ಕೃಷಿ ಚಟುವಟಿಕೆಗಳಿಗೆ ಸಾಲ ಉತ್ತೇಜನ

ಹಳೆ ಪಹಣಿ ಪತ್ರ ಆಧಾರದಲ್ಲಿ ಸಾಲ; ನಾಲ್ಕು ಲಕ್ಷ ಹೊಸ ರೈತರಿಗೆ ಪ್ರಯೋಜನ

Team Udayavani, May 3, 2020, 6:10 AM IST

ಕೃಷಿ ಚಟುವಟಿಕೆಗಳಿಗೆ ಸಾಲ ಉತ್ತೇಜನ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೋವಿಡ್-19 ಮಹಾಮಾರಿ ಯಿಂದಾಗಿ ಬಹುತೇಕ ಚಟುವಟಿಕೆಗಳು ಸ್ತಬ್ಧಗೊಂಡಿದ್ದರೆ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ನಾಲ್ಕು ಲಕ್ಷ ಹೊಸ ರೈತರಿಗೆ ಸಾಲ ಒದಗಿಸುವ ಮೂಲಕ ಇದಕ್ಕೆ ಉತ್ತೇಜನ ನೀಡಲು ಸಹಕಾರ ಇಲಾಖೆ ನಿರ್ಧರಿಸಿದೆ.

ಹಳ್ಳಿಗಳಿಗೆ ಮರಳಿದ ಯುವಕರು ಮತ್ತು ಕಾರ್ಮಿಕರು ಕೃಷಿ ಚಟುವಟಿಕೆಗಳನ್ನು ನಡೆಸಲಿರುವು ದರಿಂದ ಈ ವರ್ಷ ಕೃಷಿ ಸಾಗುವಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಹಕಾರ ಇಲಾಖೆ ಅಂದಾಜಿಸಿದೆ. ಸಾಮಾನ್ಯವಾಗಿ ಪ್ರತೀ ವರ್ಷ ಎಪ್ರಿಲ್‌ ವೇಳೆಗೆ 7 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗುತ್ತಿದ್ದರೆ ಈ ವರ್ಷ ಇದು 16 ಸಾವಿರ ಹೆಕ್ಟೇರ್‌ಗೆ ಹೆಚ್ಚಿರುವುದು ಇದಕ್ಕೆ ಸಾಕ್ಷಿ.

ಈಗಾಗಲೇ ಸ್ವಂತ ಊರು ಸೇರಿಕೊಂಡಿರುವ ಕನಿಷ್ಠ ಶೇ.25 ಮಂದಿ ಕೋವಿಡ್-19 ಅಬ್ಬರ ನಿಂತ ಮೇಲೆ ಮತ್ತೆ ಮಹಾನಗರಗಳಿಗೆ ತೆರಳುವುದು ಅನುಮಾನ ಎಂದು ಸಹಕಾರ ಇಲಾಖೆ ಅಂದಾಜಿಸಿದೆ.

ಕೃಷಿ ಚಟುವಟಿಕೆಗಳಿಗೆ ಸಹಾಯ
ಹಳ್ಳಿಗೆ ಮರಳಿರುವವರು ಕೃಷಿ ಜತೆಗೆ ಉಪ ಕಸುಬುಗಳನ್ನು ಕೈಗೊಳ್ಳಬಹುದು. ಈ ಉಪ ವ್ಯವಹಾರ ಮಾಡುವ ವಾಹನ ಖರೀದಿಸಲು ಅವಕಾಶ ಕಲ್ಪಿಸಲು ಇಲಾಖೆ ನಿರ್ಧರಿಸಿದೆ. ಈ ವರ್ಷ ಕನಿಷ್ಟ ನಾಲ್ಕು ಲಕ್ಷ ಹೊಸ ರೈತರಿಗೆ ನೀಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ನಬಾರ್ಡ್‌ನಿಂದ ಸರಕಾರ ಹೆಚ್ಚುವರಿಯಾಗಿ 1,500 ಕೋ.ರೂ. ಸಾಲ ಪಡೆದಿದೆ.

ಸಭೆ ನಡೆಸದೆ ತೀರ್ಮಾನ
ಗ್ರಾಮೀಣ ಪ್ರದೇಶದ ಪ್ರಾಥಮಿಕ
ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ, ಪಿಕಾರ್ಡ್‌, ಲ್ಯಾಂಪ್ಸ್‌ ಮುಂತಾದ ಸಹಕಾರಿ ಬ್ಯಾಂಕ್‌ಗಳಿಂದ ಹಳೆಯ ಪಹಣಿ ಪತ್ರವನ್ನೇ ಆಧರಿಸಿ ಸಾಲ ನೀಡುವಂತೆ ಸೂಚಿಸಲಾಗಿದೆ. ಆಡಳಿತ ಮಂಡಳಿ ಸಭೆ ಸೇರಲು ಅವಕಾಶ ಇಲ್ಲದ್ದ ರಿಂದ ಸಭೆ ಸೇರದೆ ತೀರ್ಮಾನ ತೆಗೆದುಕೊಂಡು ನಿಗದಿತ ಸಮಯದಲ್ಲಿ ಸಾಲ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ನಗರದಿಂದ ಜನರು ಹಳ್ಳಿಗಳಿಗೆ ತೆರಳಿರುವುದರಿಂದ ಕೃಷಿ ಮತ್ತು ಕೃಷಿಪೂರಕ ಚಟುವಟಿಕೆ ಹೆಚ್ಚುವ ಅಂದಾಜು ಮಾಡಲಾಗಿದೆ. ಹೀಗಾಗಿ ಹೆಚ್ಚಿನ ಕೃಷಿ ಸಾಲ ನೀಡಲು ತೀರ್ಮಾನಿಸಲಾಗಿದೆ.
-ಆರ್‌.ಶಿವಪ್ರಕಾಶ್‌,
ಸಹಕಾರ ಸಂಘಗಳ ಅಪರ ನಿಬಂಧಕರು

-  ಶಂಕರ ಪಾಗೋಜಿ

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಸು ಟ್ರಕ್‌ ಟ್ರಮಿನಲ್‌ನಲ್ಲಿ ಅಕ್ರಮ ; ವಾರ್ತಾ ಇಲಾಖೆ ಅಧಿಕಾರಿ ಸೆರೆ

ಅರಸು ಟ್ರಕ್‌ ಟ್ರಮಿನಲ್‌ನಲ್ಲಿ ಅಕ್ರಮ ; ವಾರ್ತಾ ಇಲಾಖೆ ಅಧಿಕಾರಿ ಸೆರೆ

ಬಿಎಸ್‌ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಬಿಎಸ್‌ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರುದಾರೆ ಸಾವು

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.