ಭಟ್ಕಳದಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಸೂಚನೆ

Team Udayavani, May 7, 2020, 6:22 PM IST

ಭಟ್ಕಳದಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಸೂಚನೆ

ಭಟ್ಕಳ: ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ಸಂಸದ ಅನಂತಕುಮಾರ್‌ ಹೆಗಡೆ ತಾಲೂಕು ಅಧಿಕಾರಿಗಳ ಸಭೆ ನಡೆಸಿದರಲ್ಲದೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಹಲವಾರು ಸಲಹೆ ಸೂಚನೆ ನೀಡಿದರು.

ಭಟ್ಕಳದಲ್ಲಿ ಕೋವಿಡ್‌-19 ಮತ್ತೆ ಮರುಕಳಿಸಿರುವುದರಿಂದ ನಗರದಲ್ಲಿ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮ, ಗಲ್ಲಿ ಗಲ್ಲಿಗಳಲ್ಲಿ ಜನ ಸಂಚಾರವಿದ್ದು, ಅದನ್ನು ತಡೆಯುವಲ್ಲಿ ಹೆಚ್ಚಿನ ಪೊಲೀಸ್‌ ಬಲ ತರಿಸುವ ಕುರಿತು ಸೂಚನೆ ನೀಡಿದ್ದಾರೆ. ಬಂದೋಬಸ್ತ್ ಮಾಡಲು ಜಿಲ್ಲೆಯ ಪಿಎಸ್‌ಐಗಳನ್ನು ಕರೆಯಿಸಿಕೊಳ್ಳಿ, ಅಗತ್ಯ ಬಿದ್ದರೆ ಹೆಚ್ಚಿನ ಪಡೆಗಳನ್ನು ಕಳುಹಿಸುವ ಕುರಿತೂ ಪ್ರಸ್ತಾಪಿಸಿದ್ದಾರೆ.

ಕೋವಿಡ್‌-19 ಪ್ರಕರಣ ಏರಿಕೆ ಆಗುತ್ತಿರುವುದರಿಂದ ಸೋಂಕು ತಡೆಗಟ್ಟಲು ಮತ್ತು ಹರಡದಿರಲು ಲಾಕ್‌ ಡೌನ್‌ ಬಿಗಿಗೊಳಿಸಿ ಅನಾವಶ್ಯಕವಾಗಿ ಯಾರೂ ತಿರುಗಾಡದಂತೆ ನಿಗಾ ವಹಿಸಬೇಕು. ಚೆಕ್‌ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಎಲ್ಲ ವಾಹನಗಳನ್ನು ತಪಾಸಣೆ ನಡೆಸಬೇಕು. ಭಟ್ಕಳ ಕಂಟೈನ್‌ಮೆಂಟ್‌ ಜೋನ್‌ ಆಗಿರುವುದರಿಂದ ಪಟ್ಟಣಕ್ಕೆ ಬೇರೆ ಜಿಲ್ಲೆ, ರಾಜ್ಯದಿಂದ ಬಂದವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಬೇಕು ಎಂದು ಸೂಚಿಸಿದರು.

ಪುರಸಭೆ ಮತ್ತು ಜಾಲಿ ಪಪಂನಲ್ಲಿ ಮರಣ ಪ್ರಮಾಣ ಪತ್ರ ನೀಡುವುದರ ಮೊದಲು ಕಂದಾಯ ಮತ್ತು ಪೊಲೀಸ್‌ ಇಲಾಖೆಯಿಂದ ಮಾಹಿತಿ ತರಿಸಿಕೊಳ್ಳಬೇಕು. ಪಟ್ಟಣದಲ್ಲಿ ಏನೇ ಆದರೂ ಪೊಲೀಸ್‌, ಆರೋಗ್ಯ, ಕಂದಾಯ ಇಲಾಖೆ ಗಮನಕ್ಕೆ ಬರಬೇಕು ಎಂದೂ ಹೇಳಿ, ಯಾವುದನ್ನಾದರು ಮರೆ ಮಾಚಲು ಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದರೆನ್ನಲಾಗಿದೆ.

ಕೋವಿಡ್‌-19 ಸೋಂಕು ನಿಯಂತ್ರಣಕ್ಕೆ ತರಲು ಇದೆಲ್ಲ ಕ್ರಮ ಸದ್ಯಕ್ಕೆ ಅನಿವಾರ್ಯವಾಗಿದೆ ಎಂದ ಅವರು, ಯಾರೇ ಆಗಲಿ ಶಾಸಕರ, ಮಂತ್ರಿಗಳ ಒತ್ತಡ ತಂದರೂ ಕೂಡಾ ಅದಕ್ಕೆ ಮಣೀಯದೇ ಕಾನೂನು ಪಾಲನೆ ಮಾಡಬೇಕು. ಯಾವುದೇ ಸಂದಿಗ್ಧ ಪರಿಸ್ಥಿತಿ ಉಂಟಾದಲ್ಲಿ ತಮ್ಮನ್ನು ಸಂಪರ್ಕಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ಕಾನೂನು ಪಾಲನೆಯಾಗದೇ ಇದ್ದರೆ ಮುಂದೆ ಅಪಾಯ ತಪ್ಪಿದ್ದಲ್ಲ ಎಂದು ಹೇಳಿದರು.

ಶಾಸಕ ಸುನೀಲ ನಾಯ್ಕ, ಎಸಿ ಭರತ್‌ ಎಸ್‌., ತಾಲೂಕಿನ ಹಿರಿಯ ಅಧಿಕಾರಿಗಳು, ನೋಡಲ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.