತವೆ. ಹೀಗಾಗಿ ಕರ್ನಾಟಕ ಸರ್ಕಾರ ಮತ್ತು ಮಹಾ ಸರ್ಕಾರ ನೀರಿನ ಒಡಂಬಡಿಕೆ ಮಾಡಿಕೊಂಡು ಬೇಸಿಗೆಯಲ್ಲಿ ನಾಲ್ಕು ಟಿಎಂಸಿ ನೀರು ಬಿಡಬೇಕು ಎಂದು ಗಡಿ ಭಾಗದ ರೈತರು ಒತ್ತಾಯಿಸಿದ್ದಾರೆ. ಕಾಳಮ್ಮವಾಡಿ ಜಲಾಶಯದಿಂದ ನೀರು ಹರಿಸಿ: ಗಡಿ ಭಾಗದ ದೂಧಗಂಗಾ ನದಿಯಲ್ಲಿ ಕಳೆದ ಹಲವು ದಿನಗಳಿಂದ ನೀರಿನ ಪ್ರಮಾಣ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಕಾಳಮ್ಮಾವಾಡಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ.

ದೂಧಗಂಗಾ ನದಿಯ ನೀರಿನ ಮೇಲೆನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕಿನ ಸುಮಾರು 50 ಕ್ಕೂ ಹೆಚ್ಚು ಗ್ರಾಮಗಳು ಅವಲಂಬಿಸಿವೆ. ನದಿ ತೀರದ ಗ್ರಾಮಗಳು ಕುಡಿಯುವ ನೀರಿಗೆ ಬಳಸುತ್ತಾರೆ, ಅದಲ್ಲದೆ ಏತ ನೀರಾವರಿ ಯೋಜನೆಗಳು, ಗಂಗಾ ಕಲ್ಯಾಣ ಯೋಜನೆಗಳು, ವೈಯಕ್ತಿಕ ನಿರಾವರಿ ಯೋಜನೆಗಳಿಂದ ರೈತರು ಬಳಕೆ ಮಾಡಿಕೊಳ್ಳುತ್ತಾರೆ.

 

ಕೃಷ್ಣಾ ನದಿ ನೀರು ಶಾಶ್ವತ ಒಪ್ಪಂದಕ್ಕೆ ಪ್ರಯತ್ನ:  ಪ್ರತಿ ಬೇಸಿಗೆಯಲ್ಲಿ ರಾಜ್ಯದ ಗಡಿ ಭಾಗದ ಜನ ನೀರಿನ ಸಮಸ್ಯೆ ಎದುರಿಸುತ್ತಾರೆ. ಹೀಗಾಗಿ ಕೊಯ್ನಾ ಹಾಗೂ ವಿವಿಧ ಡ್ಯಾಂಗಳ ಮೂಲಕ ಬೇಸಿಗೆಯ ಏಪ್ರೀಲ್‌ ಮತ್ತು ಮೇ ತಿಂಗಳಲ್ಲಿ ನಾಲ್ಕು ಟಿಎಂಸಿ ನೀರು ಹರಿಸಲು ಮಹಾ ಸರ್ಕಾರದ ಜೊತೆ ರಾಜ್ಯ ಸರ್ಕಾರ ಶಾಶ್ವತ ಒಪ್ಪಂದ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಅದನ್ನು ಶೀಘ್ರವಾಗಿ ಈಡೇರಿಸಲು ಸಿಎಂ ಹಾಗೂ ನೀರಾವರಿ ಸಚಿವರ ಗಮನಕ್ಕೆ ತಂದು ನೀರು ಹರಿಸಲು ಪ್ರಯತ್ನ ಮಾಡಲಾಗುತ್ತದೆ.-ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್‌ ಮುಖ್ಯಸಚೇತಕ, ಕರ್ನಾಟಕ ಸರ್ಕರ

 

­-ಮಹಾದೇವ ಪೂಜೇರಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.