ನಿರ್ಬಂಧ ಸಡಿಲ: ಸಹಜ ಸ್ಥಿತಿಗೆ ಮರಳಿದ ಹರಪನಹಳ್ಳಿ

Team Udayavani, May 5, 2020, 6:40 PM IST

ನಿರ್ಬಂಧ ಸಡಿಲ: ಸಹಜ ಸ್ಥಿತಿಗೆ ಮರಳಿದ ಹರಪನಹಳ್ಳಿ

ಹರಪನಹಳ್ಳಿ: ಜನಸಂಚಾರ ಇಲ್ಲದೇ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದ ಹರಪನಹಳ್ಳಿ ಪಟ್ಟಣ ಸಹಜ ಸ್ಥಿತಿಗೆ ಮರಳುತ್ತಿರುವುದು ಎಲ್ಲರ ಮೊಗದಲ್ಲಿ ಸಂತಸ ಮೂಡಿಸಿದೆ.

ಕಳೆದ 43 ದಿನಗಳಿಂದ ಲಾಕ್‌ಡೌನ್‌ ಸೋಮವಾರ ನಿರ್ಬಂಧಗಳೊಂದಿಗೆ ಸಡಿಲವಾಗಿದ್ದು, ವೈನ್‌ಶಾಪ್‌ ಗಳು, ಮಾರುಕಟ್ಟೆ ಪ್ರಾರಂಭವಾಗಿದ್ದು, ವ್ಯಾಪಾರವಿಲ್ಲದೇ ಬಿಕೋ ಎನ್ನುತ್ತಿದ್ದ ಮಾರುಕಟ್ಟೆ, ವೈನ್‌ಶಾಪ್‌ಗ್ಳ ಮುಂದೆ ಸಾಮಾಜಿಕ ಅಂತರದ ಮೂಲಕ ಎಲ್ಲೆಡೆ ಜನಜಂಗುಳಿ ಕೂಡಿದೆ. ಕ್ಷೌರಿಕ ಅಂಗಡಿಗಳು ಹೊರತುಪಡಿಸಿ ಉಳಿದಂತೆ ವಾಣಿಜ್ಯ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದೆ. ಆದರೆ ಪಕ್ಕದ ದಾವಣಗೆರೆ ನಗರದಲ್ಲಿ  ಕೋವಿಡ್ 19 ಬೆಂಬಿಡದೇ ಕಾಡುತ್ತಿರುವುದು ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ.

ಷರತ್ತು ಸಡಿಲಗೊಳಿರುವ ಪೊಲೀಸರು ಪಟ್ಟಣದ ವಿವಿಧೆಡೆ ಹಾಕಲಾಗಿದ್ದ ಬ್ಯಾರಿಕೇಡ್‌ ತೆಗೆದು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಹೀಗಾಗಿ ಬಿಕೋ ಎನ್ನುತ್ತಿದ್ದ ರಸ್ತೆಗಳು ತುಂಬಿ ತುಳುಕುತ್ತಿವೆ. ಸಾರ್ವಜನಿಕರ ಓಡಾಟ ಮತ್ತು ವಾಹನಗಳ ಸಂಚಾರ ಎಂದಿನಂತೆ ಕಂಡು ಬಂತು. ವಿವಿಧ ಇಲಾಖೆಗಳ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ದೃಶ್ಯ ಕಂಡು ಬಂತು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಬಳಸುವಂತೆ ಸೂಚನೆ ಕೊಡಲಾಗಿದೆ.

ಹಾಲು, ಹಣ್ಣು, ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಬೆಳಗ್ಗೆ 7 ರಿಂದ ಬೆಳಗ್ಗೆ 11 ಗಂಟೆವರೆಗೆ ಮಾತ್ರ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಬಂಗಾರದ ಅಂಗಡಿ, ಬಟ್ಟೆ ಅಂಗಡಿ, ಬುಕ್‌ ಸ್ಟಾಲ್‌ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಬೆಳಗ್ಗೆ 9ರಿಂದ ಸಂಜೆ 7 ಗಂಟೆವರೆಗೆ ವಾಹನಗಳ ಸಂಚಾರ, ಸಾರ್ವಜನಿಕರ ಓಡಾಟಕ್ಕೆ ಅವಕಾಶ ನೀಡಿದ್ದರಿಂದ ಪಟ್ಟಣದಲ್ಲಿ ಮುಂಜಾನೆಯಿಂದಲೇ ತಮ್ಮ ತಮ್ಮ ಕೆಲಸದಲ್ಲಿ ತೊಡಗಿರುವುದು ಕಂಡು ಬಂತು. ಸಾರ್ವಜನಿಕರು ಸುಖಾಸುಮ್ಮನೆ ರಸ್ತೆಯಲ್ಲಿ ತಿರುಗಾಡುವಂತಿಲ್ಲ. ಅಂತಹವರ ವಾಹನ ವಶಕ್ಕೆ ಪಡೆಯಲಾಗುವುದು ಎಂದು ಉವಿಭಾಗಾಧಿಕಾರಿ ವಿ.ಕೆ.ಪ್ರಸನ್ನಕುಮಾರ್‌ ಎಚ್ಚರಿಸಿದ್ದಾರೆ.

ಮದ್ಯಪ್ರಿಯರು ಖುಷಿ: ಮದ್ಯದಂಡಿಗಳು ಬೆಳಗ್ಗೆ ಪ್ರಾರಂಭವಾಗುತ್ತಿದ್ದಂತೆ ಸರದಿ ಸಾಲಿನಲ್ಲಿ ನಿಂತುಕೊಂಡು ಮದ್ಯವನ್ನು ಖರೀದಿಸುತ್ತಿದ್ದ ದೃಶ್ಯ ಕಂಡು ಬಂತು. ಕೆಲವೆಡೆ ವಿಡಿಯೋ ಮಾಡಿಸಲಾಗುತ್ತಿತ್ತು. ಆದರೆ ಬಹುತೇಕ ಅಂಗಡಿಗಳಲ್ಲಿ ಹೆಚ್ಚಿನ ಮುಖಬೆಲೆಯ ಮದ್ಯ ಸ್ಟಾಕ್‌ ಇರಲಿಲ್ಲ. ಅಂತಹ ಅಂಗಡಿಗಳಿಗೆ ನಾಳೆ ಮದ್ಯ ಸರಬರಾಜು ಮಾಡಲಾಗುತ್ತದೆ. ಅಕ್ರಮ ಮಾರಾಟ ಮಾಡಿರುವುದು ಕಂಡು ಬಂದಿಲ್ಲ. ವೈನ್‌ ಶಾಪ್‌ ಬಳಿ ವಿಡಿಯೋ ಮಾಡಿರುವುದು ಗಮನಕ್ಕಿಲ್ಲ, ಇಲಾಖೆಯಿಂದ ಮಾಡಿಸಿಲ್ಲ ಎಂದು ಅಬಕಾರಿ ನಿರೀಕ್ಷಕ ಎನ್‌.ದಶರಥ ನಾಯ್ಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.