ಹಾಸನಕ್ಕಿಲ್ಲ ಲಾಕ್‌ಡೌನ್‌ ಸಡಿಲಿಕೆ ಭಾಗ್ಯ

Team Udayavani, May 4, 2020, 5:13 PM IST

ಹಾಸನಕ್ಕಿಲ್ಲ ಲಾಕ್‌ಡೌನ್‌ ಸಡಿಲಿಕೆ ಭಾಗ್ಯ

ಹಾಸನ: ಜಿಲ್ಲೆ ಹಸಿರುವಲಯ ದಲ್ಲಿದ್ದರೂ ಲಾಕ್‌ಡೌನ್‌ ಸಂಪೂರ್ಣ ಸಡಿಲಿಕೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮತ್ತು ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ಆರ್‌.ಶ್ರೀನಿವಾಸಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಜಿಲ್ಲೆಯಲ್ಲಿ ವಾರದಲ್ಲಿ 3 ದಿನ ಅಂದರೆ ಮಂಗಳವಾರ, ಗುರುವಾರ, ಶನಿವಾರ ಮಾತ್ರ ಅಂಗಡಿಗಳು ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ವ್ಯಾಪಾರ ವಹಿವಾಟು ನಡೆಸ ಬೇಕು. ಮೇ 4ರಂದು ಮಾತ್ರ ಅಂಗಡಿಗಳನ್ನು ತೆರೆದು ಸಿದ್ಧತೆ ಮಾಡಿಕೊಳ್ಳಬಹುದು. ಮುಂದಿನ ವಾರದಿಂದ ಮೂರು ದಿನ ಮಾತ್ರ ವಹಿವಾಟು ನಡೆಸಬೇಕು ಎಂದು ಸೂಚಿಸಿದರು.

ವಾರದ ಎಲ್ಲಾ ದಿನ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ವಾಹನ ಸಂಚಾರ ಪ್ರತಿದಿನವೂ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ಮೇ 17ರ ವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದರು.

ಸಿಟಿಬಸ್‌, ಆಟೋ ಸಂಚಾರ: ಸೋಮವಾರ ( ಮೇ4) ದಿಂದ ಹಾಸನ ನಗರದಲ್ಲಿ ಪ್ರತಿದಿನವೂ ಸಿಟಿ ಬಸ್‌ ಸಂಚಾರ, ಆಟೋ ಸಂಚಾರಕ್ಕೆ ಅವಕಾಶವಿದೆ. ಪ್ರಯಾಣಿಕರ ಒತ್ತಡ ಆಧರಿಸಿ ಕೆಎಸ್‌ಆರ್‌ಟಿಸಿ ಬಸ್‌ಗಳ ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಕ್ಕೆ, ತಾಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಸಂಚರಿಸಲಿವೆ. ಬಸ್‌ಗಳಲ್ಲಿ ನಿಗದಿತ ಸಂಖ್ಯೆ ಶೇ.50 ರಷ್ಟು ಪ್ರಯಾಣಿಕರು ಮಾತ್ರ ಸಂಚರಿ ಸುವುದು ಕಡ್ಡಾಯ ಎಂದರು.

ಅಂತರ ಕಾಯ್ದುಕೊಳ್ಳದಿದ್ದರೆ ಕ್ರಮ: ಜವಳಿ ಅಂಗಡಿ, ಚಿನ್ನ-ಬೆಳ್ಳಿ ಅಂಗಡಿ, ಸಲೂನ್‌ ಸೇರಿ ದಂತೆ ಎಲ್ಲಾ ವಹಿವಾಟುಗಳೂ ವಾರದಲ್ಲಿ 3 ದಿನ ಮಾತ್ರ ಇರುತ್ತವೆ. ಮದ್ಯದಂಗಡಿಗಳೂ ವಾರದಲ್ಲಿ ಮೂರು ದಿನ ಬೆಳಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ವಹಿವಾಟು ನಡೆಸಬೇಕು. ಎಲ್ಲ ವರ್ತಕರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲಾ ಅಂಗಡಿಗಳ ವ್ಯಾಪಾರಿಗಳೂ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮದುವೆ ಸಮಾರಂಭದಲ್ಲಿ 50 ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಮದುವೆ ನಡೆಸುವ ಸ್ಥಳ ಸೇರಿದಂತೆ ಕಾರ್ಯಕ್ರಮಕ್ಕೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ 5 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಿಂದ ಹೊರ ಹೋಗುವವರು ಮೊದಲೇ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಸ್ವಂತ ವಾಹನದಲ್ಲಿ ಹೊರ ಜಿಲ್ಲೆಗೆ ಹೋಗುವವರು ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಪಾಸ್‌ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗಿರೀಶ್‌ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.