ವೇದಾಂತ ಕಂಪನಿಯಿಂದ ಡ್ರೋಣ್‌-ಟ್ಯಾಬ್‌ ಹಸ್ತಾಂತರ

ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಜಿಲ್ಲೆಯ ಜನತೆಯ ಚಲನಚಲನದ ಮೇಲೆ ನಿಗಾ ಇಡಲು ಸಹಕಾರಿ

Team Udayavani, May 12, 2020, 10:31 AM IST

Vedant

ಚಿತ್ರದುರ್ಗ: ವೇದಾಂತ ಕಬ್ಬಿಣದ ಅದಿರು ಸಂಸ್ಥೆಯಿಂದ ಪೊಲೀಸ್‌ ಇಲಾಖೆಗೆ ಡ್ರೋಣ್‌ ಕ್ಯಾಮೆರಾ ಹಸ್ತಾಂತರಿಸಲಾಯಿತು.

ಚಿತ್ರದುರ್ಗ: ಜನರ ಚಲನವಲನಗಳ ಮೇಲೆ ಕಣ್ಣಿಡಲು ಪೊಲೀಸ್‌ ಇಲಾಖೆಗೆ ನೆರವಾಗುವ ಉದ್ದೇಶದಿಂದ ವೇದಾಂತ ಕಬ್ಬಿಣದ ಅದಿರು ಸಂಸ್ಥೆಯಿಂದ ಡ್ರೋಣ್‌ ಕ್ಯಾಮೆರಾ ಹಾಗೂ ಟ್ಯಾಬ್‌ ನೀಡಲಾಯಿತು. ಈ ವೇಳೆ ಮಾತನಾಡಿದ ಸಂಸ್ಥೆಯ ಕರ್ನಾಟಕ ಸಿಎಸ್‌ಆರ್‌ ಸದಸ್ಯ ರವಿ ನಾಯಕ್‌, ವೇದಾಂತ ಸಂಸ್ಥೆ ಸಾಧ್ಯವಿರುವ ಎಲ್ಲ ವಿಧಾನಗಳ ಮೂಲಕ ಎಲ್ಲ ಪಾಲುದಾರರ ಮತ್ತು ಸಮುದಾಯಗಳ ರಕ್ಷ‌ಣೆ ಮತ್ತು ಸುರಕ್ಷ‌ತೆಗಾಗಿ ಅವಿರತವಾಗಿ ಶ್ರಮಿಸುತ್ತಿದೆ. ಸಾಮಾಜಿಕ ಅಂತರದ ನಿಯಮಗಳು ಜಾರಿಯಲ್ಲಿರುವಾಗ, ಡಿಜೆಐ ಮ್ಯಾವಿಕ್‌ 2 ಪ್ರೊ ಡ್ರೋಣ್‌ ಕ್ಯಾಮೆರಾ ಚಿತ್ರದುರ್ಗ ಜಿಲ್ಲೆಯ ದೊಡ್ಡ ಪ್ರದೇಶದ ಎಸ್ಪಿ ಕಚೇರಿಗೆ ನೇರ ವೈಮಾನಿಕ ನೋಟವನ್ನು ಒದಗಿಸುತ್ತದೆ. ಇದು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಗರಿಷ್ಠ 65 ಕಿಮೀ ವೇಗ ಮತ್ತು ಗರಿಷ್ಠ ಟೇಕಾಫ್‌ ಎತ್ತರ 5000 ಮೀಟರ್‌ ಸಾಮರ್ಥ್ಯ ಹೊಂದಿದೆ. ಇದು ಅ ಧಿಕಾರಿಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.

ಸಿಇಒ ಸೌವಿಕ್‌ ಮಜುಂದಾರ್‌ ಮಾತನಾಡಿ, ಸಂಕಟದ ಸಂದರ್ಭದಲ್ಲಿ ಸಮುದಾಯವನ್ನು ಬೆಂಬಲಿಸುವಲ್ಲಿ ವೇದಾಂತ ಸಂಸ್ಥೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡ್ರೋಣ್‌ ಕ್ಯಾಮೆರಾ ಜನರ ಸಂಚಾರವನ್ನು ಸಮರ್ಥವಾಗಿ ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸಹಕಾರಿಯಾಗಲಿದೆ. ಈ ಮೂಲಕ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕ ಕೃಷ್ಣಾ ರೆಡ್ಡಿ ಮಾತನಾಡಿ, ಕೋವಿಡ್  ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಡುವವರಿಗೆ ಬೆಂಬಲ ನೀಡಿದ್ದೇವೆ. ಜಿಲ್ಲೆಯ ಜನತೆಗೆ ಸುರಕ್ಷಿತ ವಾತಾವರಣ ಒದಗಿಸುವ ಉದ್ದೇಶದಿಂದ ಅಗತ್ಯ ನೆರವನ್ನು ಸಾಧ್ಯವಾದ ರೀತಿಯಲ್ಲಿ ನಮ್ಮ ಸಂಸ್ಥೆಯ ಸಿಎಸ್‌ಆರ್‌ ನೀಡಲಾಗಿದೆ. ಈಗ ಒದಗಿರುವ ಕಠಿಣ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದೇವೆ. ಇದರ ಭಾಗವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ 1 ಕೋಟಿ ರೂ. ದೇಣಿಗೆ ನೀಡಿದ್ದೇವೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಕೋವಿಡ್‌-19 ಚಿಕಿತ್ಸಾ ವಿಭಾಗದಲ್ಲಿ ಅಳವಡಿಸಲು 10 ಐಸಿಯು ಕೋಟ್‌ಗಳು ಮತ್ತು 10 ಮಲ್ಟಿ-ಪ್ಯಾರಾ ಮಾನಿಟರ್‌ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದೇವೆ. ಕೋವಿಡ್‌  -19 ರೋಗದ ವಿರುದ್ಧ ರಾಷ್ಟ್ರವ್ಯಾಪಿ ಹೋರಾಟವನ್ನು ಬೆಂಬಲಿಸುವ ಕೆಲವು ಉಪಕ್ರಮಗಳನ್ನು ವೇದಾಂತ ಯೋಜಿಸಿದೆ. ಗೋವಾ, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ಹೆಚ್ಚಿನ ಉಪಕ್ರಮಗಳ ಅನುಷ್ಠಾನವನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ಡ್ರೋಣ್‌ ಕ್ಯಾಮೆರಾ ಪಡೆದುಕೊಂಡರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.