ಕೋವಿಡ್ ಯೋಧ ಪೊಲೀಸ್ ಸಿಬ್ಬಂದಿಗಳಿಗೆ ‘ಹೂ’ ಸಿಂಚನ
ಕೋವಿಡ್ ಸೋಂಕು ಹಿನ್ನಲೆಯಲ್ಲಿ ವಿಧಿಸಲಾಗಿರುವ ಲಾಕ್ ಡೌನ್ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಹಗಲಿರುಳೆನ್ನದೆ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರಿನಲ್ಲಿ ಸಾರ್ವಜನಿಕರು ರಸ್ತೆಯಲ್ಲೇ ಹೂ ಮಳೆ ಸುರಿಸಿ ಗೌರವ ಸಲ್ಲಿಸಿದರು.