ಕಲಬುರಗಿ ; ಸುಡು ಬಿಸಿಲನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ ಮದ್ಯಪ್ರಿಯರು !
Team Udayavani, May 4, 2020, 7:49 PM IST
ಕಲಬುರಗಿ: ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಡಳಿತ ಅನುಮತಿ ಕೊಡುತ್ತಿದ್ದಂತೆ ಮದ್ಯ ಪ್ರಿಯರು ಎಣ್ಣೆ ಅಂಗಡಿಗಳ ಮುಂದೆ ಸಾಲು ಗಟ್ಟಿ ನಿಂತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಆರು ಜನರು ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದರೂ, ಹೆಮ್ಮಾರಿ ಸೋಂಕಿನ ಯಾವುದೇ ಭಯವಿಲ್ಲದೇ ಎಣ್ಣೆ ಅಂಗಡಿಗಳ ಮುಂದೆ ಸರತಿ ಸಾಲು ಕಟ್ಟಿದ್ದಾರೆ.