ಅನ್ನದಾತನಿಗೆ ಶೂಲವಾಯ್ತು “ಬೆಳೆ’ ಸಾಲ!

Team Udayavani, May 9, 2020, 7:14 AM IST

ಅನ್ನದಾತನಿಗೆ ಶೂಲವಾಯ್ತು “ಬೆಳೆ ’ಸಾಲ!

ಸಾಂದರ್ಭಿಕ ಚಿತ್ರ

ಶಿರಸಿ: ಕೋವಿಡ್‌-19ರ ಕಷ್ಟದಲ್ಲಿದ್ದ ರಾಜ್ಯದ ಅನ್ನದಾತರಿಗೆ ಕಳೆದ ವರ್ಷ ಪಡೆದ ಬೆಳೆ ಸಾಲದ ಮರುಪಾವತಿ ಅವಧಿಯನ್ನು ರಾಜ್ಯ ಸರಕಾರ ಜೂ. 30 ಎಂದು ಆದೇಶ ಮಾಡಿದ್ದರೆ, ಬಡ್ಡಿ ಮನ್ನಾಕ್ಕೆ ಸರಕಾರದ ಜೊತೆ ಅರ್ಧ ಬಡ್ಡಿ ಹಣ ಪಾವತಿಸುವ ನಬಾರ್ಡ್‌ ಪಾವತಿಯ ಅವಧಿಯನ್ನು ಮೇ 30ಕ್ಕೇ ಅಖೈರುಗೊಳಿಸಿ ಆದೇಶಿಸಿದೆ. ಇಬ್ಬರ ನಡುವಿನ ಗೊಂದಲ ಈಗ ಕಷ್ಟದಲ್ಲಿದ್ದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ರಾಜ್ಯದಲ್ಲಿನ ಬಹುತೇಕ ಭತ್ತ, ಅಡಿಕೆ, ತೆಂಗು, ಅನಾನಸ್‌, ಕೊಕ್ಕೋ, ಕಾಳು ಮೆಣಸು, ರಾಗಿ, ಜೋಳ, ಮೆಣಸು ಸೇರಿದಂತೆ ಅನೇಕ ಬೆಳೆಗಾರರು ಬೆಳೆ ಸಾಲ ಪಡೆಯುತ್ತಾರೆ. ರಾಜ್ಯ ಸರಕಾರ 3 ಲಕ್ಷ ರೂ. ತನಕ ಶೂನ್ಯ ಬಡ್ಡಿಯಲ್ಲಿ ಕೊಡಿಸಿ ಬೆಳೆಗಾರರ ಕಷ್ಟಕ್ಕೆ ನೆರವಾಗುತ್ತಿತ್ತು. ರಾಜ್ಯ ಸರಕಾರ ಶೇ. 6.4 ಹಾಗೂ ಕೇಂದ್ರ ಸರಕಾರ ನಬಾರ್ಡ್‌ ಮೂಲಕ ಶೇ. 5 ಬಡ್ಡಿಯನ್ನು ನೀಡುತ್ತಿತ್ತು. ಇದರಿಂದ ರೈತರಿಗೆ ಮೂರು ಲಕ್ಷ ರೂ. ತನಕ ಶೂನ್ಯ ಬಡ್ಡಿ ಲಭಿಸುತ್ತಿತ್ತು. ಆದರೆ, ಈ ಬಾರಿಯ ಕೋವಿಡ್‌ ಸಮಸ್ಯೆಯಿಂದ ಈ ಬೆಳೆಸಾಲ ಮರುಪಾವತಿ ಅವಧಿ ವಿಸ್ತರಿಸಲಾಗಿತ್ತು. ರಾಜ್ಯ ಸರಕಾರ ಜೂ. 30ಕ್ಕೆ ಮುಂದೂಡಿತ್ತು. ಇದರಿಂದ ಕೊಂಚ ನಿರಾಳತೆ ಅನುಭವಿಸುವ ಮಧ್ಯೆ ನಬಾರ್ಡ್ ನ ಹೊಸ ಆದೇಶ ಸಂಕಷ್ಟಕ್ಕೆ ದೂಡಿದೆ.

ಅವಧಿ ಮೀರಿ ಬೆಳೆಸಾಲ ಪಾವತಿಸಿದ ರೈತ ಸಾಲ ಪಡೆದ ದಿನಾಂಕದಿಂದಲೂ ಪೂರ್ಣ ಪ್ರಮಾಣದ ಬಡ್ಡಿ ಕಟ್ಟಬೇಕಾಗುತ್ತದೆ. ಬಡ್ಡಿ ರಹಿತ ಅಸಲು ಪಾವತಿಗೆ ಕೇವಲ 25 ದಿನಗಳಿದ್ದಾಗ ನಬಾರ್ಡ್‌ ಈ ಆದೇಶ ಹೊರಡಿಸಿದ್ದು, ರೈತರನ್ನು ಬಾಣಲೆಯಿಂದ ಬೆಂಕಿಗೆ ದೂಡಿದೆ.

ಈಗಾಗಲೇ ಈ ಗೊಂದಲಗಳನ್ನು ಬಗೆಹರಿಸುವಂತೆ ನಬಾರ್ಡ್‌ ಹಾಗೂ ಅಫೆಕ್ಸ್‌ ಬ್ಯಾಂಕ್‌ಗೂ ಮನವಿ ಮಾಡಿದ್ದೇವೆ. ಆದಷ್ಟು ಶೀಘ್ರ ಇತ್ಯರ್ಥವಾದರೆ ರೈತರಿಗೂ, ಸಹಕಾರಿ ಸಂಘಗಳಿಗೂ ಅನುಕೂಲ. –ಎಸ್‌.ಪಿ. ಚೌಹಾಣ, ಕೆಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ, ಶಿರಸಿ

ರಾಜ್ಯ ಸರಕಾರ ಹಾಗೂ ನಬಾರ್ಡ್‌ ನಡುವೆ ಸಮನ್ವಯ ಸಾಧಿಸಿ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸೂಚಿಸುತ್ತೇನೆ. –ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್‌

-ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.