ಮೂಲಭೂತ ಸೌಲಭ್ಯ ಒದಗಿಸಲು ಹೆಚ್ಚು ಆದ್ಯತೆ


Team Udayavani, May 8, 2020, 6:46 PM IST

ಮೂಲಭೂತ ಸೌಲಭ್ಯ ಒದಗಿಸಲು ಹೆಚ್ಚು ಆದ್ಯತೆ

ತುಮಕೂರು: ತುಮಕೂರು ಮಹಾನಗರಪಾಲಿಕೆಯ 2020-21ನೇ ಸಾಲಿನ ಆಯ-ವ್ಯಯ ಸಭೆಯಲ್ಲಿ 3.81 ಕೋಟಿ ರೂ. ಉಳಿತಾಯ ಬಜೆಟನ್ನು ಹಣಕಾಸು ಮತ್ತು ತೆರಿಗೆ ನಿರ್ಧರಣೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಎಂ. ಮಹೇಶ್‌ ಮಂಡನೆ ಮಾಡಿದ್ದು ಕೋವಿಡ್ 19  ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಹಸಿರು ಬಜೆಟ್‌ ಘೋಷಣೆಯಡಿಯಲ್ಲಿ ರಾಜ್ಯದಲ್ಲೇ 6ನೇ ಬಾರಿಗೆ ಕಾಗದ ರಹಿತ ಇ-ಬಜೆಟ್‌ ಮಂಡನೆ ಮಾಡಿದರು.

ಈ ಆಯವ್ಯಯದಲ್ಲಿ ಆರಂಭಿಕ ಶಿಲ್ಕು 2601.45 ಲಕ್ಷ ರೂ. ಸೇರಿ 22804.77ಲಕ್ಷ ರೂ.ಗಳ ಅಂದಾಜು ಸ್ವೀಕೃತಿ ಹಣದಲ್ಲಿ 2020-21 ಸಾಲಿಗಾಗಿ 22,423,37 ಲಕ್ಷ ರೂ. ಗಳ ಅಂದಾಜು ವೆಚ್ಚ ಮಾಡಲು ಬಜೆಟ್‌ ಮಂಡನೆ ಮಾಡಲಾಗಿದ್ದು, 381.40 ಲಕ್ಷ ರೂ.ಗಳು ಉಳಿತಾಯದಲ್ಲಿದೆ. ನಗರ ನಿವಾಸಿಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸುವಲ್ಲಿ ಹೆಚ್ಚು ಪ್ರಾಧಾನ್ಯತೆಯನ್ನು ನೀಡಲಾಗಿದೆ ಎಂದು ಹೇಳಿದರು.

ಈ ವರ್ಷದ ಆಯವ್ಯಯದಲ್ಲಿ ನಗರದ ಜನತೆಗೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಿಲ್ದಾಣ, ವ್ಯವಸ್ಥಿತವಾದ ಪಾರ್ಕಿಂಗ್‌, ಸುಸಜ್ಜಿತ ಗ್ರಂಥಾಲಯ ಕಟ್ಟಡ, ಸ್ಮಾರ್ಟ್‌ ಲಾಂಜ್‌ ನಿರ್ಮಾಣ, ಪಾರ್ಕ್‌ ಮತ್ತು ರಸ್ತೆ ನಿರ್ಮಾಣ, ಮಹಾತ್ಮ ಗಾಂಧಿ ಕ್ರೀಡಾಂಗಣ ನವೀಕರಣದೊಂದಿಗೆ ಕುಡಿಯುವ ನೀರು, ಉತ್ತಮ ಆರೋಗ್ಯ, ಸ್ವತ್ಛ ತುಮಕೂರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ, ಉದ್ಯಾನವನಗಳ ಅಭಿವೃದ್ಧಿ, ಮತ್ತಿತರ ಸಾರ್ವಜನಿಕ ಸಹಭಾಗಿತ್ವದ ಅಭಿವೃದ್ಧಿ ಕೆಲಸವನ್ನು ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಪಾಲಿಕೆಯಿಂದ ಒಟ್ಟು 20203.32ಲಕ್ಷಗಳ ಸ್ವೀಕೃತಿಯನ್ನು ನಿರೀಕ್ಷಿಸಲಾಗಿದ್ದು, ಈ ಪೈಕಿ ಸ್ವಂತ ಸಂಪನ್ಮೂಲಗಳಿಂದ 6150.39ಲಕ್ಷ ರೂ. ಹಾಗೂ ಸರ್ಕಾರದ ಅನುದಾನಗಳಿಂದ 14052.93ಲಕ್ಷ ರೂ.ಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಪಾಲಿಕೆಯ ಮೇಯರ್‌ ಫ‌ರೀದಾ ಬೇಗಂ, ಉಪಮಹಾಪೌರರಾದ ಶಶಿಕಲಾ ಗಂಗಹನುಮಯ್ಯ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪಾಲಿಕೆ ಎಲ್ಲಾ ವಾರ್ಡ್‌ಗಳ ಸದಸ್ಯರು ಇದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.