ನೀರು ಹರಿಸಲು ಸರ್ಕಾರಕ್ಕೆ ಒತ್ತಡ ಹೇರಿಲ್ಲ

ಪಾರದರ್ಶಕವಾಗಿಯೇ ವಿವಿ ಸಾಗರ ನೀರು ಬಿಡುಗಡೆ  ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸ್ಪಷ್ಟನೆ

Team Udayavani, May 2, 2020, 1:26 PM IST

2-May-11

ಚಿತ್ರದುರ್ಗ: ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಿತ್ರದುರ್ಗ: ಸಚಿವರು, ಮುಖ್ಯಮಂತ್ರಿಗಳು ಪಾರದರ್ಶಕವಾಗಿ ನಡೆದುಕೊಂಡಿದ್ದರಿಂದ ಚಳ್ಳಕೆರೆ ತಾಲೂಕಿಗೆ 0.25 ಟಿಎಂಸಿ ನೀರು ಹರಿಯುತ್ತಿದೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು. ಕಳೆದೊಂದು ವಾರದಿಂದ ವಾಣಿ ವಿಲಾಸ ಸಾಗರದ ನೀರು ಹರಿಸುವ ಸಂಬಂಧ ನಡೆಯುತ್ತಿರುವ ಹಗ್ಗ ಜಗ್ಗಾಟ, ರಾಜಕೀಯಗಳ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸುದೀರ್ಘ‌ ವಿವರಣೆ ನೀಡಿದರು. ಜಿಲ್ಲೆಯ ಏಕೈಕ ಕಾಂಗ್ರೆಸ್‌ ಶಾಸಕ ರಘುಮೂರ್ತಿ ಒತ್ತಡಕ್ಕೆ ಜಲಸಂಪನ್ಮೂಲ ಸಚಿವರು ಮಣಿದಿದ್ದಾರೆ ಎಂಬ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಆರೋಪದಲ್ಲಿ ಹುರುಳಿಲ್ಲ. ಇಲ್ಲಿ ಒತ್ತಡದ ಪ್ರಶ್ನೆಯೇ ಇಲ್ಲ. ಜನರ ಹಿತದೃಷ್ಟಿಯಿಂದಷ್ಟೇ ಈ ಕೆಲಸ ಮಾಡಿದ್ದೇವೆ ಎಂದರು.

ಹಿರಿಯೂರು ಕ್ಷೇತ್ರದ ಶಾಸಕರಾಗಿ ಪೂರ್ಣಿಮಾ ಅವರಿಗೆ ಅವರದ್ದೇ ಆದ ಒತ್ತಡವಿರುತ್ತದೆ. ಈ ಕಾರಣಕ್ಕೆ ವಾಣಿವಿಲಾಸ ಜಲಾಶಯದ ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಪಕ್ಷ ರಾಜಕಾರಣವನ್ನು ಚುನಾವಣೆಗೆ ಮಾತ್ರ ಸೀಮಿತಗೊಳಿಸಿ. ನೀರು ಹಂಚಿಕೆ ಕುರಿತು ಸಂಪೂರ್ಣ ಮಾಹಿತಿ ಪಡೆದು ಮಾತನಾಡಬೇಕೆಂದು ಸಲಹೆ ನೀಡಿದರು. ಚಳ್ಳಕೆರೆ ತಾಲೂಕಿಗೆ ಹರಿಸುತ್ತಿರುವ ನೀರಿನ ವಿಚಾರದಲ್ಲಿ ಪಕ್ಷಪಾತವಾಗಿಲ್ಲ. ಅನ್ಯ ಮಾರ್ಗದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿಲ್ಲ. ಕ್ಷೇತ್ರದ ಜನರ ಹಿತದೃಷ್ಟಿಯಿಂದ ನಿಯಮಬದ್ಧವಾಗಿ ನೀರು ಪಡೆದಿದ್ದೇವೆ. ಚಳ್ಳಕೆರೆ ತಾಲೂಕಿನ ಜನರ ಹಕ್ಕನ್ನು ಪ್ರಶ್ನಿಸುವ ಅಧಿಕಾರ ಹಿರಿಯೂರು ಶಾಸಕರಿಗೆ ಇಲ್ಲ ಎಂದರು.

ವಿವಿ ಸಾಗರ ನಾಡಿನ ಆಸ್ತಿ: ವೇದಾವತಿ ನದಿಗೆ ಹಿರಿಯೂರು ತಾಲೂಕಿನಲ್ಲಿ ನಿರ್ಮಿಸಿರುವ ವಾಣಿವಿಲಾಸ ಜಲಾಶಯ ರಾಜ್ಯದ ಆಸ್ತಿ. ಇದು ಯಾರೊಬ್ಬರ ಸ್ವತ್ತಲ್ಲ. ನೂರು ಚದರ ಕಿಮೀ ವ್ಯಾಪ್ತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಜಲಾಶಯ ನಿರ್ಮಿಸಲಾಗಿದೆ. ನೀರಿನ ಮೂಲ ಬತ್ತಿ ಹೋಗಿದ್ದರಿಂದ ಜಲಾಶಯ ಖಾಲಿಯಾಗಿತ್ತು. ಆದರೆ ಕೆಲವರು ಚಂದಾ ಹಾಕಿ ಜಲಾಶಯ ಕಟ್ಟಿದವರಂತೆ ವರ್ತಿಸುತ್ತಿದ್ದಾರೆ ಎಂದು ರಘುಮೂರ್ತಿ ವ್ಯಂಗ್ಯವಾಡಿದರು.

ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ವಿವಿ ಸಾಗರ ಜಲಾಶಯಕ್ಕೆ 5.2 ಟಿಎಂಸಿ ಅಡಿ ನೀರು ಮೀಸಲಿಡಲಾಗಿದೆ. ಎತ್ತಿನಹೊಳೆ ಯೋಜನೆಯ ನೀರು ಕೂಡ ಜಲಾಶಯಕ್ಕೆ ಹರಿಯುವ ಸಾಧ್ಯತೆ ಇದೆ. ಭದ್ರಾ ಜಲಾಶಯದಿಂದ 3.4 ಟಿಎಂಸಿ ಅಡಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಮಳೆ ನೀರು ಸೇರಿ 11 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಕೃಷಿ ಹಾಗೂ ಕುಡಿಯುವ ಉದ್ದೇಶಕ್ಕೆ ಬಳಸಿದರೂ ಕನಿಷ್ಠ 5 ಟಿಎಂಸಿ ಅಡಿ ನೀರು ಜಲಾಶಯದಲ್ಲಿ ಉಳಿಯುತ್ತದೆ ಎಂದು ಮಾಹಿತಿ ನೀಡಿದರು.

ಸಚಿವರು, ಸಂಸದರ ಪಾತ್ರವೂ ಇದೆ: ಚಳ್ಳಕೆರೆ ತಾಲೂಕಿಗೆ ವಾಣಿವಿಲಾಸ ಸಾಗರ ಜಲಾಶಯದಿಂದ ಕುಡಿಯುವ ಉದ್ದೇಶಕ್ಕೆ 0.25 ಟಿಎಂಸಿ ನೀರು ಹರಿದು ಬರುವಲ್ಲಿ
ಸಂಸದ ಎ. ನಾರಾಯಣಸ್ವಾಮಿ ಅವರು ಜವಾಬ್ದಾರಿ ನಿಭಾಯಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಲಸಂಪನ್ಮೂಲ ಸಚಿವರು ಕೂಡ ಉತ್ತಮವಾಗಿ ಸ್ಪಂದಿಸಿದ್ದಾರೆ. ಮುಖ್ಯಮಂತ್ರಿಗಳು ಕೂಡಾ ಪಕ್ಷಾತೀತವಾಗಿ ನಡೆದುಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ನಡೆಯುವಾಗ ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ಅರಣ್ಯ ಭೂಮಿಗೆ ಪರ್ಯಾಯವಾಗಿ ಕಂದಾಯ ಭೂಮಿ ಕೇಳಿದಾಗ ಕೊಟ್ಟಿದ್ದು ಚಳ್ಳಕೆರೆಯ 1 ಸಾವಿರ ಎಕರೆ ಜಮೀನು. ರಾಷ್ಟ್ರೀಯ ಯೋಜನೆಗಳಿಗೆ ಕೂಡಾ ನಮ್ಮ ತಾಲೂಕಿನ 11,800 ಎಕರೆ ಭೂಮಿಯನ್ನು ನಮ್ಮ ತಾಲೂಕಿನಲ್ಲಿ ಕೊಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಚಿತ್ರದುರ್ಗ ತಾಪಂ ಅಧ್ಯಕ್ಷ ಡಿ.ಎಂ. ಲಿಂಗರಾಜು, ಜಿಪಂ ಸದಸ್ಯ ಪ್ರಕಾಶ್‌ಮೂರ್ತಿ, ಮಾಜಿ ಅಧ್ಯಕ್ಷ ರವಿಕುಮಾರ್‌, ಮಾಜಿ ಸದಸ್ಯ ಬಾಬುರೆಡ್ಡಿ ಇದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.